ಚೆನ್ನೈ : ಸಾಕಷ್ಟು ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದ ಲೋಕೇಶ್ ರಾಜೇಂದ್ರನ್ ಅವರು ಸಾವಿಗೆ ಶರಣಾಗಿದ್ದಾರೆ.
34 ವರ್ಷದ ಲೋಕೇಶ್ ರಾಜೇಂದ್ರನ್ ಅವರು ವೈವಾಹಿಕ ಜೀವನದ ಸಮಸ್ಯೆಯಿಂದಾಗಿ ಪತ್ನಿ ಜೊತೆ ಮನಸ್ತಾಪ ಉಂಟಾಗಿತ್ತು. ನಾಲ್ಕು ದಿನಗಳ ಹಿಂದೆ ಇವರ ಪತ್ನಿ ಡಿವೋರ್ಸ್ ಗಾಗಿ ಲೀಗಲ್ ನೋಟಿಸ್ ಕಳುಹಿಸಿದ್ದರು. ಇದರಿಂದ ಖಿನ್ನತೆಗೆ ಒಳಗಾಗಿದ್ದ ಲೋಕೇಶ್ ರಾಜೇಂದ್ರನ್ ಅವರು ಮದ್ಯ ವ್ಯಸನಿಯಾಗಿದ್ದು ಹಲವು ಬಾರಿ ಚೆನ್ನೈನ ಬಸ್ ನಿಲ್ದಾಣಗಳಲ್ಲಿ ಮಲಗುತ್ತಿದ್ದುದನ್ನು ಸಾರ್ವಜನಿಕರು ಗಮನಿಸಿದ್ದರು. ಸೋಮವಾರ ಬಸ್ ನಿಲ್ದಾಣದಲ್ಲಿ ಲೋಕೇಶ್ ರಾಜೇಂದ್ರನ್ ಅವರು ತೀವ್ರ ಅಸ್ವಸ್ಥರಾಗಿದ್ದನ್ನು ಕಂಡು ಕೆಲವರು 108ಕ್ಕೆ ಕರೆ ಮಾಡಿ ಪೊಲೀಸ್ರಿಗೂ ಮಾಹಿತಿ ನೀಡಿದರು. ಬಳಿಕ ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ರಾತ್ರಿ ನಿಧನರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.
ಲೋಕೇಶ್ ರಾಜೇಂದ್ರನ್ ಅವರು ಸುಮಾರು 150ಕ್ಕೂ ಅಧಿಕ ತಮಿಳು ಧಾರಾವಾಹಿ ಮತ್ತು 15 ಸಿನಿಮಾಗಳಲ್ಲಿ ನಟಿಸಿದ್ದರು. ಇವರ ನಿಧನಕ್ಕೆ ಕಿರುತೆರೆಯ ಕಲಾವಿದರು, ಅಭಿಮಾನಿಗಳ ಬಳಗ ಕಂಬನಿ ಮಿಡಿದಿದೆ.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…