ಚಿತ್ರ ಮಂಜರಿ

250ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಡಾಲಿಯ ‘ಮಾನ್ಸೂನ್ ರಾಗ’ ಆರಂಭ

ಬೆಂಗಳೂರು : ನಟ ಡಾಲಿ ಧನಂಜಯ್ ಮತ್ತು ಡಿಂಪಲ್ ಕ್ವೀನ್​ ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಸಿನಿಮಾ ಇಂದು ರಾಜ್ಯಾದ್ಯಂತ 250ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿದೆ.
ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ನಿರ್ಮಾಣ ಆಗುತ್ತಿರುವ ಸಿನಿಮಾಗಳು ಪರಭಾಷೆಯ ಚಿತ್ರಗಳಿಗೆ ಪೈಪೋಟಿ ಕೊಡುತ್ತಿದೆ ಎನ್ನುವುದರಲ್ಲಿ ಅನುಮಾನವಿಲ್ಲ. ಉತ್ತಮ, ಗಟ್ಟಿತನದ ಕಥೆ, ಅದ್ಧೂರಿ ಮೇಕಿಂಗ್ ಜೊತೆಗೆ ಸಿನಿಪ್ರಿಯರ ಮನಸ್ಸಿಗೆ ಇಷ್ಟವಾಗುವ ಹಾಡುಗಳಿದ್ರೆ ಸಿನಿಪ್ರೇಕ್ಷಕರು ಸಿನಿಮಾವ ನ್ನು ಒಪ್ಪಿಕೊಳ್ಳುತ್ತಾರೆ.
ಬೆಂಗಳೂರಿನ ಕೆ.ಜಿ ರಸ್ತೆಯಲ್ಲಿರೋ ಸಂತೋಷ್ ಚಿತ್ರಮಂದಿರದಲ್ಲಿ ಮಾನ್ಸೂನ್ ರಾಗಾ ಬಿಡುಗಡೆ ಆಗಿದ್ದು, ಡಾಲಿ ಅಭಿಮಾನಿಗಳ ಸಂಭ್ರಮ ಜೋರಾಗಿತ್ತು. ನಿರ್ದೇಶಕ ರವೀಂದ್ರನಾಥ್ ಸಂತೋಷ್ ಚಿತ್ರಮಂದಿರದ ಪ್ರೊಜೆಕ್ಟರ್​ಗೆ ಪೂಜೆ ಮಾಡುವ ಮೂಲಕ ಚಿತ್ರ ಪ್ರದರ್ಶನಕ್ಕೆ ಗ್ರೀನ್ ಸಿಗ್ನಲ್‌ ಕೊಟ್ಟರು. ಧನಂಜಯ್​ ಅಭಿಮಾನಿಗಳು ಬೆಲ್ ಬಾಟಮ್ ಕಾಸ್ಟೂಮ್‌ನಲ್ಲಿ ಚಿತ್ರಮಂದಿರಕ್ಕೆ ಬಂದು ಗಮನ ಸೆಳೆದರು.
ಚಿತ್ರದಲ್ಲಿ ಡಾಲಿ ಧನಂಜಯ್ ಪ್ರೇಮಿಯಾಗಿ‌ ಕಾಣಿಸಿಕೊಂಡಿದ್ದಾರೆ. ರಚಿತಾ ರಾಮ್‌ ಲೈಂಗಿಕ ಕಾರ್ಯಕರ್ತೆಯ ಪಾತ್ರ ನಿರ್ವಹಿಸಿದ್ದಾರೆ. ಸುಹಾಸಿನಿ, ಅಚ್ಯುತ್ ಕುಮಾರ್ ಅವರ ಕಾಂಬಿನೇಶನ್ ಅದ್ಭುತವಾಗಿ ಮೂಡಿ ಬಂದಿದೆ. ಯಶಾ ಶಿವಕುಮಾರ್ ರಾಗ ಸುಧಾ ಹಾಡಿನಲ್ಲಿ ಮಿಂಚಿದ್ದಾರೆ.
ಅನೂಪ್ ಸೀಳಿನ್ ಸಂಗೀತ, ಕ್ಯಾಮರಾ ಮ್ಯಾನ್‌ ಎಸ್.ಕೆ‌.ರಾವ್ ಛಾಯಾಗ್ರಹಣವಿದೆ. ಗುರು ಕಶ್ಯಪ್ ಸಂಭಾಷಣೆ ಬರೆದಿದ್ದು, ನಿರ್ಮಾಪಕ ವಿಖ್ಯಾತ್ ಅದ್ಧೂರಿ ವೆಚ್ಚದಲ್ಲಿ ನಿರ್ಮಾಣ ಮಾಡಿದ್ದಾರೆ. ನಿರ್ದೇಶಕ ರವೀಂದ್ರನಾಥ್ ನಿರ್ದೇಶನಕ್ಕೆ‌ ಸಿನಿಮಾ ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

andolanait

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

2 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

2 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

2 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

2 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

3 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago