ಬಹಳ ವರ್ಷಗಳಿಂದ ಕಿಚ್ಚ ಸುದೀಪ್ ಫ್ಯಾನ್ಸ್ ಪ್ರಾರಂಭಿಸಿರುವ ಸಂಜೀವಿನಿ ಜೀವ ರಕ್ಷಕ ಟ್ರಸ್ಟ್ ಸಮಾಜ ಸೇವೆಗೆ ಟೊಂಕ ಕಟ್ಟಿ ನಿಂತಿದೆ. ಅದರಂತೆ ಈ ಟ್ರಸ್ಟ್ ಈಗ ಮ್ಯಾಕ್ಸ್ ಹೆಸರಿನ ಆಂಬುಲೆನ್ಸ್ ಸೇವೆ ಪ್ರಾರಂಭಿಸಿದೆ. ಇಂದು ಮಾಕ್ಸ್ ಹೆಸರಿನ ಆಂಬುಲೆನ್ಸ್ ನ್ನು ಸುದೀಪ್ ಸಾವರ್ಜನಿಕ ಸೇವೆಗೆ ಲೋಕಾರ್ಪಣೆಗೊಳಿಸಿದ್ದಾರೆ.
ಅಂದಹಾಗೇ ಮ್ಯಾಕ್ಸ್ ಕಿಚ್ಚ ನಟನೆಯ ಬಹು ನಿರೀಕ್ಷಿತ ಸಿನಿಮಾಗಳಲ್ಲೊಂದು. ಈ ಚಿತ್ರದ ಮೊದಲ ಗ್ಲಿಂಪ್ಸ್ ಫ್ಯಾನ್ಸ್‌ಗೆ ಇಷ್ಟ ಆಗಿದೆ. ಈ ಚಿತ್ರದಲ್ಲಿ ಸುದೀಪ್ ಅವರು ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮ್ಯಾಕ್ಸ್ ಸಿನಿಮಾ ಕ್ಲೈಮ್ಯಾಕ್ಸ್ ಶೂಟ್ ಪುನರಾರಂಭವಾಗಿದ್ದು, ಈಗಾಗಲೇ ಶೂಟ್ ಮಾಡಲಾದ ಭಾಗಕ್ಕೆ ಎಲ್ಲಾ ಹೀರೋಗಳು ಧ್ವನಿ ನೀಡಿದ್ದಾರೆ.
ಕಾಲಿವುಡ್‌ನ ಖ್ಯಾತ ಡೈರೆಕ್ಟರ್ ವಿಜಯ್ ಕಾರ್ತಿಕೇಯ ನಿರ್ದೇಶದ ಸಿನಿಮಾದಲ್ಲಿ ಇದೇ ಮೊದಲ ಬಾರಿಗೆ ಸುದೀಪ್ ನಟಿಸಿದ್ದು, ವಿಭಿನ್ನ ಕಥೆಯಲ್ಲಿ ಸುದೀಪ್ ಜೀವತುಂಬಿದ್ದಾರೆ.
ಮ್ಯಾಕ್ಸ್ ಚಿತ್ರದಲ್ಲಿ ವರಲಕ್ಷ್ಮಿ ಶರತ್‌ಕುಮಾರ್, ಸಂಯುಕ್ತಾ ಹೊರನಾಡ್, ಕಾಮರಾಜ್, ಸುಕೃತಾ ವಾಗ್ಲೆ ಸೇರಿದಂತೆ ಹಲವರು ನಟಿಸಿದ್ದಾರೆ. ಇದು ಸಾಹಸಮಯ ಚಿತ್ರವಾಗಿದ್ದು ಮತ್ತು ವಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಕಲೈಪ್ಪುಲಿ ಎಸ್ ಥಾನು ನಿರ್ಮಾಪಕರಾಗಿದ್ದಾರೆ.
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…