Mysore
22
moderate rain

Social Media

ಮಂಗಳವಾರ, 06 ಅಕ್ಟೋಬರ್ 2026
Light
Dark

ಕಾಂತಾರದಲ್ಲಿ ಮತ್ತೆ ‘ವರಾಹ ರೂಪಂ’ ಹಾಡು ಸೇರ್ಪಡೆ

ವರಾಹ ರೂಪಂ’ ಹಾಡಿನ ಕುರಿತು ವಿವಾದ ಸೃಷ್ಟಿಯಾಗಿತ್ತು. ಕೇರಳದ ಕೋರ್ಟ್​ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್​, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ.

ಕಾಂತಾರ ಸಿನಿಮಾದ ಜನಪ್ರಿಯ ವರಾಹ ರೂಪಂ ಹಾಡಿನ ವಿಚಾರವಾಗಿ ತಗಾದೆ ತೆಗೆದು ನ್ಯಾಯಾಲಯದ ಮೆಟ್ಟಿಲೇರಿದ್ದ ಕೇರಳದ ತೈಕ್ಕುಡಂ ಬ್ರಿಡ್ಜ್ ಆಲ್ಬಂ ತಂಡಕ್ಕೆ ಹಿನ್ನಡೆಯಾಗಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ‘ವರಾಹ ರೂಪಂ’ ಹಾಡಿನ ಕುರಿತು ವಿವಾದ ಸೃಷ್ಟಿಯಾಗಿತ್ತು. ಆದ್ರೀಗ ಕೇರಳದ ಕೋರ್ಟ್​ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್​, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ.

ಇದಕ್ಕೂ ಮುನ್ನ, ವರಾಹ ರೂಪಂ ಹಾಡನ್ನು ಯೂಟ್ಯೂಬ್ ಸೇರಿದಂತೆ ಯಾವುದೇ ಪ್ಲಾಟ್​ಫಾರ್ಮ್​ಗಳಲ್ಲಿ ಅನುಮತಿ ಇಲ್ಲದೇ ಬಳಸಬಾರದು ಎಂದು ಕೇರಳದ ಕೋರ್ಟ್​ ಆದೇಶ ಹೊರಡಿಸಿತ್ತು. ಇದಕ್ಕೆ ತಲೆ ಬಾಗಿದ್ದ ಕಾಂತಾರ ಚಿತ್ರ ತಂಡವು, ‘ವರಾಹ ರೂಪಂ’ ಹಾಡನ್ನು ಚಿತ್ರಮಂದಿರ, ಹೊಂಬಾಳೆ ಫಿಲಂಸ್​ನ ಯೂಟ್ಯೂಬ್​ ಚಾನಲ್​, ಮ್ಯೂಸಿಕ್ ಆ್ಯಪ್​ಗಳಾದ ಸಾವನ್ ಸೇರಿದಂತೆ ಮುಂತಾದ ಕಡೆಗಳಿಂದ ಹಾಡನ್ನು ಡಿಲೀಟ್​ ಮಾಡಿತ್ತು. ಓಟಿಟಿಯಲ್ಲಿ ‘ಕಾಂತಾರ’ ಚಿತ್ರ ಬಿಡುಗಡೆಯಾದಾಗಿನಿಂದ ಬೇರೆ ಟ್ಯೂನ್​ ಬಳಸಲಾಗಿತ್ತು.ಆ ನಂತರ ತಡೆಯಾಜ್ಞೆ ತೆರವಾಗಿ ಹಾಡನ್ನು ಪುನಃ ಬಳಸಿಕೊಳ್ಳುವುದಕ್ಕೆ ಅನುಮತಿ ಸಿಕ್ಕಿದೆ. ಅದರಂತೆ, ಇಂದಿನಿಂದ ಚಿತ್ರಮಂದಿರ, ಓಟಿಟಿ, ಸೋಷಿಯಲ್​ ಮೀಡಿಯಾ ಸೇರಿದಂತೆ ಎಲ್ಲ ವೇದಿಕೆಗಳಲ್ಲೂ ಮೂಲ ‘ವರಾಹ ರೂಪಂ’ ಹಾಡು ಲಭ್ಯವಿದೆ. ಕೆಲ ದಿನಗಳ ಹಿಂದೆ ಅಮೆಜಾನ್ ಪ್ರೈಮ್ ಸಂಸ್ಥೆಯು ವರಾಹ ರೂಪಂ ಮೂಲ ಹಾಡನ್ನು ತಮಿಳು ಮತ್ತು ಮಲಯಾಳಂ ಆವೃತ್ತಿಯಲ್ಲಿ ಸೇರಿಸಿತ್ತು. ಇದೀಗ ಕನ್ನಡದಲ್ಲೂ ಲಭ್ಯವಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!