ಚಿತ್ರ ಮಂಜರಿ

ಯಶ್‌ ಗೆ ನಾಯಕಿ ಆಗ್ತಾರಾ ಸಾಯಿ ಪಲ್ಲವಿ ?

ರಾಕಿಂಗ್ ಸ್ಟಾರ್‌ ಯಶ್‌ ಅವರ ಮುಂದಿನ ಸಿನಿಮಾಗಾಗಿ ಸಿನಿಪ್ರಿಯರು ಒಂದುವರೆ ವರ್ಷಗಳಿಂದ ಕಾದು ಕುಳಿತಿದ್ದಾರೆ. ಈ ನಡುವೆ ರಾಕಿ ಬಾಯ್‌ ಸಿನಿಮಾ ಬಗ್ಗೆ ಆಗಾಗ ಗಾಳಿಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಒಂದು ಸುದ್ದಿ ಗಾಂಧಿ ನಗರದ ಗಲ್ಲಿಗಳಲ್ಲಿ ಹರಿದಾಡುತ್ತಿದೆ.

ಯಶ್‌ ಅವರ ಮುಂದಿನ ಸಿನಿಮಾದಲ್ಲಿ ನಟಿ ಸಾಯಿಪಲ್ಲವಿ ನಾಯಕಿಯಾಗಿ ಆಯ್ಕೆಯಾಗಿದ್ದು, ಈ ಮೂಲಕ ಚಂದನವನಕ್ಕೆ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ.

ಮೊನ್ನೆಯಷ್ಟೇ ರಾಕಿ ಬಾಯ್‌ ತಮ್ಮ ಇನ್ಸ್ಟಾಗ್ರಾಮ್‌ ಪ್ರೋಫೈಲ್‌ ಫೋಟೋ ಬದಲಿಸಿದ್ದರು. ಇದರಿಂದ ಅಭಿಮಾನಿಗಳಲ್ಲಿ ಯಶ್‌ ತಮ್ಮ ಮುಂದಿನ ಚಿತ್ರದ ಅಪ್ಡೇಟ್‌ ನೀಡಿದ್ದಾರಾ ? ಎಂಬ ಕುತೂಹಲ ಮೂಡಿತ್ತು. ನಂತರ ಯಶ್‌ ಅವರು ಮತ್ತೊಂದು ಪೋಸ್ಟ್‌ ಹಂಚಿಕೊಂಡಿದ್ದು, ಡಿಸೆಂಬರ್‌ 8 ಕ್ಕೆ ತಮ್ಮ ಮುಂದಿನ ಸಿನಿಮಾದ ಟೈಟಲ್‌ ಅನೌನ್ಸ್‌ ಮಾಡುವುದಾಗಿ ತಿಳಿಸಿದ್ದರು. ಇದರಿಂದ ಸಿನಿ ರಸಿಕರು ಫುಲ್‌ ಖುಷ್‌ ಆಗಿದ್ದರು.

ಯಶ್‌ ಅವರು ಅಪ್ಲೋಡ್‌ ಮಾಡಿದ್ದ ಇಸ್ಟಾಗ್ರಾಮ್‌ ಪ್ರೊಫೈಲ್‌ ಫೋಟೋದಿಂದ ಯಶ್‌ 19 ಬಗ್ಗೆ ಮತ್ತೆ ಚರ್ಚೆ ಶುರುವಾಗಿತ್ತು. ಲೋಡಿಂಗ್‌ ಎಂಬ ಬರಹವಿರುವ ಫೋಟೊವನ್ನು ಯಶ್‌ ಅವರು ಅಪ್‌ಲೋಡ್‌ ಮಾಡಿದ್ದರು. ಈ ಫೋಟೊ ಮೂಲಕ ಯಶ್‌ ತಮ್ಮ ಮುಂದಿನ ಸಿನಿಮಾ ಅಪ್ಡೇಟ್‌ ನೀಡಿದ್ದಾರಾ ಎಂಬ ಕುತೂಹಲ ಮೂಡಿತ್ತು.

ಯಶ್‌ ಅವರ ಮುಂದಿನ ಸಿನಿಮಾದ ಟೈಟಲ್‌ ಅನೌನ್ಸ್‌ಮೆಂಟ್‌ ಗಾಗಿ ಅಭಿಮಾನಿಗಳು ಬಹಳಾ ಉತ್ಸಾಹದಿಂದ ಎದುರುನೋಡುತ್ತಿದ್ದಾರೆ. ಈ ನಡುವೆ ಸಾಯಿ ಪಲ್ಲವಿ ಅವರು ಯಶ್‌ ಅವರ ಮುಂದಿನ ಚಿತ್ರಕ್ಕೆ ನಾಯಕಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಚಿತ್ರ ತಂಡದಿಂದ ಅಧಿಕೃತ ಮಾಹಿತಿ ಹೊರಬರಬೇಕಿದೆ.

lokesh

Recent Posts

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

4 mins ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

1 hour ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

2 hours ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

2 hours ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

2 hours ago

ಮುಡಾ ಪ್ರಕರಣ | ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ಜ.15ಕ್ಕೆ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಜನವರಿ…

3 hours ago