ಸ್ಯಾಂಡಲ್‌ವುಡ್ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಒಂದಲ್ಲಾ ಒಂದು ಸುದ್ದಿಯಲ್ಲಿ ಪ್ರಚಲಿತರಾಗಿಯೇ ಇರುತ್ತಾರೆ. ತಮಗೆ ಅನಿಸಿದ್ದನ್ನು ಯಾರಾ ಉಲಾಜು ಇಲ್ಲದೇ ವ್ಯಕ್ತಪಡಿಸುವ ಅವರು, ಇದೀಗ ಮೈಸೂರು ವಿಮಾನ ನಿಲ್ದಾಣಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಬೆಳಗಾವಿಯ ಚಳಿಗಾಲದ ಅಧಿವೇಶನದ ಸದನದಲ್ಲಿ ಕಾಂಗ್ರೆಸ್ ಹಲವು ನಾಯಕರು ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಬೇಕು ಎಂದು ಪ್ರಸ್ತಾಪಿಸಿದ್ದು, ಈ ಬಗ್ಗೆ ನಟ ಚೇತನ್ ಅಹಿಂಸಾ ಪ್ರತಿಕ್ರಿಯೆ ನೀಡಿದ್ದು, ʼಮೈಸೂರು ಏರ್‌ಪೋರ್ಟ್‌ಗೆ ಟಿಪ್ಪು ಸುಲ್ತಾನ್ ಹೆಸರಿಡುವುದು ತಪ್ಪೇನಿಲ್ಲʼ ಎಂದು ಹೇಳಿದ್ದಾರೆ.
ಚೇತನ್ ಟ್ವೀಟ್‌ನಲ್ಲಿ ಏನಿದೆ? : “ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡಬೇಕಾ? ಸರ್ಕಾರಿ ಕಟ್ಟಡಗಳಿಗೆ ಯೋಧರಿಗಿಂತ ಹೆಚ್ಚಾಗಿ ಅಹಿಂಸೆಯ ಐಕಾನ್ಗಳ ಹೆಸರನ್ನು ಇಡಬೇಕೆಂದು ನಾನು ಭಾವಿಸುತ್ತೇನೆ; ಆದಾಗ್ಯೂ, ಟಿಪ್ಪುವಿನ ಜನ್ಮಸ್ಥಳವಾದ ದೇವನಹಳ್ಳಿಯಲ್ಲಿರುವ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಯೋಧ ಕೆಂಪೇಗೌಡರ ಹೆಸರನ್ನು ಇಡಲಾಗಿದೆ. ಆ ನಿದರ್ಶನದ ಪ್ರಕಾರ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವುದರಲ್ಲಿ ತಪ್ಪೇನಿಲ್ಲ” ಎಂದು ತಮ್ಮ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಎಕ್ಸ್‌ನಲ್ಲಿ ಮತ್ತೊಂದು ಪೋಸ್ಟ್
ಇಬ್ಬರು ಯೋಧರ ಕಥೆ
1. ಕೆಂಪೇಗೌಡ — ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ
2. ಟಿಪ್ಪು ಸುಲ್ತಾನ್ — ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ, ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ
ದುರದೃಷ್ಟವಶಾತ್, ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ.
ನಟ ಚೇತನ್ ಅವರ ಈ ಎರಡು ಟ್ವೀಟ್‌ಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗುತ್ತಿದ್ದು, ಪರ ವಿರೋಧ ಚರ್ಚೆಗಳು ನಡೆಯುತ್ತಿವೆ.
ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ…
ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು…
ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು…
ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು…
ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…
ಹುಣಸೂರು: ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್ ಬಳಿ…