ನಿರ್ದೇಶಕ ಶಶಾಂಕ್ ಅವರ ನಿರ್ದೇಶನದ ಉತ್ತಮ ಕಂಟೆಂಟ್ ಉಳ್ಳ ‘ಲವ್ 360’ ಚಿತ್ರ ಆಗಸ್ಟ್ 19ರಂದು ತೆರೆಕಂಡಿದೆ. ಈ ಸಿನಿಮಾ ಪ್ರೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿ ಆಗಿದೆ. ಅನೇಕ ಕಡೆಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಂಡಿದೆ. ಈಗ ಈ ಸಿನಿಮಾ ರಿಮೇಕ್ ಆಗುತ್ತಿದೆ ಎಂಬ ಸುದ್ದಿಯನ್ನು ಚಿತ್ರತಂಡದವರು ಹಂಚಿಕೊಂಡಿದ್ದಾರೆ.
ತೆಲುಗು ಮತ್ತು ತಮಿಳಿನಲ್ಲಿ ‘ಲವ್ 360’ ಸಿನಿಮಾವನ್ನು ರಿಮೇಕ್ ಮಾಡಲು ಖ್ಯಾತ ನಿರ್ಮಾಣ ಸಂಸ್ಥೆಯೊಂದು ಮುಂದೆಬಂದಿದೆ. ಆ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ. ನಿರ್ದೇಶಕ ಶಶಾಂಕ್ ಅವರು ‘ಲವ್ 360’ ಸಿನಿಮಾ ಮೂಲಕ ಒಂದು ಮುಗ್ಧ ಪ್ರೇಮಕಥೆಯನ್ನು ತೆರೆಗೆ ತಂದಿದ್ದಾರೆ. ರಚನಾ ಇಂದರ್ ಮತ್ತು ಹೊಸ ಹೀರೋ ಪ್ರವೀಣ್ ಅವರು ಈ ಚಿತ್ರದಲ್ಲಿ ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ.
‘ಲವ್ 360’ ಸಿನಿಮಾ ಭಾರಿ ಹೈಪ್ ಕ್ರಿಯೇಟ್ ಮಾಡಲು ಒಂದಷ್ಟು ಕಾರಣಗಳಿವೆ. ಆ ಪೈಕಿ ಮುಖ್ಯವಾದ್ದದ್ದು ‘ಜಗವೇ ನೀನು ಗೆಳತಿಯೇ..’ ಹಾಡು. ಯೂಟ್ಯೂಬ್ನಲ್ಲಿ ಈ ಹಾಡು 1.5 ಕೋಟಿಗೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಚಿತ್ರಮಂದಿರಕ್ಕೆ ಜನರನ್ನು ಕರೆತರುವಲ್ಲಿ ಈ ಹಾಡಿನ ಪಾತ್ರ ದೊಡ್ಡದಿದೆ. ಲವ್ ಸ್ಟೋರಿ ನೋಡಲು ಬಂದ ಪ್ರೇಕ್ಷಕರಿಗೆ ಒಂದು ಮರ್ಡರ್ ಮಿಸ್ಟರಿ ಕಥೆ ಅಚ್ಚರಿ ಮೂಡಿಸಿದೆ. ಈ ಚಿತ್ರಕ್ಕೆ ಪರಭಾಷೆ ಸಿನಿಮಾ ಮಂದಿ ಮನಸೋತಿದ್ದು, ರಿಮೇಕ್ ಮಾಡಲು ಮುಂದೆ ಬಂದಿದ್ದಾರೆ.
ನಿರ್ದೇಶಕ ಶಶಾಂತ್ ಅವರು ಪ್ರತಿ ಸಿನಿಮಾದಲ್ಲೂ ತಮ್ಮದೇ ಶೈಲಿಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಾರೆ. ಅವರ ಜೊತೆ ಸಿನಿಮಾ ಮಾಡುವ ಹೊಸಬರಿಗೆ ಖಂಡಿತವಾಗಿಯೂ ಯಶಸ್ಸು ಸಿಗುತ್ತದೆ ಎಂಬುದಕ್ಕೆ ‘ಲವ್ 360’ ಸಿನಿಮಾ ಹೊಸ ಉದಾಹರಣೆ ಆಗಿದೆ. ಮೊದಲ ಸಿನಿಮಾದಲ್ಲೇ ನಟ ಪ್ರವೀಣ್ ಅವರಿಗೆ ಭರ್ಜರಿ ಜನಪ್ರಿಯತೆ ಸಿಕ್ಕಿದೆ. ರಚನಾ ಇಂದರ್ ಅವರ ನಟನೆಗೆ ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಸಿನಿಮಾದಲ್ಲಿ ಕಾವ್ಯಾ ಶಾಸ್ತ್ರಿ, ಗೋಪಾಲ ದೇಶಪಾಂಡೆ, ಮಸಲ್ ಮಣಿ, ಸುಜಿತ್, ಡ್ಯಾನಿ ಕುಟ್ಟಪ್ಪ ಮುಂತಾದವರು ನಟಿಸಿದ್ದಾರೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…
ಹೈದರಾಬಾದ್ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…