ವಾಷಿಂಗ್ಟನ್ ಡಿಸಿ: ಅಪ್ಪಟ ಕನ್ನಡ ಸೊಗಡಿನ ‘ಕಾಂತಾರ’ ಚಿತ್ರವನ್ನು ನಿರ್ದೇಶಿಸಿ ದೇಶ ವಿದೇಶದಲ್ಲಿ ಜನಪ್ರಿಯತೆ ಗಳಿಸಿದ ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರಾದ ರಿಷಬ್ ಶೆಟ್ಟಿ ಅವರಿಗೆ ಇತ್ತೀಚೆಗೆ ಅಮೆರಿಕ ಕನ್ನಡಿಗರು ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪ್ರದಾನ ಮಾಡಿದ್ದರು.
ರಿಷಬ್ ಶೆಟ್ಟಿ ತಮ್ಮ ಪತ್ನಿ ಪ್ರಗತಿ ಶೆಟ್ಟಿ ಜೊತೆಗೂಡಿ ವಾಷಿಂಗ್ಟನ್ ನಗರದ ಪ್ಯಾರಾಮೌಂಟ್ ಥಿಯೇಟರ್ ಗೆ ತೆರಳಿ ಪ್ರಶಸ್ತಿ ಸ್ವೀಕರಿಸಿದರು.ವಾಷಿಂಗ್ಟನ್
ರಾಜ್ಯದ ಕನ್ನಡಿಗರಾದ ಮನು ಗೌರವ್ ಮತ್ತು ತಂಡದವರು, ಸಿಯಾಟಲ್ನಲ್ಲಿರುವ ಸಹ್ಯಾದ್ರಿ ಕನ್ನಡ ಸಂಘ ರಿಷಬ್ ಶೆಟ್ಟಿ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಿದೆ.
ರಿಷಬ್ ಶೆಟ್ಟಿ ಅವರಿಗೆ ಎಲ್ಲಿ ಹೋದರಲ್ಲಿ ಅಭಿಮಾನಿಗಳಿದ್ದಾರೆ. ಚಿಕ್ಕ ಮಕ್ಕಳಿಂದ ಹಿಡಿದು ಯುವಜನತೆ, ವಯಸ್ಕರು, ಮಹಿಳೆಯರು, ಇಳಿ ವಯಸ್ಸಿನವರು ಅವರನ್ನು ಇಷ್ಟಪಡುತ್ತಾರೆ.
ಪಂಚೆಯಲ್ಲಿ ಮಿಂಚಿದ ಕುಂದಾಪ್ರ ಶೆಟ್ರು: ಪ್ಯಾಂಟ್ ಬದಲಿಗೆ ಪಂಚೆ ಸಾಮಾನ್ಯವಾಗಿ ಕರಾವಳಿ ಕನ್ನಡಿಗ ಪುರುಷರ ಅಚ್ಚುಮೆಚ್ಚಿನ ಉಡುಪು. ಸಮಾರಂಭಗಳಲ್ಲಿ ಸಾಮಾನ್ಯವಾಗಿ ಪಂಚೆಗಳನ್ನೇ ಧರಿಸುತ್ತಾರೆ. ಇತ್ತೀಚೆಗೆ ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ಅವರು ಸಿನಿಮಾ ಸಮಾರಂಭಗಳಿಗೆ ಧರಿಸುವ ಪಂಚೆ ಬಹುತೇಕರ ಫೇವರಿಟ್ ಆಗಿದೆ.
ರಿಷಬ್ ಶೆಟ್ಟಿಯವರು ದೊಡ್ಡ ದೊಡ್ಡ ಸಮಾರಂಭಗಳಲ್ಲಿ ಪಂಚೆ ಧರಿಸಿ ಮಿಂಚುವುದುಂಟು. ವಿಶ್ವ ಶ್ರೇಷ್ಟ ಕನ್ನಡಿಗ ಪ್ರಶಸ್ತಿ ಸ್ವೀಕರಿಸಲು ಅಮೆರಿಕಕ್ಕೂ ಪಂಚೆ ಧರಿಸಿಕೊಂಡೇ ಹೋಗಿದ್ದಾರೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…