ಬೆಂಗಳೂರು : ಸ್ಯಾಂಡಲ್ವುಡ್ನ ಖ್ಯಾತ ನಟ ಕಿಚ್ಚ ಸುದೀಪ್ ಮತ್ತು ನಿರ್ಮಾಪಕ ಎಂ.ಎನ್. ಕುಮಾರ್ ಅವರ ನಡುವಿನ ವಿವಾದ ಈಗ ಕೋರ್ಟ್ ಅಂಗಳದಲ್ಲಿದೆ. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೂಡ ಆರಂಭ ಆಗಿದೆ. ಇತ್ತೀಚೆಗೆ ಸುದೀಪ್ ಮತ್ತು ಎಂ.ಎನ್. ಕುಮಾರ್ ಅವರು ತಮ್ಮ ಹೇಳಿಕೆಗಳನ್ನು ದಾಖಲಿಸಿದ್ದರು. ಈಗ ನ್ಯಾಯಾಲಯದಿಂದ ಎಂ.ಎನ್. ಕುಮಾರ್ ಅವರಿಗೆ ಇಂಜಂಕ್ಷನ್ ಆರ್ಡರ್ ನೀಡಲಾಗಿದೆ.
ಸುದೀಪ್ ಅವರ ವಿರುದ್ಧ ಅವಹೇಳನಕಾರಿಯಾಗಿ ಯಾವುದೇ ಹೇಳಿಕೆಗಳನ್ನು ಸಾರ್ವಜನಿಕವಾಗಿ ನೀಡಬಾರದು ಎಂದು ಆದೇಶಿಸಲಾಗಿದೆ. ಕೋರ್ಟ್ನಲ್ಲಿ ಕೇಸ್ ಅಂತ್ಯವಾಗುವ ತನಕವೂ ಈ ಆದೇಶ ಅನ್ವಯ ಆಗಲಿದೆ. ಚಿತ್ರರಂಗದ ಹಿರಿಯರು ಈ ವಿವಾದವನ್ನು ಬಗೆಹರಿಸಲು ಪ್ರಯತ್ನಿದರು. ಆದರೆ ಕಾನೂನಿನ ಮೂಲಕವೇ ನ್ಯಾಯ ಪಡೆಯುವುದಾಗಿ ಸುದೀಪ್ ಅವರು ನಿರ್ಧರಿಸಿದ್ದಾರೆ.
ಕಿಚ್ಚ ಸುದೀಪ್ ಅವರು ಮುಂಗಡ ಹಣ ಪಡೆದು ಕಾಲ್ಶೀಟ್ ನೀಡಿಲ್ಲ ಎಂಬುದು ಎಂ.ಎನ್. ಕುಮಾರ್ ಮಾಡಿದ ಆರೋಪ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಅವರು ಅನೇಕ ಸಂದರ್ಭಗಳಲ್ಲಿ ಮಾತನಾಡಿದ್ದಾರೆ. ಇದರಿಂದ ತಮಗೆ ಮಾನಹಾನಿ ಆಗಿದೆ ಎಂದು ಸುದೀಪ್ ಅವರು ಕೋರ್ಟ್ ಮೆಟ್ಟಿಲೇರಿದರು. ಎಂ.ಎನ್. ಕುಮಾರ್ ನಡೆಸಿದ್ದ ಸುದ್ದಿಗೋಷ್ಠಿಯಲ್ಲಿ ಎನ್.ಎಂ. ಸುರೇಶ್ ಕೂಡ ಭಾಗಿ ಆಗಿದ್ದರು. ಅವರ ವಿರುದ್ಧವೂ ಸುದೀಪ್ ದೂರು ನೀಡಿದ್ದರು. ಹಾಗಾಗಿ ಎನ್.ಎಂ. ಸುರೇಶ್ ಸಹ ಕಾನೂನಿನ ಸಂಕಷ್ಟ ಎದುರಿಸುತ್ತಿದ್ದಾರೆ.
ಆಗಸ್ಟ್ 10ರಂದು ಸುದೀಪ್ ಅವರು ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿನ ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಬಂದು ತಮ್ಮ ಹೇಳಿಕೆ ದಾಖಲಿಸಿದ್ದರು. ಆ ವೇಳೆ ಏನೆಲ್ಲ ನಡೆಯಿತು ಎಂಬುದನ್ನು ಮಾಧ್ಯಮಗಳ ಎದುರು ಸುದೀಪ್ ಪರ ಲಾಯರ್ ವಿವರಿಸಿದ್ದಾರೆ. ‘ಕಾನೂನಿನ ಪ್ರಕಾರವಾಗಿ ಸುದೀಪ್ ಅವರು ನ್ಯಾಯಾಲಯಕ್ಕೆ ಬಂದು ಹೇಳಿಕೆ ನೀಡಿದ್ದಾರೆ. ಮಾನಹಾನಿ ಆಗಿದ್ದಕ್ಕೆ ಸಾಕ್ಷಿಗಳನ್ನು ಸಲ್ಲಿಸಿದ್ದಾರೆ. ಈ ಹಂತದಲ್ಲಿ ರಾಜಿಗೆ ಯಾವುದೇ ಅವಕಾಶ ಇಲ್ಲ’ ಎಂದು ಸುದೀಪ್ ಪರ ವಕೀಲರು ಹೇಳಿದ್ದರು.
ಎಂ.ಎನ್. ಕುಮಾರ್ ನಡುವಿನ ಜಟಾಪಟಿಯಲ್ಲಿ ರಾಜಿ ಮಾಡಿಕೊಳ್ಳಲು ಸುದೀಪ್ ಸಿದ್ಧರಿಲ್ಲ. ಸಂಧಾನ ನಡೆಸುವ ಉದ್ದೇಶದಿಂದ ರವಿಚಂದ್ರನ್ ಮತ್ತು ಶಿವರಾಜ್ಕುಮಾರ್ ಅವರ ಮಧ್ಯಸ್ಥಿಕೆಯಲ್ಲಿ ಮಾತುಕಥೆ ನಡೆದಿತ್ತು. ಅದರಲ್ಲಿ ಸುದೀಪ್ ಕೂಡ ಭಾಗಿ ಆಗಿದ್ದರು. ಆದರೆ ಕೋರ್ಟ್ನ ಹೊರಗೆ ಸಂಧಾನ ಮಾಡಿಕೊಳ್ಳಲು ಸುದೀಪ್ ಒಪ್ಪಿಕೊಂಡಿಲ್ಲ. ಹಾಗಾಗಿ ಅವರು ಕಾನೂನಿ ಹಾದಿ ಹಿಡಿದಿದ್ದಾರೆ.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…