Mysore
22
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ರಮೇಶ್‌ ಅರವಿಂದ್‌ ಗೆ ಕನ್ನಡ ಕಲಾಭೂಷಣ ಪ್ರಶಸ್ತಿ

2023 ರ ಕರುನಾಡ ಸಂಭ್ರಮ ಕಾರ್ಯಕ್ರಮದ ಪ್ರಯುಕ್ತ ನಟ ರಮೇಶ್‌ ಅರವಿಂದ್‌ ಅವರು ಕನ್ನಡ ಕಲಾಭೂಷಣ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಜೆಕೆಜಿಎಸ್‌ ಟ್ರಸ್ಟ್‌ ವತಿಯಿಂದ ಪ್ರತಿವರ್ಷವೂ ಕೂಡ ಕರುನಾಡ ಸಂಭ್ರಮ ಕಾರ್ಯಕ್ರಮವನ್ನು ಆಚರಿಸಿಕೊಂಡು ಬರಲಾಗುತ್ತಿದ್ದು, ಇದೀಗ ಕರುನಾಡ ಸಂಭ್ರಮ 12 ನೇ ವರ್ಷಕ್ಕೆ ಕಾಲಿಟ್ಟಿದೆ. ಪ್ರತೀ ವರ್ಷದಂತೆ ಈ ವರ್ಷವೂ ಕೂಡ ವಿಶೇಷವಾಗಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ.
ಈ ಬಾರಿ ಬೆಂಗಳೂರಿನ ಶ್ರೀನಿವಾಸನಗರದ ಶಂಕರ್‌ ನಾಗ್‌ ವೃತ್ತದ ಬಳಿ ಇರುವ ಕೆಂಪೇಗೌಡ ಆಟದ ಮೈದಾನದಲ್ಲಿ ಕರುನಾಡ ಸಂಭ್ರಮ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಲಿದೆ.
ಪ್ರತಿ ಬಾರಿಯಂತೆ ಈ ಬಾರಿಯೂ ಕೂಡ ಬಹಳಾ ಅದ್ದೂರಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ವರುಣ್ ಸ್ಟುಡಿಯೋಸ್‌ ಹಾಗೂ ರಾಜ್‌ ಇವೆಂಟ್ಸ್‌ ಎರಡೂ ಜೊತೆಗೂಡಿ ಈ ಕಾರ್ಯಕ್ರಮವನ್ನು ವಹಿಹಿಸಿಕೊಂಡಿವೆ. ಎಂದಿನಂತೆ ಈ ಬಾರಿಯೂ ಕೂಡ ಕನ್ನಡ ಕಲಾ ಭೂಷಣ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಈ ಪ್ರಶಸ್ತಿಗೆ ಕನ್ನಡ ಚಿತ್ರರಂಗದ ಖ್ಯಾತ ನಟ ರಮೇಶ್‌ ಅರವಿಂದ್‌ ಅವರು ಆಯ್ಕೆ ಆಗಿದ್ದಾರೆ. 
ಇನ್ನು ಈ ಕಾರ್ಯಕ್ರಮ ಡಿಸೆಂಬರ್‌ 14 ರಿಂದ 17 ರವರೆಗೆ ನಡೆಯಲಿದೆ. ಈಗಾಗಲೇ ಕಾರ್ಯಕ್ರಮದ ಸಿದ್ಧತೆ ಭರದಿಂದ ಸಾಗಿದೆ.
ಕಲರ್‌ ಫುಲ್‌ ಕಾರ್ಯಕ್ರಮ ಕರುನಾಡ ಸಂಭ್ರಮದಲ್ಲಿ ಸ್ಯಾಂಡಲ್‌ವುಡ್ ನಟ ನಟಿಯರು ಒಂದೆಡೆ ಸೇರಿ ಸಂಭ್ರಮಿಸಲಿದ್ದಾರೆ. ಕರುನಾಡ ಸಂಭ್ರಮದಲ್ಲಿ ಗಾಯಕ, ಸಂಗೀತ ನಿರ್ದೇಶಕ ಗುರುಕಿರಣ್‌, ರಾಜೇಶ್‌ ಕ್ರಿಷ್ಣನ್‌, ನವೀನ್‌ ಸಜ್ಜು ಅವರ ಗಾಯನ ಕಾರ್ಯಕ್ರಮದ ಮೆರುಗನ್ನು ದುಪ್ಪಟ್ಟು ಮಾಡಲಿದೆ.
ನಟ ರಮೇಶ್‌ ಅರವಿಂದ್‌, ಅಜಯ್‌ ರಾವ್‌, ಚಿಕ್ಕಣ್ಣ, ವಿಜಯರಾಘವೇಂದ್ರ, ಸತೀಶ್‌ ನೀನಾಸಂ ಸೇರಿದಂತೆ ಕನ್ನಡ ಚಿತ್ರರಂಗದ ಹಲವು ತಾರೆಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!