ಬೆಂಗಳೂರು : ಕ್ಯಾನ್ಸರ್ ಪೀಡಿತ ಪುಟ್ಟ ಅಭಿಮಾನಿಯನ್ನು ನಟ ಕಿಚ್ಚ ಸುದೀಪ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಕ್ಯಾನ್ಸರ್ ನಿಂದ ಬಳಲುತ್ತಿರುವ ಸಾಕ್ಷಿ ಎಂಬ ಬಾಲಕಿ ಕಿಚ್ಚ ಸುದೀಪ್ ಅಪ್ಪಟ ಅಭಿಮಾನಿ. ಜೀವನದಲ್ಲಿ ಒಮ್ಮೆಯಾದರೂ ತಮ್ಮ ನೆಚ್ಚಿನ ಸ್ಟಾರ್ ಕಿಚ್ಚ ಸುದೀಪ್ ಅವರನ್ನು ಭೇಟಿಯಾಗಬೇಕು ಎಂಬುದು ಸಾಕ್ಷಿ ಆಸೆ. ಬಾಲಕಿಯ ಆಸೆ ಮತ್ತು ಆರೋಗ್ಯ ಸಮಸ್ಯೆ ಬಗ್ಗೆ ತಿಳಿದುಕೊಂಡ ಕಿಚ್ಚ ಸುದೀಪ್ ತನ್ನ ಅಭಿಮಾನಿ ಹಾಗೂ ಅವರ ಕುಟುಂಬಸ್ಥರನ್ನ ಭೇಟಿ ಮಾಡಿದ್ದಾರೆ.
ಬೆಂಗಳೂರಿನ ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಾಕ್ಷಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ‘ಆಟೋಗ್ರಾಫ್’ ನೀಡಿ ಪ್ರೀತಿಯಿಂದ ಅಭಿಮಾನಿಗೆ ಅಪ್ಪುಗೆ ಕೊಟ್ಟಿದ್ದಾರೆ.
ಸುದೀಪ್ ಭೇಟಿಯಾದ ಖುಷಿ ಕ್ಷಣಗಳನ್ನು ಹಂಚಿಕೊಂಡಿರುವ ಸಾಕ್ಷಿ, ನನಗೆ ಸುದೀಪ್ ಸರ್ ಇಷ್ಟ. ರನ್ನ ಸಿನಿಮಾದ ಥಿತಲಿ ಹಾಡು ನನಗೆ ಸ್ಪೂರ್ತಿ ಎಂದಿದ್ದಾರೆ. ಕೋಟಿಗೊಬ್ಬನ್ನು ನೋಡಿ ಆ ಪುಟ್ಟ ಅಭಿಮಾನಿಯ ಖುಷಿಗೆ ಪಾರವೇ ಇಲ್ಲ. ಕಿಚ್ಚನ ಈ ಹೃದಯವಂತಿಕೆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಫ್ಯಾನ್ಸ್ ಸಲಾಂ ಎಂದಿದ್ದಾರೆ.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…