ಸ್ಯಾಂಡಲ್‌ವುಡ್ ಮಾತ್ರವಲ್ಲದೇ ಭಾರತದಾದ್ಯಂತ ಕಾಂತಾರ ಸಿನಿಮಾದೇ ಹವಾ. ಬೇರೆ ಬೇರೆ ಪರಭಾಷೆಯಿಂದ ಕಾಂತಾರ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಪ್ರೇಕ್ಷಕರ ಜೊತೆಗೆ ಸಿನಿ ಸೆಲೆಬ್ರಿಟಿಗಳು ಸಹ ರಿಷಬ್ ಶೆಟ್ಟಿ ಕಾಂತಾರಗೆ ಫಿದಾ ಆಗಿದ್ದಾರೆ. ಈಗಾಗಲೇ ಅನೇಕ ಸ್ಟಾರ್ಸ್ ಕಾಂತಾರ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಸೆಪ್ಟಂಬರ್ 30ರಂದು ತೆರೆಗೆ ಬಂದ ಬಂದ ಸಿನಿಮಾ ಇಂದಿಗೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಅದರಲ್ಲೂ ರಿಷಬ್ ಶೆಟ್ಟಿ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. ರಿಷಬ್ ಶೆಟ್ಟಿಗೆ ಮೆಚ್ಚುಗೆಯ ಮಹಾಪೂರ ಬರುತ್ತಿದೆ. ಕನ್ನಡದಲ್ಲಿ ಮಾತ್ರ ರಿಲೀಸ್ ಆಗಿದ್ದ ಕಾಂತರಾ ಇದೀಗ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬಂದಿದೆ.
ರಿಷಬ್ ಕಾಂತಾರ ಮತ್ತೊಂದು ದಾಖಲೆ ಮಾಡಿದೆ. ರೇಟಿಂಗ್ ವಿಚಾರದಲ್ಲಿ ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್-2 ಸಿನಿಮಾವನ್ನು ಹಿಂದಿಕ್ಕಿದೆ. ಹೌದು, ಭಾರತದಲ್ಲಿ ಅತೀ ಹೆಚ್ಚು ರೇಟಿಂಗ್ ಪಡೆದ ಸಿನಿಮಾವಾಗಿ ಹೊರಹೊಮ್ಮಿದೆ ಕಾಂತಾರ. IMDb ನಲ್ಲಿ ಅತಿ ಹೆಚ್ಚು ರೇಟಿಂಗ್ ಪಡೆದ ಭಾರತೀಯ ಸಿನಿಮಾವಾಗಿದೆ. IMDbಯಲ್ಲಿ ಕಾಂತಾರ ಸಿನಿಮಾಗೆ 9.6 ರೇಟಿಂಗ್ ನೀಡಲಾಗಿದೆ. ಅತೀ ಹೆಚ್ಚು ರೇಟಿಂಗ್ ಪಡೆದ ಸಿನಿಮಾ ಇದಾಗಿದೆ. ಅಂದಹಾಗೆ ಕೆಜಿಎಫ್-2 ಸಿನಿಮಾಗೆ 10ಕ್ಕೆ 8.4 ನೀಡಲಾಗಿತ್ತು. ಇನ್ನು ಆರ್ ಆರ್ ಆರ್ ಸಿನಿಮಾಗೆ 10ಕ್ಕೆ 8 ರೇಟಿಂಗ್ ನೀಡಲಾಗಿತ್ತು. ಇದೀಗ ಕಾಂತಾರ ಅತೀ ಹೆಚ್ಚು ರೇಟಿಂಗ್ ಪಡೆಯುವ ಮೂಲಕ ದಾಖಲೆ ನಿರ್ಮಿಸಿದೆ.
ಕರಾವಳಿಯ ಸಂಸ್ಕೃತಿ, ಆಚಾರ-ವಿಚಾರವನ್ನು ಕಾಂತಾರ ಮೂಲಕ ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ ರಿಷಬ್. ಕಾಡಿನ ಜೊತೆ ಬದುಕುವ ಜನರು ಮತ್ತು ಸರ್ಕಾರಿ ಅಧಿಕಾರಿಗಳ ಸಂಘರ್ಷ, ಉಳ್ಳವರು ಮತ್ತು ಇಲ್ಲದವರ ನಡುವಿನ ಹೋರಾಟದ ಬಗ್ಗೆ ರಿಷಬ್ ಶೆಟ್ಟಿ ಕಾಂತಾರ ಮೂಲಕ ಜನರ ಮುಂದಿಟ್ಟಿದ್ದಾರೆ. ಜೊತೆಗೆ ದೈವಾರಾಧನೆ, ಭೂತಕೋಲ ಆಚರಣೆ ಕಾಂತಾರದ ಹೈಲೆಟ್. ಈ ಚಿತ್ರಕ್ಕೆ ರಿಷಬ್ ಶೆಟ್ಟಿ ನಟಿಸುವ ಜೊತೆಗೆ ನಿರ್ದೇಶನದ ಜಬಾವ್ದಾರಿಯನ್ನು ವಹಿಸಿಕೊಂಡಿದ್ದರು. ಅಜನೀಶ್ ಲೋಕಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ.
ಚಿತ್ರದಲ್ಲಿ ರಿಷಬ್ ಶೆಟ್ಟಿ ಜೊತೆ ಕಿಶೋರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ನಾಯಕಿಯಾಗಿ ಸಪ್ತಮಿ ಗೌಡ ಕಾಣಿಸಿಕೊಂಡಿದ್ದಾರೆ. ಅಚ್ಯುತ್ ಕುಮಾರ್ ಸಹ ಪಾತ್ರದಲ್ಲಿ ನಟಿಸಿದ್ದಾರೆ. ಸ್ಯಾಂಡಲ್ ವುಡ್‌ನ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಕಾಂತಾರ ಮೂಡಿಬಂದಿದೆ.
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…