ಬೆಂಗಳೂರು : ನಟಿ, ಕಾಂಗ್ರೆಸ್ ರಾಜಕಾರಣಿ ರಮ್ಯ ಅವರ ಸಾವಿನ ಬಗ್ಗೆ ಸುಳ್ಳು ಸುದ್ದಿ ಹರಡಿದ್ದು, ಈ ಕುರಿತು ಪ್ರತಿಕ್ರಿಯಿಸಿದ ನಟಿ ʼನಮ್ಮ ಊರಿನಲ್ಲಿ ಭೇಟಿಯಾಗೋಣ’ ಎಂದು ಪತ್ರಕರ್ತೆ ಚಿತ್ರ ಸುಬ್ರಮಣಿಯಮ್ ಗೆ ಪ್ರತಿಕ್ರಿಯಿಸಿದ್ದಾರೆ.
ಜಿನೇವಾ ಪ್ರವಾಸದಲ್ಲಿರುವ ನಟಿ ರಮ್ಯ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಸುದ್ದಿಗಳನ್ನು ಹರಿಬಿಡಲಾಗಿತ್ತು.
ಈ ಸುದ್ದಿ ಹಬ್ಬುತ್ತಿದ್ದಂತೆ ನಟಿ ರಮ್ಯ ಜೊತೆ ಆಹಾರ ಸೇವಿಸುವ ಫೋಟೋವನ್ನು ಹಾಕಿದ್ದ ಪತ್ರಕರ್ತೆ ಚಿತ್ರ ಸುಬ್ರಮಣಿಯಮ್ ”ಜಿನೀವಾದಲ್ಲಿ ಭೋಜನಕ್ಕೆ ಅತ್ಯಂತ ಪ್ರತಿಭಾವಂತ ಮತ್ತು ಸೌಮ್ಯ ಮಹಿಳೆ ದಿವ್ಯಸ್ಪಂದನಾ ಅವರ ಭೇಟಿಯಾಯಿತು. ಬೆಂಗಳೂರಿನ ಮೇಲಿನ ಪ್ರೀತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಾತನಾಡಿದೆವು” ಎಂದು ಟ್ವೀಟ್ ಮಾಡಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ನಟಿ ರಮ್ಯ, “ನಮ್ಮ ಊರಿನಲ್ಲಿ ಭೇಟಿಯಾಗುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…