ಬೆಂಗಳೂರು : ಕನ್ನಡದ ಮೊದಲ ವೈಲ್ಡ್ ಲೈಫ್ ಮ್ಯೂಸಿಕಲ್ ಡಾಕ್ಯುಮೆಂಟರಿ ಚಿತ್ರವಾದ ʼಕಪ್ಪೆ ರಾಗʼಕ್ಕೆ ಗ್ರೀನ್ ಆಸ್ಕರ್ ಎಂದೇ ಖ್ಯಾತಿ ಪಡೆದಿರುವ ಅಂತಾರಾಷ್ಟ್ರೀಯ ಜಾಕ್ಸನ್ ವೈಲ್ಡ್ ಅವಾರ್ಡ್ ದೊರೆತಿದೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಗಣ್ಯರು ಸಂತಸ ವ್ಯಕ್ತಪಡಿಸಿದ್ದು, ಪ್ರತಿಷ್ಠಿತ ಜಾಕ್ಸನ್ ವೈಲ್ಡ್ ಅವಾರ್ಡ್ ಗೆ ಭಾಜನವಾಗಿರುವ ಕನ್ನಡದ ಮೊದಲ ‘ವೈಲ್ಡ್ ಲೈಫ್ ಮ್ಯೂಸಿಕಲ್ ಡಾಕ್ಯು ಫಿಲಂ’ ಕಪ್ಪೆರಾಗ ಚಿತ್ರತಂಡಕ್ಕೆ ಅಭಿನಂದನೆಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
“ಕರುನಾಡಿನ ಪ್ರತಿಭೆಗಳ ಪರಿಶ್ರಮದ ಚಿತ್ರಕ್ಕೆ ಗ್ರೀನ್ ಆಸ್ಕರ್ ಎಂದೇ ಹೆಸರುವಾಸಿಯಾಗಿರುವ ಜಾಕ್ಸನ್ ವೈಲ್ಡ್ ಅವಾರ್ಡ್ ನಂತ ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿ ದೊರೆತದ್ದು ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ಸಂಗತಿ. ಚಿತ್ರದ ನಿರ್ದೇಶಕ ಪ್ರಶಾಂತ್ ಎಸ್. ನಾಯ್ಕ ಮತ್ತವರ ತಂಡದ ಸಾಧನೆ ನಾಡಿನ ಯುವ ನಿರ್ದೇಶಕರಿಗೆ ಪ್ರೇರಣೆಯಾಗಲಿ, ಇಂಥ ಇನ್ನಷ್ಟು ಚಿತ್ರಗಳು ನಮ್ಮಲ್ಲಿ ಮೂಡಿಬಂದು, ಕನ್ನಡದ ಕಲರವ ಜಗದಗಲ ಮೊಳಗಲಿ ಎಂದು ಹಾರೈಸುತ್ತೇನೆ.” ಎಂದು ಅವರು ತಿಳಿಸಿದ್ದಾರೆ.
“ಪಶ್ಚಿಮ ಘಟ್ಟದಲ್ಲಿ ಕಂಡುಬರುವ ‘ಕುಂಬಾರ ಕಪ್ಪೆ’ ಎಂಬ ನಿಶಾಚರಿ ಕಪ್ಪೆಯ ಕುರಿತು ಕನ್ನಡಿಗರು ನಿರ್ಮಿಸಿರುವ ‘ಕಪ್ಪೆರಾಗ-ಕುಂಬಾರನ ಹಾಡು’ ಸಾಕ್ಷ್ಯಚಿತ್ರ, ಗ್ರೀನ್ ಆಸ್ಕರ್ ಎಂದೇ ಹೆಸರಾದ ಪ್ರತಿಷ್ಟಿತ ‘ಜ್ಯಾಕ್ಸನ್ ವೈಲ್ಡ್ ಮೀಡಿಯಾ’ ಪ್ರಶಸ್ತಿಗೆ ಭಾಜನಾವಾಗಿದೆ. ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ ಚಿತ್ರ ನಿರ್ಮಿಸಿದ ತಂಡಕ್ಕೆ ಅಭಿನಂದನೆಗಳು.” ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ಟ್ವೀಟ್ ಮಾಡಿದ್ದಾರೆ.
ಕಪ್ಪೆ ರಾಗ ಹಾಡು ಅಮೆರಿಕದ ಪ್ರತಿಷ್ಠಿತ ಲಾಸ್ ಏಂಜಲೀಸ್‌ನ ಇಂಡಿಪೆಂಡೆಂಟ್ ಶಾರ್ಟ್ಸ್ ಅವಾರ್ಡ್‌ನಲ್ಲಿ ಅತ್ಯುತ್ತಮ ಸಂಗೀತ ವೀಡಿಯೋಗಾಗಿ ಚಿನ್ನದ ಪ್ರಶಸ್ತಿಯನ್ನು ಗೆದ್ದಿದೆ. ಅಲ್ಲದೆ, 13 ನೇ ದಾದಾ ಸಾಹೇಬ್ ಫಾಲ್ಕೆ ಚಲನಚಿತ್ರೋತ್ಸವ 2023 ರಲ್ಲಿ ಅತ್ಯುತ್ತಮ ಸಂಗೀತ ವೀಡಿಯೊ ತೀರ್ಪುಗಾರರ ಆಯ್ಕೆ ಪ್ರಶಸ್ತಿಯನ್ನು ಗೆದ್ದಿದೆ.
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…
ಲಕ್ಷ್ಮೀ ಕಾಂತ್ ಕೊಮಾರಪ್ಪ ಕೃಷಿ, ಧಾರ್ಮಿಕ ಆಚರಣೆಗಳಿಗೆ ಧಕ್ಕೆ ಬಾರದಂತೆ ತಿದ್ದುಪಡಿ ತರಲು ಆಗ್ರಹ ಸೋಮವಾರಪೇಟೆ: ಕೊಡಗು ಜಿಲ್ಲೆಯ ಅರ್ಧದಷ್ಟು…
ಪ್ರಶಾಂತ್ ಎಸ್. ಬೊಂತಗಳ್ಳಿ ಸೇತುವೆ, ತಂತಿಗುಳ್ಳು ತಿರುವಿನಲ್ಲಿ ಹಂಪ್, ಬ್ಯಾರಿಕೇಡ್‌ಗಳನ್ನು ಅಳವಡಿಸಲು ಗ್ರಾಮಸ್ಥರ ಆಗ್ರಹ ಮೈಸೂರು: ಬನ್ನೂರು ಮುಖ್ಯ ರಸ್ತೆಯಲ್ಲಿನ…
ಕೆ.ಬಿ.ರಮೇಶನಾಯಕ ಮೈದಾನ ಸಂರಕ್ಷಿಸಿಕೊಳ್ಳದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ; ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಲ್ಚೆಂಡು ಮೈದಾನ ಈಗ ಬಿಡಾಡಿ ದನಗಳ,…