ಬಾಲಿವುಡ್ನ ಜನಪ್ರಿಯ ನಟ ಶಾರುಖ್ ಖಾನ್ ಅಭಿನಯಿಸುತ್ತಿರುವ ಹೊಸ ಸಿನಿಮಾ ಜವಾನ್ ಬಗ್ಗೆ ಜನರಿಗೆ ಇರುವ ನಿರೀಕ್ಷೆ ದೊಡ್ಡದು. ದಿನದಿಂದ ದಿನಕ್ಕೆ ಈ ನಿರೀಕ್ಷೆಯ ಮಟ್ಟ ಹೆಚ್ಚಾಗುತ್ತಲೇ ಇದೆ. ಸಿನಿಮಾದ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದೆ. ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆ ಇಂದು (ಜುಲೈ 24) ಹೊಸ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.
ಜವಾನ್ ಸಿನಿಮಾದಲ್ಲಿ ವಿಲನ್ ಪಾತ್ರ ಮಾಡಿರುವುದು ವಿಜಯ್ ಸೇತುಪತಿ. ಅವರ ಗೆಟಪ್ ಹೇಗಿರಲಿದೆ ಎಂಬುದು ಈ ಫೋಸ್ಟರ್ನಲ್ಲಿ ಗೊತ್ತಾಗಿದೆ. ವಿಜಯ್ ಸೇತುಪತಿ ಅಭಿಮಾನಿಗಳ ವಲಯದಲ್ಲಿ ಈ ಪೋಸ್ಟರ್ ವೈರಲ್ ಆಗಿದೆ.
‘ಜವಾನ್’ ಸಿನಿಮಾದಲ್ಲಿನ ವಿಜಯ್ ಸೇತುಪತಿ ಅವರ ಫಸ್ಟ್ ಲುಕ್ ಪೋಸ್ಟರ್ ಅನ್ನು ಶಾರುಖ್ ಖಾನ್ ಅವರು ಬಿಡುಗಡೆ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಈ ಪೋಸ್ಟರ್ ಹಂಚಿಕೊಂಡಿದ್ದಾರೆ. ಹೊಸ ಪೋಸ್ಟರ್ನಲ್ಲಿ ‘ಸಾವಿನ ವ್ಯಾಪಾರಿ’ ಎಂಬ ಟ್ಯಾಗ್ಲೈನ್ ಗಮನ ಸೆಳೆಯುತ್ತಿದೆ. ಆ ಮೂಲಕ ವಿಜಯ್ ಸೇತುಪತಿ ಪಾತ್ರ ಎಷ್ಟು ಭಯಂಕರವಾಗಿರಲಿದೆ ಎಂಬುದರ ಸುಳಿವು ನೀಡಲಾಗಿದೆ.
ಇದೇ ಮೊದಲ ಬಾರಿಗೆ ವಿಜಯ್ ಸೇತುಪತಿ ಮತ್ತು ಶಾರುಖ್ ಖಾನ್ ಅವರು ಒಂದೇ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇಬ್ಬರ ಮುಖಾಮುಖಿ ದೃಶ್ಯಗಳನ್ನು ನೋಡಲು ಫ್ಯಾನ್ಸ್ ಕಾದಿದ್ದಾರೆ. ಇತ್ತೀಚೆಗಷ್ಟೇ ‘ಜವಾನ್’ ಸಿನಿಮಾದ ಪ್ರಿವ್ಯೂ ಬಿಡುಗಡೆ ಆಗಿತ್ತು. ಅದರಲ್ಲೂ ವಿಜಯ್ ಸೇತುಪತಿ ಅವರ ಪಾತ್ರದ ಝಲಕ್ ಕಾಣಿಸಿತ್ತು. ಈಗ ಪೋಸ್ಟರ್ ಮೂಲಕ ಇನ್ನಷ್ಟು ಕೌತುಕ ಹೆಚ್ಚಿಸುವ ಕೆಲಸ ಮಾಡಲಾಗಿದೆ. ಸೌತ್ ಸಿನಿಮಾಗಳಲ್ಲಿ ವಿಲನ್ ಪಾತ್ರ ಮಾಡಿ ಸೈ ಎನಿಸಿಕೊಂಡಿರುವ ವಿಜಯ್ ಸೇತುಪತಿ ಅವರು ಶಾರುಖ್ ಖಾನ್ ಎದುರು ಹೇಗೆ ಅಬ್ಬರಿಸಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಹೆಚ್ಚಿದೆ.
‘ಜವಾನ್’ ಸಿನಿಮಾದ ಮೇಲೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಳ್ಳಲು ಅನೇಕ ಕಾರಣಗಳಿವೆ. ಪ್ರಿವ್ಯೂ ವಿಡಿಯೋದಲ್ಲಿ ಶಾರುಖ್ ಖಾನ್ ಅವರ ಬೋಳು ತಲೆ ಗೆಟಪ್ ಗಮನ ಸೆಳೆದಿದೆ. ಹಾಗೆಯೇ ನಯನತಾರಾ ಅವರು ಆ್ಯಕ್ಷನ್ ಅವತಾರದಲ್ಲಿ ಬರುತ್ತಿದ್ದಾರೆ. ಈಗ ವಿಜಯ್ ಸೇತುಪತಿ ಅವರನ್ನು ‘ಸಾವಿನ ವ್ಯಾಪಾರಿ’ ಎಂದು ಕರೆಯುವ ಮೂಲಕ ನಿರೀಕ್ಷೆಯನ್ನು ಹೆಚ್ಚಿಸಲಾಗಿದೆ.
ಅಟ್ಲಿ ನಿರ್ದೇಶನ ಮಾಡಿರುವ ‘ಜವಾನ್’ ಸಿನಿಮಾ ಸೆಪ್ಟೆಂಬರ್ 7ರಂದು ವಿಶ್ವಾದ್ಯಂತ ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ ಆಗಲಿದೆ. ಶಾರುಖ್ ಖಾನ್ ಒಡೆತನದ ‘ರೆಡ್ ಚಿಲ್ಲೀಸ್ ಎಂಟರ್ಟೇನ್ಮೆಂಟ್’ ಬ್ಯಾನರ್ ಮೂಲಕ ಗೌರಿ ಖಾನ್ ಅವರು ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಗೌರವ ವರ್ಮಾ ಅವರು ಸಹ-ನಿರ್ಮಾಪಕನಾಗಿದ್ದಾರೆ.
ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…
ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಭಾರೀ ವಿವಾದಕ್ಕೆ…
ಕುವೈತ್/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಕುವೈತ್ ಪ್ರವಾಸದಲ್ಲಿದ್ದು, ಇಲ್ಲಿನ ರಾಜ ಶೇಕ್ ಮಿಶಾಲ್ ಅಲ್…
ಕಲಬುರ್ಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ…
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…