ಬೆಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರನ್ನಾಗಿ ಖ್ಯಾತ ಸಿನಿಮಾಟೋಗ್ರಾಫರ್ ಅಶೋಕ್ ಕಶ್ಯಪ್ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಸುನೀಲ್ ಪುರಾಣಿಕ್ರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಅಶೋಕ್ ಕಶ್ಯಪ್ ನೇಮಕವಾಗಿದೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವ್ಯಾಪ್ತಿಯ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷರ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಮೂರು ವರ್ಷದ ಅವಧಿಗೆ ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ ಅಶೋಕ್ ಕಶ್ಯಪ್ ನೇಮಿಸಿ ಆದೇಶಿಸಲಾಗಿದೆ.ಅಶೋಕ್ ಕಶ್ಯಪ್ ಕನ್ನಡದ ಸಾಕಷ್ಟು ಸಿನಿಮಾಗಳಿಗೆ ಸಿನಿಮಾಟೋಗ್ರಾಫರ್ ಆಗಿ ಕೆಲಸ ಮಾಡಿದ್ದರು. ಅವರು ‘ಲಿಫ್ಟ್ ಕೊಡ್ಲಾ’, ‘ಧ್ವಜ’ ಸೇರಿದಂತೆ ಹಲವು ಚಿತ್ರಗಳನ್ನು ನಿರ್ದೇಶನ ಮಾಡಿದ್ದಾರೆ. ಈ ಹಿಂದೆ ಅಶೋಕ್ ಅವರು ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇತ್ತೀಚೆಗಷ್ಟೇ ರಾಷ್ಟ್ರ ಪ್ರಶಸ್ತಿ ಪಡೆದ ‘ತಲೆದಂಡ’ ಸಿನಿಮಾಗೆ ಅಶೋಕ್ ಕಶ್ಯಪ್ ಸಿನಿಮಾಟೋಗ್ರಾಫರ್ ಆಗಿ ಕೆಲಸ ಮಾಡಿದ್ದಾರೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…