ಚಿತ್ರ ಮಂಜರಿ

ನವೆಂಬರ್‌ 27ಕ್ಕೆ ಕಾಂತಾರ ಪ್ರೀಕ್ವೆಲ್‌ ಫಸ್ಟ್ ಲುಕ್ ರಿಲೀಸ್

ಈ ತಿಂಗಳಾಂತ್ಯಕ್ಕೆ ಡಿವೈನ್‌ ಸ್ಟಾರ್‌ ರಿಷಬ್‌ ಶೆಟ್ಟಿ ಅವರ ಬಹುನಿರೀಕ್ಷಿತ ಸಿನಿಮಾ ಕಾಂತಾರ 1 ಪ್ರೀಕ್ವೆಲ್‌ ನ ಫಸ್ಟ್‌ ಲುಕ್‌ ಬಿಡುಗಡೆಯಾಗಲಿದೆ.

ಇದೇ ನವೆಂಬರ್‌ 27 ರಂದು ಮಧ್ಯಾಹ್ನ 12 – 25ಕ್ಕೆ ಸಿನಿಮಾದ ಫಸ್ಟ್‌ ಲುಕ್‌ ಬಿಡುಗಡೆಯಾಗಲಿದೆ ಎಂದು ಹೊಂಬಾಳೆ ಫಿಲ್ಮ್ಸ್‌ ಮಾಹಿತಿ ಹಂಚಿಕೊಂಡಿದೆ.

ತುಳುನಾಡಿನ ಸಂಪ್ರದಾಯ ಹಾಗೂ ದೈವಾಚರಣೆ ಕುರಿತಾದ ಕಾಂತಾರ ಸಿನಿಮಾ ಪ್ಯಾನ್‌ ಇಂಡಿಯಾ ಲೆವೆಲ್‌ ನಲ್ಲಿ ಗೆದ್ದು ಬೀಗಿತ್ತು. ಹೊಂಬಾಳೆ ಫೀಲ್ಮ್ಸ್ ಕಾಂತಾರ ಬಳಿಕ ಬಾಕ್ಸ್‌ ಆಫೀಸ್‌ ನಲ್ಲಿ 400 ಕೋಟಿಗೂ ಅಧಿಕ ಗಳಿಕೆ ಕಂಡಿತ್ತು.

ಕಾಂತಾರ ಪಾರ್ಟ್‌ 1 ಸಕ್ಸಸ್‌ ಕಂಡ ಬಳಿಕ ಎರಡನೇ ಭಾಗವೂ ಕೂಡ ಸಿನಿರಸಿಕರ ಮುಂದೆ ಬರಲಿದೆ ಎಂದು ರಿಶಬ್‌ ಶೆಟ್ಟಿ ಅವರು ಸಿನಿಮಾದ ಶತದಿನ ಸಂಭ್ರಮದ ವೇಳೆ ಹೇಳಿದ್ದರು. ಅದಾದ ನಂತರ ಸ್ಕ್ರಿಪ್ಟ್‌ ಹಾಗೂ ಲೋಕೇಶನ್‌ ಹುಡುಕಾಟ ಪೂರ್ಣಗೊಳಿಸಿ, ಸಿನಿಮಾ ಕುರಿತು ಒಂದೊಂದೇ ಅಪ್ಡೇಟ್‌ ನೀಡುತ್ತಾ ಬಂದಿದ್ದರು. ಇದೀಗ ಚಿತ್ರತಂಡ ಇದೇ ತಿಂಗಳ 27 ರಂದು ಪ್ರೀಕ್ವೆಲ್‌ ನ ಫಸ್ಟ್‌ ಲುಕ್‌ ರಿಲೀಸ್‌ ಮಾಡುವುದಾಗಿ ಘೋಷಣೆ ಮಾಡಿದ್ದು ಸಿನಿ ಪ್ರಿಯರು ಫುಲ್‌ ಖುಷ್‌ ಆಗಿದ್ದಾರೆ.

ಪ್ರಿಕ್ವೆಲ್‌ ನಲ್ಲಿ ಪಂಜುರ್ಲಿ ದೈವದ ಹುಟ್ಟು ಹಾಗೂ ಮೂಲದ ಕುರಿತ ಕಥೆ ಇದೆ ಎನ್ನಲಾಗಿದೆ. ಈ ತಿಂಗಳ ಕೊನೆಯಲ್ಲಿ ಉಡುಪಿಯಲ್ಲಿ ಸಿನಿಮಾದ ಮುಹೂರ್ತ ನಡೆಯಲಿದೆ ಎನ್ನಲಾಗುತ್ತಿದೆ.

ಕಾಂತಾರ ಮೊದಲ ಭಾಗದಂತೆ ಎರಡನೇ ಭಾಗವು ಕೂಡ ಯಶಸ್ಸನ್ನು ಕಾಣಬೇಕೆಂದು ರಿಷಬ್ ಶೆಟ್ಟಿ ತೆರೆಮರೆಯಲ್ಲಿ ಭರ್ಜರಿ ಕಸರತ್ತು ನಡೆಸಿದ್ದಾರೆ. ಅದಕ್ಕಾಗಿ ತಮ್ಮ ಗೆಟಪ್ ಕೂಡ ಬದಲಾಯಿಸಿಕೊಂಡಿದ್ದಾರೆ.

ಇತ್ತೀಚಿಗಷ್ಟೇ ಕುಟುಂಬಸ್ಥರೊಂದಿಗೆ ದೀಪಾವಳಿ ಆಚರಿಸಿದ್ದ ರಿಶಬ್ ಶೆಟ್ಟಿ, ಸೋಶಿಯಲ್ ಮೀಡಿಯಾದಲ್ಲಿ ಹಬ್ಬದ ಆಚರಣೆಯ ಫೋಟೋಗಳನ್ನು ಹಂಚಿಕೊಂಡಿದ್ದರು. ಆ ಫೋಟೋದಲ್ಲಿ ರಿಷಬ್ ಶೆಟ್ಟಿ ಎಂದಿನಂತೆ ಕಾಣಿಸಿರಲಿಲ್ಲ. ಬದಲಾಗಿ ನ್ಯೂ ಲುಕ್ ನಲ್ಲಿ ಕಾಣಿಸಿಕೊಂಡಿದ್ದರು. ಈ ಫೋಟೋ ನೋಡಿದ ಅಭಿಮಾನಿಗಳು ಕಾಂತಾರ 2ಗಾಗಿ ರಿಷಬ್ ತಮ್ಮ ಗೆಟಪ್ ಬದಲಿಸಿಕೊಂಡಿದ್ದಾರೆ ಎಂದು ಮಾತನಾಡಿಕೊಳ್ಳುತ್ತಿದ್ದರು.

ಇದೀಗ ಅಭಿಮಾನಿಗಳ ಮಾತು ಸತ್ಯವಾಗಿದೆ. ಕಾಂತಾರ 2 ನಲ್ಲಿ ರಿಷಬ್ ಶೆಟ್ಟಿ ಹೊಸ ಅವತಾರದಲ್ಲಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ಮುಹೂರ್ತದ ಬಳಿಕ ಸಿನಿಮಾ ಬಗ್ಗೆ ಹೆಚ್ಚಿನ ಅಪ್ಡೇಟ್ ಹೊರಬರಲಿದೆ.

 

lokesh

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

5 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

11 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

12 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

13 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

13 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

19 hours ago