ಚಿತ್ರ ಮಂಜರಿ

ಎಂಟು ಎಕರೆ ವ್ಯಾಪ್ತಿಯ ಫಾರ್ಮ್‌ ಹೌಸ್‌ ಖರೀದಿಸಿದ ಕೊಹ್ಲಿ-ಅನುಷ್ಕಾ

ನವದೆಹಲಿ: ಸದ್ಯ ಏಷ್ಯಾ ಕಪ್‌ ಸರಣಿಯಲ್ಲಿ ಬ್ಯುಸಿ ಇರುವ ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ ಮತ್ತು ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ದಂಪತಿ ಅಲಿಬಾಘ್‌ನಲ್ಲಿ ಫಾರ್ಮ್‌ ಹೌಸ್‌ ಒಂದನ್ನು ಖರೀದಿಸಿದ್ದಾರೆ.

ಗಣೇಶ ಚತುರ್ಥಿ ಹಬ್ಬದ ದಿನವೇ ಈ ಫಾರ್ಮ್‌ ಹೌಸನ್ನು ಖರೀದಿ ಮಾಡಿದ್ದಾರೆ. ಇದರ ಪಕ್ಕದಲ್ಲೇ ದೀಪಿಕಾ ಪಡುಕೋಣೆ ಮತ್ತು ರಣ್ವೀರ್‌ ಸಿಂಗ್‌ ಕೂಡ ಈ ಹಿಂದೆ ಫಾರ್ಮ್‌ ಹೌಸ್‌ ಖರೀದಿಸಿದ್ದರು. ಅದ್ದೂರಿ ಕಾರುಗಳನ್ನು, ನಿವಾಸಗಳನ್ನು ಸ್ಟಾರ್‌ ದಂಪತಿಗಳು ಆಗಾಗ ಖರೀದಿಸುತ್ತಲೇ ಇರುತ್ತಾರೆ. ಇದೀಗ ಅಲಿಬಾಘ್‌ನ ರಿಯಲ್‌ ಎಸ್ಟೇಟ್‌ನಲ್ಲಿ ಕೊಹ್ಲಿ ದಂಪತಿ ಹೂಡಿಕೆ ಮಾಡಿದ್ದಾರೆ.

ಎಂಟು ಎಕರೆ ವ್ಯಾಪ್ತಿಯನ್ನು ಹೊಂದಿರುವ ಫಾರ್ಮ್‌ ಹೌಸ್‌ ಇದಾಗಿದ್ದು ಒಟ್ಟೂ ಮೌಲ್ಯ 19.24 ಕೋಟಿ ರೂಪಾಯಿಗಳಾಗಿದ್ದು, ರಿಜಿಸ್ಟ್ರೇಷನ್‌ಗೆಂದೇ ಕೊಹ್ಲಿ – ಅನುಷ್ಕಾ 1.15 ಕೋಟಿ ರೂ ಕಟ್ಟಿದ್ದಾರೆ. ಜತೆಗೆ ರೂ 3.35 ಲಕ್ಷ ಅಂಚೆ ಮೌಲ್ಯವನ್ನೂ ಪಾವತಿಸಿದ್ದಾರೆ ಎಂದು ಎಕನಾಮಿಕ್‌ ಟೈಮ್ಸ್‌ ವರದಿ ತಿಳಿಸಿದೆ.
ಕಳೆದ ತಿಂಗಳು ಇದೇ ಪ್ರದೇಶದಲ್ಲಿ ರಣ್ವೀರ್‌ ಸಿಂಗ್‌ ಮತ್ತು ದೀಪಿಕಾ ಪಡುಕೋಣೆ ಫಾರ್ಮ್‌ ಹೌಸ್‌ ಗೃಹ ಪ್ರವೇಶ ಮಾಡಿದ್ದರು.

ಅನುಷ್ಕಾ ಶರ್ಮಾ ಸದ್ಯ ಚಕ್ದಾ ಎಕ್ಸ್‌ಪ್ರೆಸ್‌ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಇಂಗ್ಲೆಂಡಿನ ಲೀಡ್ಸ್‌ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಚಕ್ದಾ ಎಕ್ಸ್‌ಪ್ರೆಸ್‌ ಭಾರತ ಮಹಿಳಾ ತಂಡದ ಮಾಜಿ ನಾಯಕಿ ಜೂನ್‌ ಗೋಸ್ವಾಮಿ ಅವರ ಜೀವನಾಧಾರಿತ ಚಿತ್ರವಾಗಿದೆ. ಇತ್ತೀಚೆಗಷ್ಟೇ ತಾಪ್ಸಿ ಪನ್ನು ಅವರು ಮಿಥಾಲಿ ರಾಜ್‌ ಅವರ ಜೀವನಾಧಾರಿತ ಶಭಾಷ್‌ ಮಿಥು ಚಿತ್ರ ಬಿಡುಗಡೆಯಾಗಿತ್ತು. ಚಕ್ದಾ ಎಕ್ಸ್‌ಪ್ರೆಸ್‌ ನೇರವಾಗಿ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ.

 

andolana

Recent Posts

2.20ಕೋಟಿ ರೂ.ಮೌಲ್ಯದ ಚಿನ್ನಾಭರಣ ವಶ ; 26 ಮಂದಿ ಬಂಧನ.

ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…

3 hours ago

ತಳಸಮುದಾಯಕ್ಕೆ ಆರ್ಥಿಕ ಸಾಮಾಜಿಕ ಶಕ್ತಿ ಅಗತ್ಯ : ಸಿಎಂ

ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…

3 hours ago

ಅಭಿವೃದ್ಧಿ ವಿಷಯದಲ್ಲಿ ರಾಜ್ಯ ಸರ್ಕಾರದ ಜತೆ ನಿಲ್ಲುತ್ತೇನೆ : ಕೇಂದ್ರ ಸಚಿವ ಎಚ್‌ಡಿಕೆ

ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…

3 hours ago

IPL 2026 | ಮುಂಬೈ ವಿರುದ್ಧ ಡೆಲ್ಲಿಗೆ ಭರ್ಜರಿ ಜಯ

ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…

4 hours ago

ಇರಾನ್ ಮೇಲೆ ಕ್ಷಿಪಣಿ ದಾಳಿ ; ಬುಶೆಹರ್ ಅಣುಸ್ಥಾವರದ ಬಳಿ ಹಾನಿ

ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…

4 hours ago

ಇಂಧನ ವ್ಯತ್ಯಯ ಆತಂಕ ; ಎಲೆಕ್ಟ್ರಿಕ್‌ ವಾಹನ ಮಾರಾಟದಲ್ಲಿ ಏರಿಕೆ

ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…

4 hours ago