ಬೆಂಗಳೂರು : ಕನ್ನಡದಲ್ಲಿ ಇತೀಚಿಗೆ ಮನೆಮಾತಾದ ಚಿತ್ರ `ಕಾಂತಾರ’ ಸಿನಿಮಾವನ್ನು ಬಾಲಿವುಡ್ ಸೂಪರ್ ಸ್ಟಾರ್ ಹೃತಿಕ್ ರೋಷನ್ ಅವರು ಹಾಡಿ ಹೊಗಳಿದ್ದಾರೆ.
ಹೌದು, ಈ ಬಗ್ಗೆ ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು `ಕಾಂತಾರ’ ಕ್ಲೈಮ್ಯಾಕ್ಸ್ ಸಖತ್ ಇಷ್ಟವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಚಿತ್ರದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ರಿಷಬ್ ನಟನೆ, ನಿರ್ದೇಶನದ `ಕಾಂತಾರ’ ಸಿನಿಮಾ ಹವಾ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇದೆ. ಒಟಿಟಿಯಲ್ಲಿ ಕೂಡ ಸಿನಿಮಾ ಸಂಚಲನ ಮೂಡಿಸುತ್ತಿದೆ. ಇದೀಗ `ಕಾಂತಾರ’ ಚಿತ್ರವನ್ನು ಬಿಟೌನ್ ಸ್ಟಾರ್ ಹೃತಿಕ್ ರೋಷನ್ ನೋಡಿ ಭೇಷ್ ಎಂದಿದ್ದಾರೆ. ಸಿನಿಮಾ ಬಗೆಗಿನ ಭಾವನೆಯನ್ನ ನಟ ಖುಷಿಯಿಂದ ಹೇಳಿಕೊಂಡಿದ್ದಾರೆ.
ಕಾಂತಾರ’ ಸಿನಿಮಾವನ್ನು ನೋಡಿ ಸಾಕಷ್ಟು ವಿಷಯ ಕಲಿತುಕೊಂಡೆ. ರಿಷಬ್ ಶೆಟ್ಟಿ ಅವರಿಂದಾಗಿ ಈ ಸಿನಿಮಾ ಅಸಾಧಾರಣ ಎನಿಸಿಕೊಂಡಿದೆ. ನಿರೂಪಣೆ, ನಟನೆ ಮತ್ತು ನಿರ್ದೇಶನ ಅತ್ಯುತ್ತಮವಾಗಿದೆ. ಕ್ಲೈಮ್ಯಾಕ್ಸ್‌ನಲ್ಲಿ ಕಂಡ ಬದಲಾವಣೆಯಿಂದ ನನಗೆ ರೋಮಾಂಚನ ಆಯಿತು. ಇಡೀ ತಂಡಕ್ಕೆ ನನ್ನ ಗೌರವ ಮತ್ತು ಅಭಿನಂದನೆಗಳು’ ಎಂದು ಹೃತಿಕ್ ರೋಷನ್ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ರಿಷಬ್ ತಂಡದ ವಿಭಿನ್ನ ಪ್ರಯತ್ನವನ್ನ ಹಾಡಿ ಹೊಗಳಿದ್ದಾರೆ. ಹೃತಿಕ್ ರೋಷನ್‌ಗೆ ಪ್ರತಿಯುತ್ತರವಾಗಿ ರಿಷಬ್ ಕೂಡ ಧನ್ಯವಾದಗಳು ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…
ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…
ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…