ಚಿತ್ರ ಮಂಜರಿ

ʼಕಾಂತಾರʼ ನೋಡಿ ತುಂಬಾ ಕಲಿತೆ : ಹೃತಿಕ್ ರೋಷನ್

ಬೆಂಗಳೂರು :  ಕನ್ನಡದಲ್ಲಿ ಇತೀಚಿಗೆ ಮನೆಮಾತಾದ ಚಿತ್ರ `ಕಾಂತಾರ’ ಸಿನಿಮಾವನ್ನು ಬಾಲಿವುಡ್ ಸೂಪರ್ ಸ್ಟಾರ್  ಹೃತಿಕ್ ರೋಷನ್‌ ಅವರು ಹಾಡಿ ಹೊಗಳಿದ್ದಾರೆ.
ಹೌದು, ಈ ಬಗ್ಗೆ ಟ್ವೀಟರ್‌ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು `ಕಾಂತಾರ’ ಕ್ಲೈಮ್ಯಾಕ್ಸ್ ಸಖತ್ ಇಷ್ಟವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಚಿತ್ರದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಿಷಬ್ ನಟನೆ, ನಿರ್ದೇಶನದ `ಕಾಂತಾರ’ ಸಿನಿಮಾ ಹವಾ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಲೇ ಇದೆ. ಒಟಿಟಿಯಲ್ಲಿ ಕೂಡ ಸಿನಿಮಾ ಸಂಚಲನ ಮೂಡಿಸುತ್ತಿದೆ. ಇದೀಗ `ಕಾಂತಾರ’ ಚಿತ್ರವನ್ನು ಬಿಟೌನ್ ಸ್ಟಾರ್ ಹೃತಿಕ್ ರೋಷನ್ ನೋಡಿ ಭೇಷ್ ಎಂದಿದ್ದಾರೆ. ಸಿನಿಮಾ ಬಗೆಗಿನ ಭಾವನೆಯನ್ನ ನಟ ಖುಷಿಯಿಂದ ಹೇಳಿಕೊಂಡಿದ್ದಾರೆ.

ಕಾಂತಾರ’ ಸಿನಿಮಾವನ್ನು ನೋಡಿ ಸಾಕಷ್ಟು ವಿಷಯ ಕಲಿತುಕೊಂಡೆ. ರಿಷಬ್ ಶೆಟ್ಟಿ ಅವರಿಂದಾಗಿ ಈ ಸಿನಿಮಾ ಅಸಾಧಾರಣ ಎನಿಸಿಕೊಂಡಿದೆ. ನಿರೂಪಣೆ, ನಟನೆ ಮತ್ತು ನಿರ್ದೇಶನ ಅತ್ಯುತ್ತಮವಾಗಿದೆ. ಕ್ಲೈಮ್ಯಾಕ್ಸ್‌ನಲ್ಲಿ ಕಂಡ ಬದಲಾವಣೆಯಿಂದ ನನಗೆ ರೋಮಾಂಚನ ಆಯಿತು. ಇಡೀ ತಂಡಕ್ಕೆ ನನ್ನ ಗೌರವ ಮತ್ತು ಅಭಿನಂದನೆಗಳು’ ಎಂದು ಹೃತಿಕ್ ರೋಷನ್ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ರಿಷಬ್ ತಂಡದ ವಿಭಿನ್ನ ಪ್ರಯತ್ನವನ್ನ ಹಾಡಿ ಹೊಗಳಿದ್ದಾರೆ. ಹೃತಿಕ್‌ ರೋಷನ್‌ಗೆ ಪ್ರತಿಯುತ್ತರವಾಗಿ ರಿಷಬ್ ಕೂಡ ಧನ್ಯವಾದಗಳು ಎಂದು ಪ್ರತಿಕ್ರಿಯೆ ನೀಡಿದ್ದಾರೆ.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

15 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

19 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

19 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

19 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

19 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

19 hours ago