ಬೆಂಗಳೂರು: ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮದುವೆಗೆ ತಯಾರಿ ನಡೆಯುತ್ತಿದೆ. ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ವಿವಾಹ ನಡೆಯಲಿದೆ.
ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಭೇಟಿ ಸ್ಯಾಂಡಲ್ವುಡ್ ಸ್ಟಾರ್ ಕಪಲ್ ಆದಂತಹ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ.

ಕೆಲವೇ ದಿನಗಳ ಹಿಂದೆ ಅವರ ಎಂಗೇಜ್ಮೆಂಟ್ ಫೋಟೋಗಳು ವೈರಲ್ ಆಗಿದ್ದವು. ಈಗ ಮದುವೆ ದಿನಾಂಕ ಕೂಡ ಬಹಿರಂಗ ಆಗಿದೆ. ಜನವರಿ 26ರಂದು ಹರಿಪ್ರಿಯಾ-ವಸಿಷ್ಠ ಸಿಂಹ ಮದುವೆ ನೆರವೇರಲಿದೆ. ವಿವಾಹದ ಡೇಟ್ ಕುರಿತು ಸಂಸದ ಪ್ರತಾಪ್ ಸಿಂಹ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ವಿವಾಹ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ. ಮದುವೆಗೆ ಸಕಲ ತಯಾರಿ ನಡೆಯುತ್ತಿದೆ. ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಅವರು ಆಶ್ರಮಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಪ್ರತಾಪ್ ಸಿಂಹ ಕೂಡ ಜೊತೆಗಿದ್ದರು. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.





