ಮುಂಬೈ : ತಮ್ಮ ಪತ್ನಿಯ ಕಾರಿಗೆ ಡಿಕ್ಕಿ ಹೊಡೆದು ಆಕೆಯ ಮೇಲೆ ಕಾರು ಹತ್ತಿಸಲು ಪ್ರಯತ್ನಿಸಿದ ಆರೋಪಕ್ಕೆ ಸಂಬಂಧಪಟ್ಟಂತೆ ಚಿತ್ರ ನಿರ್ಮಾಪಕ ಕಮಲ್ ಕಿಶೋರ್ ಮಿಶ್ರ ಅವರ ವಿರುದ್ಧ ಅಂಬೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಅಕ್ಟೋಬರ್ 19ರಂದು ಕಮಲ್ ಅವರು ಪತ್ನಿ ಕಾರಿಗೆ ಡಿಕ್ಕಿ ಹೊಡೆದಿದ್ದರು ಎನ್ನಲಾಗಿದ್ದು, ಘಟನೆಯ ನಂತರ ಮಿಶ್ರಾ ಪತ್ನಿ ಯಾಸ್ಮಿನ್ ಗಂಭೀರವಾಗಿ ಗಾಯಗೊಂಡಿದ್ದರು. ಯಾಸ್ಮಿ ನೀಡಿದ ದೂರಿನ ಮೇರೆಗೆ ಪೊಲೀಸರು ಐಪಿಸಿಸಿ ಸೆಕ್ಷನ್ 279 ಮತ್ತು 338 ಇವುಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.