ವರಾಹ ರೂಪಂ’ ಹಾಡಿನ ಕುರಿತು ವಿವಾದ ಸೃಷ್ಟಿಯಾಗಿತ್ತು. ಕೇರಳದ ಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ.
ಕಾಂತಾರ ಸಿನಿಮಾದ ಜನಪ್ರಿಯ ವರಾಹ ರೂಪಂ ಹಾಡಿನ ವಿಚಾರವಾಗಿ ತಗಾದೆ ತೆಗೆದು ನ್ಯಾಯಾಲಯದ ಮೆಟ್ಟಿಲೇರಿದ್ದ ಕೇರಳದ ತೈಕ್ಕುಡಂ ಬ್ರಿಡ್ಜ್ ಆಲ್ಬಂ ತಂಡಕ್ಕೆ ಹಿನ್ನಡೆಯಾಗಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ‘ವರಾಹ ರೂಪಂ’ ಹಾಡಿನ ಕುರಿತು ವಿವಾದ ಸೃಷ್ಟಿಯಾಗಿತ್ತು. ಆದ್ರೀಗ ಕೇರಳದ ಕೋರ್ಟ್ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವ ಹಿನ್ನೆಲೆಯಲ್ಲಿ ಆ ಹಾಡು ಇಂದಿನಿಂದ ಚಿತ್ರಮಂದಿರ, ಯೂಟ್ಯೂಬ್, ಓಟಿಟಿ ಸೇರಿದಂತೆ ಎಲ್ಲೆಡೆ ಲಭ್ಯವಿದೆ.
ಇದಕ್ಕೂ ಮುನ್ನ, ವರಾಹ ರೂಪಂ ಹಾಡನ್ನು ಯೂಟ್ಯೂಬ್ ಸೇರಿದಂತೆ ಯಾವುದೇ ಪ್ಲಾಟ್ಫಾರ್ಮ್ಗಳಲ್ಲಿ ಅನುಮತಿ ಇಲ್ಲದೇ ಬಳಸಬಾರದು ಎಂದು ಕೇರಳದ ಕೋರ್ಟ್ ಆದೇಶ ಹೊರಡಿಸಿತ್ತು. ಇದಕ್ಕೆ ತಲೆ ಬಾಗಿದ್ದ ಕಾಂತಾರ ಚಿತ್ರ ತಂಡವು, ‘ವರಾಹ ರೂಪಂ’ ಹಾಡನ್ನು ಚಿತ್ರಮಂದಿರ, ಹೊಂಬಾಳೆ ಫಿಲಂಸ್ನ ಯೂಟ್ಯೂಬ್ ಚಾನಲ್, ಮ್ಯೂಸಿಕ್ ಆ್ಯಪ್ಗಳಾದ ಸಾವನ್ ಸೇರಿದಂತೆ ಮುಂತಾದ ಕಡೆಗಳಿಂದ ಹಾಡನ್ನು ಡಿಲೀಟ್ ಮಾಡಿತ್ತು. ಓಟಿಟಿಯಲ್ಲಿ ‘ಕಾಂತಾರ’ ಚಿತ್ರ ಬಿಡುಗಡೆಯಾದಾಗಿನಿಂದ ಬೇರೆ ಟ್ಯೂನ್ ಬಳಸಲಾಗಿತ್ತು.ಆ ನಂತರ ತಡೆಯಾಜ್ಞೆ ತೆರವಾಗಿ ಹಾಡನ್ನು ಪುನಃ ಬಳಸಿಕೊಳ್ಳುವುದಕ್ಕೆ ಅನುಮತಿ ಸಿಕ್ಕಿದೆ. ಅದರಂತೆ, ಇಂದಿನಿಂದ ಚಿತ್ರಮಂದಿರ, ಓಟಿಟಿ, ಸೋಷಿಯಲ್ ಮೀಡಿಯಾ ಸೇರಿದಂತೆ ಎಲ್ಲ ವೇದಿಕೆಗಳಲ್ಲೂ ಮೂಲ ‘ವರಾಹ ರೂಪಂ’ ಹಾಡು ಲಭ್ಯವಿದೆ. ಕೆಲ ದಿನಗಳ ಹಿಂದೆ ಅಮೆಜಾನ್ ಪ್ರೈಮ್ ಸಂಸ್ಥೆಯು ವರಾಹ ರೂಪಂ ಮೂಲ ಹಾಡನ್ನು ತಮಿಳು ಮತ್ತು ಮಲಯಾಳಂ ಆವೃತ್ತಿಯಲ್ಲಿ ಸೇರಿಸಿತ್ತು. ಇದೀಗ ಕನ್ನಡದಲ್ಲೂ ಲಭ್ಯವಿದೆ.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…