ಚಿತ್ರ ಮಂಜರಿ

ಸದ್ದಿಲ್ಲದೆ ಓಟಿಟಿಗೆ ಬಂತು ಜಗ್ಗೇಶ್ ಅಭಿನಯದ ರಾಘವೇಂದ್ರ ಸ್ಟೋರ್ಸ್‌

ನವರಸ ನಾಯಕ ಜಗ್ಗೇಶ್ ಅಭಿನಯದ ‘ರಾಘವೇಂದ್ರ ಸ್ಟೋರ್ಸ್’ ಚಿತ್ರವು ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಂಡಿದೆ. ಏ.28ರಂದು ರಿಲೀಸ್ ಆಗಿದ್ದ ಚಿತ್ರದ ಬಗ್ಗೆ ಉತ್ತಮ ಮಾತುಗಳು ಕೇಳಿಬಂದಿತ್ತು.

ಹೊಂಬಾಳೆ ಫಿಲಂಸ್ ಬ್ಯಾನರಿನಲ್ಲಿ ನಿರ್ಮಾಣವಾಗಿದ್ದ ಚಿತ್ರವು ಇದೀಗ ಸದ್ದಿಲ್ಲದೆ ಓಟಿಟಿಗೆ ಬಂದಿದೆ. ಯಶಸ್ವಿ ನಿರ್ದೇಶಕ ಸಂತೋಷ್ ಆನಂದ್ ರಾಮ್ ಆ್ಯಕ್ಷನ್ ಕಟ್ ಹೇಳಿದ್ದ ‘ರಾಘವೇಂದ್ರ ಸ್ಟೋರ್ಸ್’ ಚಿತ್ರವು ಇದೀಗ ಅಮೆಜಾನ್ ಪ್ರೈಮ್ ನಲ್ಲಿ ರಿಲೀಸ್ ಆಗಿದೆ.

ಮದುವೆ ಆಗದ ವ್ಯಕ್ತಿಯೊಬ್ಬನ ಕಥೆಯನ್ನು ಸಂತೋಷ್ ಆನಂದ್ ರಾಮ್ ತೆರೆಗೆ ತಂದಿದ್ದರು. ಚಿತ್ರದಲ್ಲಿ ಜಗ್ಗೇಶ್ ಜೋಡಿಯಾಗಿ ಶ್ವೇತಾ ಶ್ರೀವಾಸ್ತವ್ ಮಿಂಚಿದ್ದು, ತಂದೆ ಪಾತ್ರದಲ್ಲಿ ದತ್ತಣ್ಣ, ಸ್ನೇಹಿತರ ಪಾತ್ರದಲ್ಲಿ ರವಿಶಂಕರ್‌ ಗೌಡ, ಮಿತ್ರಾ ಕಾಣಿಸಿಕೊಂಡಿದ್ದಾರೆ. ಅಚ್ಯುತ್‌ ಕುಮಾರ್ ಕೂಡ ಮುಖ್ಯ ಪಾತ್ರದಲ್ಲಿ ಗಮನ ಸೆಳೆದಿದ್ದಾರೆ.

ಇನ್ನೂ ಹಲವು ಚಿತ್ರಗಳಲ್ಲಿ ಪ್ರದರ್ಶನ ಕಾಣುತ್ತಿರುವ ಚಿತ್ರವನ್ನು ಸದ್ದಿಲ್ಲದೆ ಓಟಿಟಿ ವೇದಿಕೆಯಲ್ಲಿ ಬಿಡುಗಡೆ ಮಾಡಲಾಗಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ 20 ದಿನಗಳಲ್ಲೇ ಓಟಿಟಿಗೆ ಬಂದಿರುವುದು ಹಲವರಿಗೆ ಅಚ್ಚರಿ ಮೂಡಿಸಿದೆ.

andolanait

Recent Posts

ರೈತರಿಗೆ ಗುಂಡು ಹೊಡೆಸಿದ್ದ ಬಿಜೆಪಿಗರಿಂದ ಕಾಂಗ್ರೆಸ್ ಪಾಠ ಕಲಿಯಬೇಕಿಲ್ಲ : ಸಚಿವೆ ಹೆಬ್ಬಾಳಕರ್‌

ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ‌.‌ ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…

11 seconds ago

ಮೈಸೂರಿನಲ್ಲಿ 300 ಎಕರೆ ಜಮೀನಿನಲ್ಲಿ ಲೇಔಟ್‌ ನಿರ್ಮಾಣ: ಸಚಿವ ಭೈರತಿ ಸುರೇಶ್‌

ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…

40 mins ago

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಈ…

1 hour ago

482 ಎಕರೆ ಅರಣ್ಯ ಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಪತ್ರ ಬರೆದ ಈಶ್ವರ್‌ ಖಂಡ್ರೆ

ಬೆಳಗಾವಿ:  532 ಎಕರೆ ಅರಣ್ಯ, ಸರ್ಕಾರಿ ಭೂಮಿ ಕಬಳಿಸಲು ನಕಲಿ ದಾಖಲೆ ಸಲ್ಲಿಸಿ ನ್ಯಾಯಾಲಯದಿಂದ ಆದೇಶ ಪಡೆದಿರುವ ವ್ಯಕ್ತಿಯ ಹಿಂದಿರುವವರ…

1 hour ago

ಟಾಕ್ಸಿಕ್‌ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌

ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್‌ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…

2 hours ago

ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜಾಗೃತಿ ರಥಯಾತ್ರೆಗೆ ಚಾಲನೆ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…

2 hours ago