ಚೆನ್ನೈ :ಇತೀಚಿನ ದಿನಗಳಲ್ಲಿ ಒಂದಿಲ್ಲೊಂದು ಕಾರಣಕ್ಕೆ ಯುವ ನಟಿಯರು ಸಾವಿಗೆ ಶರಣಾಗುತ್ತಿರುವುದು ಚಿತ್ರರಂಗ ವಲಯದಲ್ಲಿ ಆತಂಕವನ್ನುಂಟು ಮಾಡುತ್ತಿದೆ. ಕಾಲಿವುಡ್ ಯುವ ನಟಿ ದೀಪಾ ಅಲಿಯಾಸ್ ಪಾಲಿನ್ ಡೆತ್ ನೋಟ್ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ. ಚೆನ್ನೈನ ವಿರುಗಂಬಾಕ್ಕಂನಲ್ಲಿರುವ ಖಾಸಗಿ ಫ್ಲ್ಯಾಟ್‌ನಲ್ಲಿ ವಾಸಿಸುತ್ತಿದ್ದ ದೀಪಾ ಶನಿವಾರದಂದು ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ.
ಕಳೆದ ಕೆಲ ವರ್ಷಗಳಿಂದ ಒಂಟಿಯಾಗಿ ಜೀವನ ನಡೆಸುತ್ತಿದ್ದ ದೀಪಾ ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ನೇಹಿತರು ತಿಳಿಸಿದ್ದಾರೆ. ಶನಿವಾರ ನಟಿ ದೀಪಾ ಕುಟುಂಬಸ್ಥರ ಫೋನ್ ರಿಸೀವ್ ಮಾಡಿರಲಿಲ್ಲ. ಬಳಿಕ ಕುಟುಂಬಸ್ಥರು ದೀಪಾ ಅವರ ಸ್ನೇಹಿತ ಪ್ರಭಾಕರನ್ ಅವರಿಗೆ ಕರೆ ಮಾಡಿದ್ದಾರೆ. ಪ್ರಭಾಕರನ್ ದೀಪಾ ಅವರ ಮನೆಗೆ ಬಂದು ನೋಡಿದಾಗ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ದೀಪಾ ಆತ್ಮಹತ್ಯೆಗೆ ಪ್ರೇಮ ಪ್ರಕರಣವೇ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಆಕೆ ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಡೆತ್ ನೋಟ್ ಸಹ ಪತ್ತೆಯಾಗಿದೆ. ಅದರಲ್ಲಿ ತನ್ನ ಸಾವಿಗೆ ಯಾರೂ ಕಾರಣರಲ್ಲ, ಜೀವನ ಪರ್ಯಂತ ಅವರನ್ನು ಪ್ರೀತಿಸುತ್ತಲೇ ಇರುತ್ತೇನೆ ಎಂದು ಬರೆದಿದ್ದಾರೆ.
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಚುನಾವಣೆ ಮುಗಿದಿದೆ. ಚುನಾವಣೆ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು…
ಶ್ರೀರಂಗಪಟ್ಟಣ: ಇಲ್ಲಿನ ಐತಿಹಾಸಿಕ ಶ್ರೀರಂಗನಾಥಸ್ವಾಮಿ ರಂಗಮುಡಿ ಉತ್ಸವ ಗುರುವಾರ(23-04-2026) ರಾತ್ರಿ ಸಂಭ್ರಮದಿಂದ ನೆರವೇರಿತು. ಮೇಷ ಮಾಸ, ಶುಕ್ಲಪಕ್ಷ, ಸಪ್ತಮಿ ದಿನದಂದು…
ಎಚ್.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದ ಸಮೀಪ ಇಂದು ಬೆಳಿಗ್ಗೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತ ಸಿದ್ದೇಗೌಡ ಎಂಬುವವರಿಗೆ ಗಂಭೀರ…
ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಏಪ್ರಿಲ್ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 3.25…
ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್.29ರವರೆಗೆ ಹಾಗೂ ಬೆಂಗಳೂರಿನಲ್ಲಿ ಮೇ.5ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಬೇಗೆಯಿಂದ…
ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ಪತ್ರ ನೀಡಲಾಗಿದೆ. ೨೦೨೩ರಲ್ಲಿ ಕಾಂಗ್ರೆಸ್ ನಾಯಕ…