ಕೊಯಮತ್ತೂರು: ಕಳೆದ ವಾರ ಡಿಎಂಕೆ ಸಂಸದೆ ಕನಿಮೋಳಿ ಅವರ ಪ್ರಯಾಣದ ವೇಳೆ ಟಿಕೆಟ್ ವಿಚಾರವಾಗಿ ಉಂಟಾದ ವಿವಾದ ಹಿನ್ನೆಲೆಯಲ್ಲಿ ತನ್ನ ಕೆಲಸಕ್ಕೆ ರಾಜೀನಾಮೆ ನೀಡಿದ್ದ ಮಹಿಳಾ ಬಸ್ ಚಾಲಕಿಗೆ ನಟ-ರಾಜಕಾರಣಿ ಕಮಲ್ ಹಾಸನ್ ಸೋಮವಾರ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ.
ನಗರದ ಮೊದಲ ಮಹಿಳಾ ಬಸ್ ಚಾಲಕಿಯಾಗಿರುವ ಶರ್ಮಿಳಾ ಅವರಿಗೆ ‘ಕಮಲ್ ಪನ್ಬಟ್ಟು ಮೈಯಂ’ (ಕಮಲ್ ಕಲ್ಚರಲ್ ಸೆಂಟರ್) ವತಿಯಿಂದ ಚಾಲಕ-ಉದ್ಯಮಿಯಾಗಲು ಅನುವು ಮಾಡಿಕೊಡಲು ಈ ಕಾರನ್ನು ನೀಡಲಾಗಿದೆ ಎಂದು ಮಕ್ಕಳ್ ನಿಧಿ ಮೈಯಂ ಮುಖ್ಯಸ್ಥರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆಕೆಯ ವಯಸ್ಸಿನ ಮಹಿಳೆಯರಿಗೆ ಉತ್ತಮ ಉದಾಹರಣೆಯಾಗಿದ್ದ ಶರ್ಮಿಳಾ ಕುರಿತ ಇತ್ತೀಚಿನ ಚರ್ಚೆಯ ಬಗ್ಗೆ ನಾನು ದುಃಖಿತನಾಗಿದ್ದೆ. ಶರ್ಮಿಳಾ ಕೇವಲ ಚಾಲಕಿಯಾಗಿ ಉಳಿಯಬಾರದು. ಅನೇಕ ಶರ್ಮಿಳಾರನ್ನು ಸೃಷ್ಟಿಸಬೇಕೆಂಬುದು ನನ್ನ ನಂಬಿಕೆ’. ಆಕೆ ಈಗ ಕಾರನ್ನು ಬಾಡಿಗೆ ಸೇವೆಗಾಗಿ ಬಳಸುತ್ತಾಳೆ ಮತ್ತು ಮುಂದೆ ಉದ್ಯಮಿಯಾಗುತ್ತಾಳೆ ಎಂದು ಅವರು ಹೇಳಿದ್ದಾರೆ.
ಕಳೆದ ವಾರ, ಶರ್ಮಿಳಾ ಚಲಾಯಿಸುತ್ತಿದ್ದ ಬಸ್‌ನಲ್ಲಿ ಗಾಂಧಿಪುರಂನಿಂದ ಕೊಯಮತ್ತೂರಿನ ಪೀಲಮೇಡುವಿಗೆ ಕನಿಮೊಳಿ ಪ್ರಯಾಣಿಸಿದ್ದರು. ಈ ವೇಳೆ ಅವರ ಬಳಿ ಟಿಕೆಟ್ ಇದ್ದರೂ ಡಿಎಂಕೆ ಸಂಸದರನ್ನು ಅವಮಾನಿಸಿದ ಹಿನ್ನೆಲೆಯಲ್ಲಿ ಕಂಡಕ್ಟರ್ ಜೊತೆಗೆ ವಾಗ್ವಾದ ನಡೆದಿತ್ತು. ಅಲ್ಲದೇ ಪ್ರಚಾರಕ್ಕಾಗಿ ಶರ್ಮಿಳಾ ಈ ರೀತಿ ಮಾಡಿದ್ದಾರೆ ಎಂಬ ಆರೋಪದ ನಂತರ ಚಾಲಕಿ ಹುದ್ದೆಗೆ ಅವರು ರಾಜೀನಾಮೆ ನೀಡಿದ್ದರು.
ಬೆಂಗಳೂರು : ನಟ ಕಿಚ್ಚ ಸುದೀಪ್ ಮಗಳು, ಗಾಯಕಿ ಸಾನ್ವಿ ಸುದೀಪ್ ಬಗ್ಗೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ…
ಬೆಂಗಳೂರು: ಮಹಾರಾಷ್ಟ್ರದ ಎಎನ್‌ಟಿಎಫ್ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ…
ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ…
ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್ ಕಿ ಬಾತ್ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…
ಕಾರವಾರ: ದೇಶದ ಪ್ರಥಮ ಪ್ರಜೆಯಾಗಿರುವ ಸೇನಾ ಪಡೆಗಳ ಮಹಾದಂಡ ನಾಯಕಿ ರಾಷ್ಟ್ರಪತಿ ದ್ರೌಪದ ಮುರ್ಮು ಅವರು ಇಂದು ಜಲಾಂತರಗಾಮಿ ನೌಕೆಯಲ್ಲಿ…
ಮೈಸೂರು: ಅಯ್ಯಪ್ಪ ಸ್ವಾಮಿ ದೇವಸ್ಥಾನ ಪಕ್ಕದ ಕೇರಳ ರಾಜ್ಯದಲ್ಲಿ ಇದ್ದರೂ ಅಯ್ಯಪ್ಪನಿಗೆ ಹೆಚ್ಚಿನ ಭಕ್ತರು ಇರುವುದು ನಮ್ಮ ಕರ್ನಾಟಕದಲ್ಲಿಯೇ ಪ್ರತಿ…