ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತಾದ ಲೀಡರ್ ರಾಮಯ್ಯ ಚಿತ್ರದ ಬಗ್ಗೆ ಮತ್ತೊಂದು ಹೊಸ ವಿಷಯ ಹೊರಬಿದ್ದಿದೆ. ಈ ಸಿನಿಮಾದಲ್ಲಿ ನಿರೂಪ್ ಭಂಡಾರಿ ಕೂಡ ನಟಿಸಲಿದ್ದಾರೆ. ಈಗಾಗಲೇ ನಿರೂಪ್ ಅವರನ್ನು ಚಿತ್ರತಂಡ ಭೇಟಿ ಕೂಡ ಮಾಡಿದೆಯಂತೆ.
ಲೀಡರ್ ರಾಮಯ್ಯ ಸಿನಿಮಾ ಎರಡು ಭಾಗದಲ್ಲಿ ಮೂಡಿ ಬರಲಿದ್ದು, ಮೊದಲ ಭಾಗದಲ್ಲಿ ನಿರೂಪ್ ಭಂಡಾರಿ ನಾಯಕನಾಗಿ ನಟಿಸಿದರೆ, ಎರಡನೇ ಭಾಗದಲ್ಲಿ ಸಿದ್ದರಾಮಯ್ಯನವರ ಪಾತ್ರದಲ್ಲಿ ತಮಿಳಿನ ಹೆಸರಾಂತ ನಟ ವಿಜಯ್ ಸೇತುಪತಿ ಕಾಣಿಸಿಕೊಳ್ಳಲಿದ್ದಾರಂತೆ. ಯೌವನದ ಪಾತ್ರದಲ್ಲಿ ನಿರೂಪ್, ಸಿದ್ದರಾಮಯ್ಯ ಲಾಯರ್ ಆಗಿದ್ದ ದಿನಗಳ ಪಾತ್ರದಲ್ಲಿ ವಿಜಯ್ ಸೇತುಪತಿ ನಟಿಸಲಿದ್ದಾರೆ ಎನ್ನುವುದು ಸದ್ಯಕ್ಕಿರುವ ಮಾಹಿತಿ.
ಸಿದ್ದರಾಮಯ್ಯ ಅವರ ಕುರಿತಾದ ಚಿತ್ರಕ್ಕೆ ಸದ್ಯದಲ್ಲೇ ಚಾಲನೆ ಸಿಗಲಿದ್ದು, ಈಗಾಗಲೇ ಸಿನಿಮಾದ ಸ್ಕ್ರಿಪ್ಟ್ ಸೇರಿದಂತೆ ಹಲವು ಕೆಲಸಗಳಲ್ಲಿ ಬ್ಯುಸಿಯಾಗಿದೆ ಚಿತ್ರತಂಡ. ಕಲಾವಿದರ ಆಯ್ಕೆ ಕೂಡ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಇದೆ. ಬಾಲ್ಯ ಮತ್ತು ಯೌವನ ಹೀಗೆ ಎರಡು ಸ್ತರದ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ ಎನ್ನುವ ಮಾಹಿತಿ ಇದೆ.
ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಶೈಲಿಯಲ್ಲಿ ಗುರುತಿಸಿಕೊಂಡಿರುವ ಸಿದ್ದರಾಮಯ್ಯ ಅವರ ಜೀವನ ಚರಿತ್ರೆಯನ್ನ ಬೆಳ್ಳಿಪರದೆಯಲ್ಲಿ ಬಿಚ್ಚಿಡಲು ಸತ್ಯರತ್ನಂ ರೆಡಿಯಾಗಿದ್ದಾರೆ. ಈಗಾಗಲೇ ಈ ಕುರಿತು ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ. ಮಾಜಿ ಸಚಿವ ಶಿವರಾಜ್ ತಂಗಡಗಿ ಮತ್ತು ಜಮೀರ್ ಅಹ್ಮಮದ್ ನೇತೃತ್ವದಲ್ಲಿ ಮಾಕತೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಕೂಡ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
ಗಂಗಾವತಿ ಹಯಾತ್ ಪೀರ್ ಸಾಬ್ ಅವರ ನೇತೃತ್ವದ ಎಮ್‌ಎಸ್ ಕ್ರಿಯೇಷನ್ಸ್ ಬ್ಯಾನರ್ ಅಡಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಹೈ ಬಜೆಟ್‌ನಲ್ಲಿ 50 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ. ಸದ್ಯದಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಬಯೋಪಿಕ್ ಬಗ್ಗೆ ಚಿತ್ರತಂಡದಿಂದ ಅಭಿಮಾನಿಗಳಿಗೆ ಅಧಿಕೃತ ಮಾಹಿತಿ ಸಿಗಲಿದೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…