Mysore
20
overcast clouds
Light
Dark

ಲೋಕಸಭಾ ಚುನಾವಣೆ-24: ಡಿಕೆಶಿ ಆಫರ್ ಬಗ್ಗೆ ಶಿವಣ್ಣ ಹೇಳಿದ್ದೇನು ಗೊತ್ತಾ!

ಬೆಂಗಳೂರು : 2024 ರ ಲೋಕ ಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರಮುಖ ಪಕ್ಷಗಳು ಈಗಾಗಲೇ ಸಿದ್ದತೆ ಮಾಡಿಕೊಳ್ಳುತ್ತಿವೆ. ಅದರ ಬೆನ್ನಲ್ಲೇ ರಾಜ್ಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹ್ಯಾಟ್ರಿಕ್ ಹಿರೋ ಡಾ. ಶಿವರಾಜ್ ಕುಮಾರ್ ಅವರಿಗೆ ಕಾಂಗ್ರೆಸ್ ನಿಂದ ಟಿಕೆಟ್ ಆಫರ್ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಈಡಿಗ ಸಮುದಾಯದ ಬೃಹತ್ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಪಾರ್ಲಿಮೆಂಟಿಗೆ ತಯಾರಿಯಾಗಲು ಶಿವಣ್ಣಗೆ ಹೇಳಿದ್ದೇನೆ. ಅವರು ಯಾವ ಕ್ಷೇತ್ರದಿಂದಲೂ ಸ್ಪರ್ಧಿಸಿದರೂ ಟಿಕೆಟ್ ನೀಡುವುದಾಗಿ ಹೇಳಿರುವುದಾಗಿ ತಿಳಿಸಿದರು.

ಆದರೆ, ಶಿವಣ್ಣ ಈಗಾಗಲೇ ಐದಾರು ಸಿನಿಮಾಗಳನ್ನು ಒಪ್ಪಿಕೊಂಡಿದ್ದು, ಅವುಗಳ ಚಿತ್ರೀಕರಣ ಮುಗಿಯಬೇಕು ಎಂದಿದ್ದಾರೆ. ಚಿತ್ರ ಯವಾಗದರೂ ಮಾಡಬಹುದು, ಆದರೆ ಪಾರ್ಲಿಮೆಂಟ್ ಹೋಗುವ ಅವಕಾಶ ಎಲ್ಲರಿಗೂ ಸಿಗಲ್ಲ ಎಂದು ಹೇಳಿದ್ದೇನೆ. ಅವರ ನಿರ್ಧಾರಕ್ಕೆ ಎದುರು ನೋಡುತ್ತಿದ್ದೇನೆ ಎಂದಿದ್ದರು.

ಈ ಬಗ್ಗೆ ಪ್ರತಿಕ್ರಿಯ ನೀಡಿದ ನಟ ಶಿವರಾಜ್ ಕುಮಾರ್, ನಮ್ಮದೇನಿದ್ದರೂ ಮೇಕಪ್ ಹಾಕೋದು ಸಿನಿಮಾ ಮಾಡೋದು. ನಾನು ಎಂದಿಗೂ ರಾಜಕೀಯಕ್ಕೆ ಬರೋಲ್ಲ. ನಮ್ಮ ತಂದೆ ಬಣ್ಣ ಹಚ್ಚಿ ನಟನೆ ಮಾಡುವುದನ್ನು ಕೇಳಿ ಕೊಟ್ಟಿದ್ದಾರೆ. ಅದೇ ಸಾಕು ನಮಗೆ. ನಮ್ಮ ತಂದೆ ಕೊಟ್ಟಿರುವ ಬಳುವಳಿ ಬಣ್ಣ ಹಚ್ಚೋದನ್ನು ಮುಂದುವರಿಸಿಕೊಂಡು ಹೋಗುತ್ತೇನೆ. ರಾಜಕೀಯ ನಮಗೆ ಬೇಡ.

ಆದರೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಮಗಳು ನಮ್ಮನೆ ಸೊಸೆಯಾಗಿದ್ದಾರೆ. ಗೀತಾ ಬೇಕಾದ್ರೆ ರಾಜಕೀಯಕ್ಕೆ ಹೋಗಲಿ, ಹೆಂಡತಿ ಇಷ್ಟಪಟ್ಟರೆ ಅವರಿಗೆ ಸಪೋರ್ಟ್ ಮಾಡೋದು ಗಂಡನ ಕೆಲಸ. ಅವರು ಚುನಾವಣೆಗೆ ನಿಲ್ಲುತ್ತಾರೆಂದರೆ ಅವರ ಹಿಂದೆ ನಿಂತು ಬೆಂಬಲ ಕೊಡುತ್ತೇನೆ ಎಂದು ಶಿವಣ್ಣ ಹೇಳಿದರು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ