ಚಿತ್ರ ಮಂಜರಿ

ಕಿಡಿ ಹೊತ್ತಿಸಲು ಬಂದ ನಿರಂಜನ್ ಹೊಸ ಚಿತ್ರ ‘ಸ್ಪಾರ್ಕ್’ ಪ್ರಾರಂಭ

ವ್ಯವಸ್ಥೆಯ ವಿರುದ್ಧ ಹೋರಾಡುವ ಪತ್ರಕರ್ತರ ಕುರಿತಾಗಿ ಹಲವು ಸಿನಿಮಾಗಳು ಬಂದಿವೆ. ಇದೀಗ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್ ಸುಧೀಂದ್ರ ಸಹ ಪತ್ರಕರ್ತನಾಗಿ, ವ್ಯವಸ್ಥೆಯ ವಿರುದ್ಧ ಕಿಡಿ ಹೊತ್ತಿಸುವುದಕ್ಕೆ ತಯಾರಾಗಿದ್ದಾರೆ. ನಿರಂಜನ್ ಹೊಸ ಚಿತ್ರದ ಹೆಸರು ‘ಸ್ಪಾರ್ಕ್’.

ಇತ್ತೀಚೆಗೆ ಈ ಚಿತ್ರದ ಮುಹೂರ್ತ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ಶ್ರೀ ಪ್ರಸನ್ನ ವೀರಾಂಜನೇಯಸ್ವಾಮಿ ದೇಗುಲದಲ್ಲಿ ನೆರವೇರಿತು. ‘ಡಾರ್ಲಿಂಗ್’ ಕೃಷ್ಣ, ಮಿಲನಾ ನಾಗರಾಜ್ ಹಾಗೂ ನವೀನ್ ಶಂಕರ್ ವಿಶೇಷ ಅತಿಥಿಯಾಗಿ ಆಗಮಿಸಿ ಇಡೀ ಚಿತ್ರತಂಡಕ್ಕೆ ಶುಭಾಶಯ ತಿಳಿಸಿದರು.

ಇದೊಂದು ನೈಜ ಘಟನೆಯಾಧರಿಸಿ ನಿರ್ಮಾಣವಾಗುತ್ತಿರುವ ಚಿತ್ರವಾಗಿದ್ದು, ಈ ಚಿತ್ರವನ್ನು ಡಾ.ಗರಿಮಾ ಅವಿನಾಶ್ ವಸಿಷ್ಠ ನಿರ್ಮಿಸುತ್ತಿದ್ದಾರೆ. ‘ಸ್ಪಾರ್ಕ್’, ಮಹಾಂತೇಶ್ ಹಂದ್ರಾಳ್ ನಿರ್ದೇಶನದ ಮೊದಲ ಚಿತ್ರ. ಈ ಚಿತ್ರವನ್ನು ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಇದಕ್ಕೂ ಮೊದಲು ಅವರು ‘ಜೇಮ್ಸ್’, ‘ಭರಾಟೆ’, ‘ಕನಕ’ ಸೇರಿದಂತೆ ೧೫ಕ್ಕೂ ಹೆಚ್ಚು ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದರಂತೆ.

ಈ ಸಂದರ್ಭದಲ್ಲಿ ಮಾತನಾಡಿದ ನಿರಂಜನ್ ಸುಧೀಂದ್ರ, ‘ಈ ಸಿನಿಮಾಗಾಗಿ ಮಹಾಂತೇಶ್ ಒಂದು ಅದ್ಭುತ ಕಥೆ ಬರೆದಿದ್ದಾರೆ. ಮಾಧ್ಯಮದವರಿಗೆ ಇರುವ ಸ್ಪಾರ್ಕ್ ಇನ್ಯಾರಿಗೂ ಇರುವುದಿಲ್ಲ. ಯಾವುದೇ ವಿಷಯದ ಬಗ್ಗೆ ಮೊದಲು ಕಿಡಿಹೊತ್ತಿಸುವವರು ಅವರೇ. ನಮ್ಮ ಕಥೆಯಲ್ಲಿ ಚಿಕ್ಕ ಕಿಡಿ ಇದೆ. ಅದನ್ನು ‘ಸ್ಪಾರ್ಕ್’ ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡಲಾಗುತ್ತಿದೆ. ಸಿನಿಮಾದಲ್ಲಿ ನಾನು ಅಭಿರಾಮ್ ಎಂಬ ಪತ್ರಕರ್ತನ ಪಾತ್ರ ಮಾಡುತ್ತಿದ್ದೇನೆ’ ಎಂದರು. ನಿರಂಜನ್ ಸುಧೀಂದ್ರಗೆ ನಾಯಕಿಯಾಗಿ ರಚನಾ ಇಂದರ್ ನಟಿಸುತ್ತಿದ್ದಾರೆ.

ಅಶ್ವಿನ್ ಕೆನಡಿ ಛಾಯಾಗ್ರಹಣ, ಸಚಿನ್ ಬಸ್ರೂರು ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ. ಬೆಂಗಳೂರಿನ ಸುತ್ತಮುತ್ತ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದೆ.

ಆಂದೋಲನ ಡೆಸ್ಕ್

Recent Posts

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

1 hour ago

ರಾಜ್ಯದ 101 ತಾಲ್ಲೂಕುಗಳು ಬರ ತಾಲ್ಲೂಕುಗಳೆಂದು ಘೋಷಣೆ: ಡಿಸಿಎಂ ಜಿ.ಪರಮೇಶ್ವರ್‌

ಮೈಸೂರು: ರೈತರಿಗೆ ಬರ ಪರಿಹಾರ ನೀಡುವ ವಿಚಾರವಾಗಿ ಮಾತನಾಡಿರುವ ಡಿಸಿಎಂ ಪರಮೇಶ್ವರ್‌, ರಾಜ್ಯದ 101 ತಾಲೂಕುಗಳನ್ನು ಬರ ತಾಲೂಕುಗಳೆಂದು ಘೋಷಣೆ…

2 hours ago

ಓದುಗರ ಪತ್ರ: ಉಳುವ ‘ಯೋಗಿ’ ಕೂಗಿಗೆ ಸರ್ಕಾರ ತರ್ತಾಗಿ ಸ್ಪಂದಿಸಲಿ

ರಾಜ್ಯದ ೧೭೫ ತಾಲ್ಲೂಕುಗಳು ಭೀಕರ ಬರಕ್ಕೆ ತತ್ತರಿಸಿ, ಶೇಕಡಾ ೮೦ ಕ್ಕೂ ಹೆಚ್ಚು ಬೆಳೆ ನಷ್ಟದಿಂದ ಅನ್ನದಾತರು ಸಂಪೂರ್ಣ ಕಂಗಾಲಾಗಿದ್ದರೂ…

2 hours ago

ಓದುಗರ ಪತ್ರ: ರಾಷ್ಟ್ರಕವಿ ಶ್ಲಾಘನೆಯ ಸ್ಮರಣೆ

೧೯೮೬ರ ಆಗಸ್ಟ್ ೨೯ರಂದು (ಜಗದ್ಗುರು ವೀರಸಿಂಹಾಸನ ಮಹಾಸಂಸ್ಥಾನ ಮಠದ ೨೩ ನೇ ಮಠಾಧಿಪತಿ) ಶಿವರಾತ್ರಿ ರಾಜೇಂದ್ರ ಶ್ರೀಗಳ ಅಮೃತ ಮಹೋತ್ಸವದ…

3 hours ago

ಓದುಗರ ಪತ್ರ: ಸೈಬರ್ ವಂಚನೆ: ಜಾಗೃತಿಯೂ ಫಲ ನೀಡುತ್ತಿಲ್ಲವಲ್ಲ…

ರಾಜ್ಯದಲ್ಲಿ ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿದ್ದು, ಕಳೆದ ಏಳು ತಿಂಗಳ ಅವಧಿಯಲ್ಲಿ ಸುಮಾರು ರೂ.೬೦೦ ಕೋಟಿಯಷ್ಟು ಹಣ ಸೈಬರ್ ವಂಚಕರ…

3 hours ago

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

6 hours ago