ತೆಲಂಗಾಣ : ಜೂನಿಯರ್ ಎನ್.ಟಿ.ಆರ್ ವಿವಿಧ ಪಾತ್ರಗಳಲ್ಲಿ ಅಭಿನಯ ಮಾಡುವ ಮೂಲಕ ಪ್ಯಾನ್ ಇಂಡಿಯಾದಲ್ಲಿ ಮಿಂಚಿದ್ದಾರೆ. ಅವರ ಮುಂದಿನ ಸಿನಿಮಾದ ಬಗ್ಗೆ ಕುತೂಹಲವೂ ಅಷ್ಟೇ ಹೆಚ್ಚಾಗಿದೆ. ಇವರು ಕೊರಟಾಲ ಶಿವ ಅವರೊಂದಿಗೆ ʼದೇವರʼ ಸಿನಿಮಾದಲ್ಲಿ ಅಭಿನಯ ಮಾಡುತ್ತಿದಾರೆ.
ಸಿನಿಮಾ ಅನೌನ್ಸ್ ಆದ ದಿನದಿಂದ ದೊಡ್ಡಮಟ್ಟದಲ್ಲಿ ಸದ್ದು ಮಾಡಿದೆ. ಸಿನಿಮಾದಲ್ಲಿ ಬಾಲಿವುಡ್ ನಟಿ ಜಾಹ್ನವಿ ಕಪೂರ್, ನಟ ಸೈಫ್ ಅಲಿಖಾನ್ ಅವರು ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಬಿಟೌನ್ ಸಿನಿಮಂದಿಗೂ ʼದೇವರʼ ಸಿನಿಮಾ ಕುತೂಹಲ ಹುಟ್ಟಿಸಿದೆ. ಎರಡು ಭಾಗದಲ್ಲಿ ʼದೇವರʼ ತೆರೆ ಕಾಣಲಿದೆ.
ಮೊದಲ ಭಾಗ ಇದೇ ಏಪ್ರಿಲ್ 5 ರಂದು ರಿಲೀಸ್ ಮಾಡುವ ಯೋಜನೆಯನ್ನು ಚಿತ್ರತಂಡ ಹಾಕಿಕೊಂಡಿತ್ತು. ಆದರೆ ಇದೀಗ ಸಿನಿಮಾ ಅಂದುಕೊಂಡ ದಿನಕ್ಕೆ ತೆರೆಗೆ ಬರುವುದಿಲ್ಲ ʼಪಿಂಕ್ ವಿಲ್ಲಾʼ ವರದಿ ಮಾಡಿದೆಯಾಗಿದೆ.
“ದೇವರ ಸಿನಿಮಾಗೆ ವಿಎಫ್ ಎಕ್ಸ್ ಕೆಲಸ ಹೆಚ್ಚಿದೆ. ಔಟ್ ಪುಟ್ ಬರಲು ನಿರೀಕ್ಷೆಗಿಂತ ಹೆಚ್ಚಿನ ಸಮಯ ಬೇಕಾಗುತ್ತದೆ. ಈ ಕಾರಣದಿಂದ ಚಿತ್ರತಂಡ ಈ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ.
ಅಂದುಕೊಂಡ ದಿನಕ್ಕೆ (ಏ.5 ರಂದು) ರಿಲೀಸ್ ಮಾಡದಿರಲು ನಿರ್ಧರಿಸಿದೆ” ಎಂದು ಮೂಲಗಳು ಹೇಳಿರುವುದಾಗಿ ʼಪಿಂಕ್ ವಿಲ್ಲಾʼ ವರದಿ ಮಾಡಿದೆ.”ಇನ್ನು ಕೂಡ 20 ದಿನದ ಚಿತ್ರೀಕರಣ ಬಾಕಿಯಿದೆ.
ಇದಲ್ಲದೆ ಸೈಫ್ ಅಲಿಖಾನ್ ಅವರಿಗೆ ಭುಜದ ಶಸ್ತ್ರ ಚಿಕಿತ್ಸೆಯಾಗಿದ್ದು, ಚಿತ್ರೀಕರಣ ಇನ್ನಷ್ಟು ತಡವಾಗುವ ಸಾಧ್ಯತೆಯಿದೆ. ಈ ಕಾರಣದಿಂದ ರಿಸ್ಕ್ ತೆಗದುಕೊಳ್ಳದೆ ಸಿನಿಮಾ ರಿಲೀಸ್ ದಿನವನ್ನು ಮುಂದೂಡಲಾಗಿದೆ.
ಸಿನಿಮಾ 2024 ರ ದ್ವಿತೀಯಾರ್ಧದಲ್ಲಿ ತೆರೆ ಕಾಣಲಿದೆ” ಎಂದು ಮೂಲಗಳು ಹೇಳಿರುವುದಾಗಿ ವರದಿ ತಿಳಿಸಿದೆಯಾಗಿದೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…