ಬೆಂಗಳೂರು : ಡಾರ್ಲಿಂಗ್ ಪ್ರಭಾಸ್ ಅವರ ಬಹುನಿರೀಕ್ಷಿತ ಸಲಾರ್ ಚಿತ್ರದ ಟೀಸರ್ ರಿಲೀಸ್ ದಿನಾಂಕವನ್ನು ಹೊಂಬಾಳೆ ಫಿಲ್ಮ್ಸ್ ಅಧಿಕೃತವಾಗಿ ಘೋಷಿಸಿದೆ.
ಪ್ಯಾನ್ ಇಂಡಿಯನ್ ಸ್ಟಾರ್ ನಟ ಪ್ರಭಾಸ್ ಅವರ ಬಹುನಿರೀಕ್ಷಿತ ಚಿತ್ರ ಸಲಾರ್ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ಕೆಜಿಎಫ್ ಸಿನಿಮಾದ ಖ್ಯಾತಿಯ ಪ್ರಶಾಂತ್ ನೀಲ್ ಈ ಚಿತ್ರವನ್ನು ನಿರ್ದೇಶಿಸಿದ್ದು, ಈ ಚಿತ್ರ ಸೆಪ್ಟೆಂಬರ್ 28 2023 ರಂದು ದೇಶದ ಬಹುತೇಕ ಚಿತ್ರಮಂದಿರಗಳಲ್ಲಿ ಭರ್ಜರಿ ಓಪನಿಂಗ್ ಪಡೆಯಲು ಸಜ್ಜಾಗಿದೆ.
ಸದ್ಯ ಚಿತ್ರದ ನಿರ್ಮಾಪಕರು ಪ್ರಭಾಸ್ ಅಭಿಮಾನಿಗಳಿಗೆ ಮತ್ತು ಸಿನಿಪ್ರೇಕ್ಷಕರಿಗೆ ಸಿಹಿ ಸುದ್ದಿಯನ್ನು ನೀಡಿದ್ದು, ಸಲಾರ್ ಚಿತ್ರದ ಹೊಚ್ಚ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡಿದ್ದಾರೆ. ಆಕ್ಷನ್-ಡ್ರಾಮಾ ಹೊಂದಿರುವ ಟೀಸರ್ ಅನ್ನು ಜುಲೈ 6, 2023 ರಂದು ಸಂಜೆ 5:12ಕ್ಕೆ ಬಿಡುಗಡೆಗೊಳಿಸಲಿದ್ದೇವೆ ಎಂದು ಅಧಿಕೃತವಾಗಿ ತಿಳಿಸಿದೆ.
ಸಲಾರ್ ಚಿತ್ರದಲ್ಲಿ ಪ್ರಭಾಸ್ ಮತ್ತು ಶ್ರುತಿ ಹಾಸನ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದು, ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಈಶ್ವರಿ ರಾವ್, ಶ್ರೀಯಾ ರೆಡ್ಡಿ ಮತ್ತು ಸರಣ್ ಶಕ್ತಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಈ ಚಿತ್ರಕ್ಕೆ ರವಿ ಬಸ್ರೂರು ಸಂಗೀತ ಸಂಯೋಜಿಸಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…