ಹುಲಿ ಉಗುರು ಪ್ರಕರಣಕ್ಕೆ ಸಂಬಂಧಿಸಿದಂತೆ ಜಗ್ಗೇಶ್ ಮತ್ತೆ ತಮ್ಮ ನೋವು ತೋಡಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಬರೆದುಕೊಂಡಿರುವ ಅವರು, ಸಂಬಂಧದ ಬೆಲೆಯನ್ನೂ ಈ ಮೂಲಕ ತಿಳಿಸುವ ಪ್ರಯತ್ನ ಮಾಡಿದ್ದಾರೆ. ಪ್ರಚಾರದ ಬಗ್ಗೆ ಚಾಟಿ ಬೀಸಿದ್ದಾರೆ.
ನಾನಾಯಿತು ನನ್ನ ಬದುಕಾಯಿತು ಎಂದು ಶ್ರದ್ಧೆಯಿಂದ ಬಾಳುತ್ತಿರುವ ನನ್ನನ್ನು ಪ್ರಚಾರ ವಸ್ತುವಿನಂತೆ ಬಳಕೆ ಮಾಡಲಾಯಿತು. ಪ್ರೀತಿ, ನಂಬಿಕೆ, ಸಂಬಂಧ ಎಂದು ಸಾಮಾಜಿಕವಾಗಿ ಮಾತನಾಡುತ್ತಿದ್ದ ನನ್ನನ್ನು ಮೂಕನಾಗಿಸಿ, ಇನ್ನು ಮುಂದೆ ಯಾವ ವಿಷಯವು ಮಾತನಾಡದಂತೆ ದಿಗ್ಭಂಧ ಹಾಕಿಕೊಂಡಿತು ಮನಸು. ಇಂದಿನ ದುರ್ದೈವ ಪ್ರಚಾರ ಕಂಡು. ಸಂಬಂಧ ಅರಿವಿಲ್ಲದ ಸಮುದಾಯ ಎಂದು ಅವರು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ತನ್ನ ತಾಯಿ ಕೊಟ್ಟ ಹುಲಿ ಉಗುರಿನ ಪೆಂಡೆಂಟ್ ಕುರಿತಾಗಿ ಅವರು ಹೇಳಲಾದ ವಿಡಿಯೋ ವೈರಲ್ ಆಗಿತ್ತು. ಏಕಾಏಕಿ ಅರಣ್ಯಾಧಿಕಾರಿಗಳು ಜಗ್ಗೇಶ್ ಮನೆಗೆ ನುಗ್ಗಿ ತಪಾಸಣೆ ಮಾಡಿದ್ದರು. ಈ ನಡೆಯ ವಿರುದ್ಧ ಜಗ್ಗೇಶ್ ಕೋರ್ಟ್ ಮೆಟ್ಟಿಲು ಏರಿದ್ದರು. ಇದೀಗ ಕೋರ್ಟ್ ಅರಣ್ಯಾಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದೆ.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…