ತಿರುವನಂತಪುರಂ : ಜನಪ್ರಿಯ ಮಲಯಾಳಂ ನಟಿ ರೆಂಜುಷಾ ಮೆನನ್ (35) ಅವರು ತಿರುವನಂತಪುರಂನ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೈದಿದ್ದಾರೆ ಎಂದು ವರದಿಯಾಗಿದೆ. ಸೋಮವಾರ ಬೆಳಿಗ್ಗೆ ಅವರು ತಮ್ಮ ಫ್ಲ್ಯಾಟ್ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರು ತಮ್ಮ ಪತಿ, ನಟ ಮನೋಜ್ ಜೊತೆ ವಾಸಿಸುತ್ತಿದ್ದರು. ರೆಂಜುಷಾ ಅವರು ಆರ್ಥಿಕ ಸಮಸ್ಯೆಯಲ್ಲಿ ಸಿಲುಕಿದ್ದರು ಎಂದು ಕೆಲ ವರದಿಗಳು ಹೇಳಿವೆ.
ಇದೊಂದು ಆತ್ಮಹತ್ಯೆ ಪ್ರಕರಣವೆಂದು ದಾಖಲಿಸಲಾಗಿದೆಯಾದರೂ ಆತ್ಮಹತ್ಯೆಗೆ ಕಾರಣವಾಗಿರುವ ಅಂಶಗಳ ಕುರಿತು ತನಿಖೆ ನಡೆಸಲಾಗುತ್ತಿದೆ.
ಕೊಚ್ಚಿ ಮೂಲದ ರೆಂಜುಷಾ ಅವರು ಟಿವಿ ಆಂಕರ್ ಆಗಿ ತಮ್ಮ ವೃತ್ತಿ ಜೀವನ ಆರಂಭಿಸಿ ನಂತರ ಟಿವಿ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು . ಸ್ತ್ರೀ ಧಾರಾವಾಹಿಯಲ್ಲಿ ಮೊದಲು ಕಾಣಿಸಿಕೊಂಡ ಅವರು ಪೋಷಕ ನಟಿ ಪಾತ್ರದಲ್ಲಿ “ಸಿಟಿ ಆಫ್ ಗಾಡ್”, “ಮೇರಿಕ್ಕುಂಡೋರು ಕಂಜಾಡು”, “ಬಾಂಬೆ ಮಾರ್ಚ್,” “ಕಾರ್ಯಸ್ಥಾನ್,” “ಒನ್ ವೇ ಟಿಕೆಟ್”, “ಅದ್ಭುತ ದ್ವೀಪು” ಮುಂತಾದ ಟಿವಿ ಧಾರಾವಾಹಿ, ಸಿನೆಮಾಗಳಲ್ಲಿ ಮಿಂಚಿದ್ದರು.
ಹಲವಾರು ಧಾರಾವಾಹಿಗಳನ್ನು ನಿರ್ಮಿಸಿದ್ದ ಅವರು ವೃತ್ತಿಪರ ಭರತನಾಟ್ಯಂ ಕಲಾವಿದೆಯೂ ಆಗಿದ್ದರು.
ತಮ್ಮ ಸಾವಿಗೆ ಕೆಲವೇ ಗಂಟೆಗಳ ಮೊದಲು ಆಕೆ ಇನ್‌ಸ್ಟಾಗ್ರಾಮ್‌ನಲ್ಲಿ “ಆನಂದ ರಾಗಂ” ಸಹನಟಿ ಶ್ರೀದೇವಿ ಅನಿಲ್ ಅವರೊಂದಿಗಿನ ತಮಾಷೆಯ ವೀಡಿಯೋ ಶೇರ್ ಮಾಡಿದ್ದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…