ಚಿತ್ರ ಮಂಜರಿ

ಲೀಡರ್‌ ರಾಮಯ್ಯ : ವಿಜಯ್‌ ಸೇತುಪತಿ ಡೇಟ್ಸ್‌ಗಾಗಿ ಕಾಯುತ್ತಿದೆ ಚಿತ್ರತಂಡ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೀವನಾಧಾರಿತ ಚಿತ್ರದ ಕಥೆಯನ್ನು ಕಳೆದ ಏಳು ತಿಂಗಳಿನಿಂದ ಸಿದ್ದಪಡಿಸಲಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರ ಬಯೋಪಿಕ್‍ಗೆ ‘ಲೀಡರ್ ರಾಮಯ್ಯ’ ಎಂದು ಟೈಟಲ್ ಇಡಲಾಗಿದೆ. ಈ ಸಿನಿಮಾವನ್ನು ಪ್ಯಾನ್ ಇಂಡಿಯಾ ಲೆವೆಲ್‍ನಲ್ಲಿ ತೆರೆಗೆ ತರಲು ಪ್ಲ್ಯಾನ್ ಕೂಡ ಮಾಡಿಕೊಳ್ಳಲಾಗಿದೆ.

ಲೀಡರ್ ರಾಮಯ್ಯ ಟೈಟಲ್ ಜೊತೆಗೆ ಎ ಕಿಂಗ್ ರೈಸ್ಡ್ ಬೈ ದಿ ಪೀಪಲ್ ಎಂಬ ಟ್ಯಾಗ್ ಲೈನ್ ಒಳಗೊಂಡಿದೆ. ರಾಜ್ಯದ 24 ನೇ ಮುಖ್ಯಮಂತ್ರಿಯ ಜೀವನದ ಸುತ್ತ ಈ ಕತೆ ಸುತ್ತುತ್ತದೆ. ಸತ್ಯರತ್ನಂ ನಿರ್ದೇಶನದ ಈ ಚಿತ್ರ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ ಎಂಬುದು ಲೇಟೆಸ್ಟ್ ಡೆವಲಪ್ ಮೆಂಟ್.

ಆಗಸ್ಟ್‌ ನಲ್ಲಿ ಚಿತ್ರೀಕರಣವನ್ನು ಪ್ರಾರಂಭಿಸಲು ನಿರ್ದೇಶಕರು ಸಿದ್ಧತೆಯಲ್ಲಿದ್ದಾರೆ. ತಮಿಳು ನಟ ವಿಜಯ್ ಸೇತುಪತಿಯನ್ನು ಕರೆತರಲು ಬಹಳ ಉತ್ಸುಕರಾಗಿರುವ ಚಿತ್ರದ ನಿರ್ಮಾಪಕರು ಅವರನ್ನು ಈಗಾಗಲೇ ಸಂಪರ್ಕಿಸಿದ್ದಾರೆ. ತಂಡದ ಮಾಹಿತಿ ಪ್ರಕಾರ, ವಿಜಯ್ ಸೇತುಪತಿ ಈ ಚಿತ್ರದಲ್ಲಿ ನಟಿಸಲು ಹಸಿರು ನಿಶಾನೆ ತೋರಿಸಿದ್ದಾರೆ, ಸೇತು ಪತಿ ಅವರ ಡೇಟ್ಸ್ ಗಾಗಿ ಕಾಯಲು ಪ್ರೊಡಕ್ಷನ್ ಹೌಸ್ ಸಿದ್ಧವಾಗಿದೆ. ಸಿದ್ದರಾಮಯ್ಯನವರ ಪಾತ್ರದಲ್ಲಿ ವಿಜಯ್ ಸೇತುಪತಿ ನಟಿಸಲಿದ್ದು, ವಕೀಲರಾಗಿ ವೃತ್ತಿ ಪ್ರಯಾಣ ಆರಂಭಿಸಿದಾಗಿನಿಂದ ಕಥೆ ಪ್ರಾರಂಭವಾಗಲಿದೆ. ಈ ಬಯೋಪಿಕ್ಸ್ ನಲ್ಲಿ 20 ರಿಂದ 30 ನಿಮಿಷಗಳಲ್ಲಿ ಸಿಎಂ ಸಿದ್ದರಾಮಯ್ಯ ಕಾಣಿಸಿಕೊಳ್ಳುವ ನಿರೀಕ್ಷೆಯಿದೆ.

ಬಯೋಪಿಕ್ ನ ಮೊದಲು ಭಾಗ 1 ರಲ್ಲಿ ಸಿದ್ಧರಾಮಯ್ಯ ಅವರ ಬೆಳವಣಿಗೆಯ ಬಾಲ್ಯದ ದಿನಗಳು ಮತ್ತು ಪ್ರೌಢಾವಸ್ಥೆಯ ಪ್ರಯಾಣ ತಿಳಿಸುತ್ತದೆ. ಸಿದ್ಧರಾಮಯ್ಯ ಅವರ ಕಿರಿಯ ಆವೃತ್ತಿಯನ್ನು ನಿರ್ವಹಿಸುವ ಯುವ ನಟನ ಹುಡುಕಾಟದಲ್ಲಿದ್ದಾರೆ. ಚಿತ್ರದಲ್ಲಿ ಇಬ್ಬರು ನಾಯಕಿಯರು ಇರುತ್ತಾರೆ.

ನಾಯಕಿಯರ ಫೈನಲ್ ಆದಾಗ ಉಳಿದ ಕಲಾವಿದರ ಘೋಷಣೆ ಮಾಡಲಾಗುತ್ತದೆ. ಪ್ರಾಜೆಕ್ಟ್ ನ ಭಾಗವಾಗಿ ಕನ್ನಡದಿಂದ ಕೆಲವು ಸೂಪರ್‍ ಸ್ಟಾರ್‌ ಗಳನ್ನು ಕರೆತರಲು ನಿರ್ದೇಶಕರು ಚಿಂತಿಸುತ್ತಿದ್ದು, ಈ ಸಂಬಂಧ ಈಗಾಗಲೇ ಹಲವು ನಟರ ಜೊತೆ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಲೀಡರ್ ರಾಮಯ್ಯ ಸಿನಿಮಾಗೆ ಶಶಾಂಕ್ ಶೇಷಗಿರಿ ಸಂಗೀತ ನೀಡಲಿದ್ದಾರೆ. ಸಿನಿಮಾದ ಮೊದಲ ಭಾಗದಲ್ಲಿ 3 ರಿಂದ 4 ಹಾಡುಗಳನ್ನು ಹೊರತರಲು ಗಾಯಕ-ಸಂಗೀತ ನಿರ್ದೇಶಕರು ಕೆಲಸ ಮಾಡುತ್ತಿದ್ದಾರೆ. ಅವರು ಈಗಾಗಲೇ ಗಾಯಕ ಹರಿಚರಣ್ ಅವರಿಂದ ಒಂದು ಹಾಡನ್ನು ರೆಕಾರ್ಡ್ ಮಾಡಿಸಿದ್ದಾರೆ.

ಇದು ಶಶಾಂಕ್ ಅವರ ನಾಲ್ಕನೇ ಪ್ರಾಜೆಕ್ಟ್ ಆಗಿದ್ದು, ಅವರು ಈ ಹಿಂದೆ ಉಪ್ಪು ಹುಳಿ ಖಾರ, ರಾಂಧವ ಮತ್ತು ಗೌಳಿಯಲ್ಲಿ ಕೆಲಸ ಮಾಡಿದ್ದಾರೆ. ಹಯತ್ ಪೀರಾ ಮತ್ತು ಚನ್ನಪ್ಪ ಹಾಲಳ್ಳಿ ಜಂಟಿಯಾಗಿ ಸಿನಿಮಾ ನಿರ್ಮಿಸಿದ್ದಾರೆ. ಉದಯ್ ಲೀಲಾ ಚಿತ್ರದ ಛಾಯಾಗ್ರಾಹಕರಾಗಿದ್ದಾರೆ.

lokesh

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

4 mins ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

10 mins ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

14 mins ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

18 mins ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

12 hours ago