ಚಿತ್ರ ಮಂಜರಿ

ಮಲಯಾಳಂ ನಟಿ ರೆಂಜುಷಾ ಮೆನನ್‌ ಆತ್ಮಹತ್ಯೆ

ತಿರುವನಂತಪುರಂ : ಜನಪ್ರಿಯ ಮಲಯಾಳಂ ನಟಿ ರೆಂಜುಷಾ ಮೆನನ್‌ (35) ಅವರು ತಿರುವನಂತಪುರಂನ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೈದಿದ್ದಾರೆ ಎಂದು ವರದಿಯಾಗಿದೆ. ಸೋಮವಾರ ಬೆಳಿಗ್ಗೆ ಅವರು ತಮ್ಮ ಫ್ಲ್ಯಾಟ್‌ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರು ತಮ್ಮ ಪತಿ, ನಟ ಮನೋಜ್‌ ಜೊತೆ ವಾಸಿಸುತ್ತಿದ್ದರು. ರೆಂಜುಷಾ ಅವರು ಆರ್ಥಿಕ ಸಮಸ್ಯೆಯಲ್ಲಿ ಸಿಲುಕಿದ್ದರು ಎಂದು ಕೆಲ ವರದಿಗಳು ಹೇಳಿವೆ.

ಇದೊಂದು ಆತ್ಮಹತ್ಯೆ ಪ್ರಕರಣವೆಂದು ದಾಖಲಿಸಲಾಗಿದೆಯಾದರೂ ಆತ್ಮಹತ್ಯೆಗೆ ಕಾರಣವಾಗಿರುವ ಅಂಶಗಳ ಕುರಿತು ತನಿಖೆ ನಡೆಸಲಾಗುತ್ತಿದೆ.

ಕೊಚ್ಚಿ ಮೂಲದ ರೆಂಜುಷಾ ಅವರು ಟಿವಿ ಆಂಕರ್‌ ಆಗಿ ತಮ್ಮ ವೃತ್ತಿ ಜೀವನ ಆರಂಭಿಸಿ ನಂತರ ಟಿವಿ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು . ಸ್ತ್ರೀ ಧಾರಾವಾಹಿಯಲ್ಲಿ ಮೊದಲು ಕಾಣಿಸಿಕೊಂಡ ಅವರು ಪೋಷಕ ನಟಿ ಪಾತ್ರದಲ್ಲಿ “ಸಿಟಿ ಆಫ್‌ ಗಾಡ್”‌, “ಮೇರಿಕ್ಕುಂಡೋರು ಕಂಜಾಡು”, “ಬಾಂಬೆ ಮಾರ್ಚ್‌,” “ಕಾರ್ಯಸ್ಥಾನ್‌,” “ಒನ್ ವೇ ಟಿಕೆಟ್”‌, “ಅದ್ಭುತ ದ್ವೀಪು” ಮುಂತಾದ ಟಿವಿ ಧಾರಾವಾಹಿ, ಸಿನೆಮಾಗಳಲ್ಲಿ ಮಿಂಚಿದ್ದರು.

ಹಲವಾರು ಧಾರಾವಾಹಿಗಳನ್ನು ನಿರ್ಮಿಸಿದ್ದ ಅವರು ವೃತ್ತಿಪರ ಭರತನಾಟ್ಯಂ ಕಲಾವಿದೆಯೂ ಆಗಿದ್ದರು.

ತಮ್ಮ ಸಾವಿಗೆ ಕೆಲವೇ ಗಂಟೆಗಳ ಮೊದಲು ಆಕೆ ಇನ್‌ಸ್ಟಾಗ್ರಾಮ್‌ನಲ್ಲಿ “ಆನಂದ ರಾಗಂ” ಸಹನಟಿ ಶ್ರೀದೇವಿ ಅನಿಲ್‌ ಅವರೊಂದಿಗಿನ ತಮಾಷೆಯ ವೀಡಿಯೋ ಶೇರ್‌ ಮಾಡಿದ್ದರು.

andolanait

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

2 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

2 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

2 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

3 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

3 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

4 hours ago