ಚಿತ್ರ ಮಂಜರಿ

ಕನ್ನಡದ ಮೊದಲ ಜೀವನ ಆಧಾರಿತ ಸಿನಿಮಾ ವಿಜಯಾನಂದ ಭರ್ಜರಿ ಪ್ರದರ್ಶನ

ಕನ್ನಡದ ಮೊದಲ ಬಯೋಪಿಕ್ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಡಾ. ವಿಜಯಸಂಕೇಶ್ವರ ಅವರ ಜೀವನ ಆಧಾರಿತ ‘ವಿಜಯಾನಂದ’ ಚಿತ್ರವು ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಸೇರಿದಂತೆ ಐದು ಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಚಿತ್ರವಾಗಿ ಜಗತ್ತಿನಾದ್ಯಂತ 1200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ.

ಸಂತೋಷ್ ಥಿಯೇಟರ್ ನಲ್ಲಿ ತಲೆ ಎತ್ತಿದ ದೊಡ್ಡ ಕಟೌಟ್ ತಲೆ ಎತ್ತಿದೆ. ಯಶಸ್ವಿ ಉಧ್ಯಮಿಯ ಜೀವನ ಹೋರಾಟದ ಕಥೆ ಇದಾಗಿದ್ದು, ಬೆಂಗಳೂರು, ಹುಬ್ಬಳ್ಳಿ, ಹೈದರಾಬಾದ್ ಗಳಲ್ಲಿ ಪ್ರೀಮಿಯರ್ ಶೋ ಮಾಡಿದೆ.

ಸಂತೋಷ್ ಚಿತ್ರಂಮದಿರ ಸೇರಿದಂತೆ ರಾಜ್ಯದ ಹಲವು ಥಿಯೇಟರ್ ಗಳಲ್ಲಿ ರಿಲೀಸ್ ಆಗಿದೆ, ಓವರ್‌ಸೀಸ್‌ನಲ್ಲಿ 350 ಕ್ಕೂ ಅಧಿಕ ಸ್ಕ್ರೀನ್ ಗಳಲ್ಲಿ ವಿಜಯಾನಂದ ಆರ್ಭಟ ಶುರುವಾಗಿದೆ.

ಈ ಮೊದಲು ‘ಟ್ರಂಕ್’ ಎಂಬ ಚಿತ್ರದ ನಿರ್ದೇಶನ ಮಾಡಿದ್ದ ರಿಷಿಕಾ ಶರ್ಮ, ‘ವಿಜಯಾನಂದ’ ಚಿತ್ರಕ್ಕೆ ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ವಿಆರ್​ಎಲ್ ಪ್ರೊಡಕ್ಷನ್ಸ್ ಅಡಿಯಲ್ಲಿ ಡಾ. ಆನಂದ ಸಂಕೇಶ್ವರ ನಿರ್ಮಿಸಿರುವ ವಿಜಯಾನಂದ ಚಿತ್ರಕ್ಕೆ ದಕ್ಷಿಣ ಭಾರತದ ಜನಪ್ರಿಯ ಸಂಗೀತ ನಿರ್ದೇಶಕರಾದ ಗೋಪಿ ಸುಂದರ್ ಸಂಗೀತ ಸಂಯೋಜಿಸಿದ್ದು, ಕೀರ್ತನ್ ಪೂಜಾರಿ ಅವರ ಛಾಯಾಗ್ರಹಣವಿದೆ.

ಆ ಚಿತ್ರದಲ್ಲಿ ನಾಯಕನಾಗಿದ್ದ ನಿಹಾಲ್ ರಜಪೂತ್, ಈ ಚಿತ್ರದಲ್ಲಿ ಡಾ. ವಿಜಯ ಸಂಕೇಶ್ವರ ಅವರ ಪಾತ್ರದಲ್ಲಿ ಅಭಿನಯಿಸಿದ್ದು, ಮೂರು ವಯೋಮಾನ ಮತ್ತು ಶೇಡ್​ಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಕರುನಾಡಿನ ಯಶಸ್ವಿ ಉದ್ಯಮಿ ವಿಜಯ ಸಂಕೇಶ್ವರ ಅವರ ಜೀವನದ ವಿವರಗಳನ್ನು ಇಟ್ಟುಕೊಂಡು ‘ವಿಜಯಾನಂದ’ ಸಿನಿಮಾ ಮೂಡಿಬಂದಿದೆ. ನಿಹಾಲ್​, ಸಿರಿ ಪ್ರಹ್ಲಾದ್​ ಅವರು ಈ ಚಿತ್ರದಲ್ಲಿ ನಟಿಸಿದ್ದಾರೆ. ರಿಶಿಕಾ ಶರ್ಮಾ ಅವರು ನಿರ್ದೇಶನ ಮಾಡಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ಬಿಡುಗಡೆ ಆಗುತ್ತಿದೆ.

‘ನಾನೇ ನರರಾಕ್ಷಸ’, ‘ಸುನಾಮಿ 143’, ‘ಪ್ರಾಯಶಃ’, ‘ಪಂಖುರಿ’, ‘ಮೈಸೂರು ಡೈರೀಸ್​’, ‘ಕ್ಷೇಮಗಿರಿಯಲ್ಲಿ ಕರ್ನಾಟಕ’, ‘ದ್ವಿಪಾತ್ರ’, ‘ಡಾ. 56’ ಸಿನಿಮಾಗಳು ಕೂಡ ಈ ವಾರ ತೆರೆಕಾಣುತ್ತಿವೆ. ಯಾವುದನ್ನು ನೋಡೋದು, ಯಾವುದನ್ನು ಬಿಡೋದು ಎಂಬ ಗೊಂದಲದಲ್ಲಿ ಪ್ರೇಕ್ಷಕರಿದ್ದಾರೆ.

ಚಿತ್ರದಲ್ಲಿ ಪ್ರತಿಭಾವಂತ ಕಲಾವಿದರುಗಳಾದ ಅನಂತ್ ನಾಗ್, , ಅರ್ಚನಾ ಕೊಟ್ಟಿಗೆ, ಪ್ರಕಾಶ್ ಬೆಳವಾಡಿ, ಭರತ್ ಬೋಪಣ್ಣ, ರಮೇಶ್ ಭಟ್ , ಶೈನ್ ಶೆಟ್ಟಿ, ರವಿಚಂದ್ರನ್, ವಿನಯಾ ಪ್ರಸಾದ್, ಸಿರಿ ಪ್ರಹ್ಲಾದ್ ದಯಾಳ್ ಪದ್ಮನಾಭನ್, ಮುಂತಾದವರು ಇದ್ದಾರೆ.

andolana

Recent Posts

ವರ್ತಕರಿಗೆ ಹಬ್ಬದ ನಿರಾಳತೆ: ದೀಪಾವಳಿ ನಂತರಕ್ಕೆ UPI ಮರ್ಚೆಂಟ್‌ ಶುಲ್ಕ ಜಾರಿ ಮುಂದೂಡಿಕೆ

ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್‌ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್‌ ಪಾವತಿಗಳ ಮೇಲಿನ…

17 hours ago

ಸ್ಟಿಂಗ್ ಆಪರೇಷನ್ ಬಗ್ಗೆ ಕುಮಾರಸ್ವಾಮಿಯನ್ನೇ ಕೇಳಿ: ಸಚಿವ ಪುಟ್ಟರಂಗಶೆಟ್ಟಿ

ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…

18 hours ago

ಸ್ಟಿಂಗ್ ಆಪರೇಷನ್ ಆರೋಪ: ಸಾಕ್ಷಿ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಒತ್ತಾಯ

ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…

18 hours ago

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

18 hours ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

19 hours ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

22 hours ago