ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಮನೋರಂಜನ್ ಪ್ರಭಾಕರ್ ಅವರು ಬುಧವಾರ ನಿಧನರಾದರು. ಅವರು ಕೆಲಕಾಲದಿಂದ ಅನಾರೋಗ್ಯ ದಿಂದ ಬಳಲುತ್ತಿದ್ದರು.
ಅವರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಗುರುವಾರ (ಡಿ.15)ನಡೆಯಲಿದೆ ಎಂದು ಅವರ ಆಪ್ತರು ತಿಳಿಸಿದ್ದಾರೆ.
ಸಂಗೀತ ಪರಂಪರೆಯ ಕುಟುಂಬ ದಲ್ಲಿ ಜನಿಸಿದ್ದ (ತಂದೆ ಪಂಡಿತ್ ಬಿ.ಎನ್. ಪಾರ್ಥಸಾರಥಿ ನಾಯ್ಡು, ತಾಯಿ ಗೋವಿಂದಮ್ಮ) ಅವರು 70ರ ದಶಕದ ಆರಂಭದಲ್ಲಿ ಸಂಗೀತ ಕ್ಷೇತ್ರಕ್ಕೆ ಕಾಲಿಟ್ಟರು. ಮನೋರಂಜನ್ ಮತ್ತು ತಂಡ ಹೆಸರಿನಲ್ಲಿ ಕಾರ್ಯಕ್ರಮ ನೀಡುತ್ತಿದ್ದರು. 1980ರ ಅವಧಿಯಲ್ಲಿ ಇದು ಹೆಸರಾಂತ ತಂಡವಾಗಿತ್ತು. ಅವರು ಸುಮಾರು 800ಕ್ಕೂ ಹೆಚ್ಚು ಸಂಗೀತ ಆಲ್ಬಂ ಹೊರತಂದಿದ್ದಾರೆ.
90ರ ದಶಕದಲ್ಲಿ ಅವರು ಕೆಲಕಾಲ ಆದರ್ಶ ಫಿಲ್ಮ್ ಇನ್‌ಸ್ಟಿಟ್ಯೂಟ್‌ನಲ್ಲಿ ಶಿಕ್ಷಕರಾಗಿದ್ದರು. 2003ರಲ್ಲಿ ತಮ್ಮದೇ ಆದ ಶ್ರುತಿಲಯ ಕಲ್ಚರಲ್ ಅಕಾಡೆಮಿ, ಶ್ರುತಿಲಯ ಇನ್‌ಸ್ಟಿಟ್ಯೂಟ್ ಆಫ್ ಮ್ಯೂಸಿಕ್ ಮೂಲಕ ಸಂಗೀತಾಸಕ್ತರಿಗೆ ತರಬೇತಿ ನೀಡುತ್ತಿದ್ದರು.
ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…
ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…
ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…
ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…
ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…
ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…