ಖ್ಯಾತ ಶಾಸ್ತ್ರೀಯ ಸಂಗೀತಗಾರ, ಸಂಗೀತ ಮಾಂತ್ರಿಕ ರಶೀದ್ ಖಾನ್ ಇಂದು ( ಜನವರಿ 9 ) ಕೊಲ್ಕತ್ತಾದ ಪೀರ್ಲೆಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ವರ್ಷ ಸೆರೆಬ್ರಲ್ ಅಟ್ಯಾಕ್‌ಗೆ ಒಳಗಾಗಿದ್ದ ರಶೀದ್ ಖಾನ್ ಕಳೆದ ಕೆಲ ತಿಂಗಳುಗಳಿಂದ ವೆಂಟಿಲೇಟರ್‌ನಲ್ಲಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳಿಂದ ಚೆನ್ನಾಗಿಯೇ ಚಿಕಿತ್ಸೆಗೆ ಸ್ಪಂದಿಸಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದು 55 ವರ್ಷಕ್ಕೆ ಬಾಳಪಯಣವನ್ನು ಅಂತ್ಯಗೊಳಿಸಿದ್ದಾರೆ.
ಉತ್ತರ ಪ್ರದೇಶದ ಬಡಾಯುನ್‌ನಲ್ಲಿ ಜುಲೈ 1, 1968ರಲ್ಲಿ ಜನಿಸಿದ್ದ ರಶೀದ್ ಖಾನ್ ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳ ಜತೆಗೆ ಸಂಗೀತ್ ನಾಟಕ್ ಅಕಾಡೆಮಿ ಗೌರವವನ್ನೂ ಸಹ ಪಡೆದಿದ್ದಾರೆ. ಹಿಂದೂಸ್ತಾನಿ ಸಂಗೀತ ಸಂಪ್ರದಾಯದ ಶಾಸ್ತ್ರೀಯ ಸಂಗೀತಗಾರರಾಗಿದ್ದ ರಶೀದ್ ಖಾನ್ ನಿಧನ ಸುದ್ದಿಗೆ ವಿವಿಧ ಕ್ಷೇತ್ರಗಳ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದು, ಸಂಜೆ 6 ಗಂಟೆಯವರೆಗೆ ಪೀರ್ಲೆಸ್ ಆಸ್ಪತ್ರೆಯಲ್ಲಿ ಸಾರ್ವಜನಿಕರ ದರ್ಶನಕ್ಕೆ ಅವಕಾಶವಿದ್ದು, ಬಳಿಕ ಪಾರ್ಥಿವ ಶರೀರವನ್ನು ಕೊಲ್ಕತ್ತಾದ ಪೀಸ್ ಹೆವನ್‌ಗೆ ಕಳುಹಿಸಲಾಗುವುದು ಹಾಗೂ ನಾಳೆ ( ಜನವರಿ 10 ) ಅಂತ್ಯಕ್ರಿಯೆ ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…