ಚಿತ್ರ ಮಂಜರಿ

ಲೀಡರ್‌ ರಾಮಯ್ಯ ಪಾರ್ಟ್ 1ಗೆ ನಿರೂಪ್ ಭಂಡಾರಿ ಹೀರೋ

ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತಾದ ಲೀಡರ್‌ ರಾಮಯ್ಯ ಚಿತ್ರದ ಬಗ್ಗೆ ಮತ್ತೊಂದು ಹೊಸ ವಿಷಯ ಹೊರಬಿದ್ದಿದೆ. ಈ ಸಿನಿಮಾದಲ್ಲಿ ನಿರೂಪ್ ಭಂಡಾರಿ ಕೂಡ ನಟಿಸಲಿದ್ದಾರೆ. ಈಗಾಗಲೇ ನಿರೂಪ್ ಅವರನ್ನು ಚಿತ್ರತಂಡ ಭೇಟಿ ಕೂಡ ಮಾಡಿದೆಯಂತೆ.

ಲೀಡರ್‌ ರಾಮಯ್ಯ ಸಿನಿಮಾ ಎರಡು ಭಾಗದಲ್ಲಿ ಮೂಡಿ ಬರಲಿದ್ದು, ಮೊದಲ ಭಾಗದಲ್ಲಿ ನಿರೂಪ್ ಭಂಡಾರಿ ನಾಯಕನಾಗಿ ನಟಿಸಿದರೆ, ಎರಡನೇ ಭಾಗದಲ್ಲಿ ಸಿದ್ದರಾಮಯ್ಯನವರ ಪಾತ್ರದಲ್ಲಿ ತಮಿಳಿನ ಹೆಸರಾಂತ ನಟ ವಿಜಯ್ ಸೇತುಪತಿ ಕಾಣಿಸಿಕೊಳ್ಳಲಿದ್ದಾರಂತೆ. ಯೌವನದ ಪಾತ್ರದಲ್ಲಿ ನಿರೂಪ್, ಸಿದ್ದರಾಮಯ್ಯ ಲಾಯರ್ ಆಗಿದ್ದ ದಿನಗಳ ಪಾತ್ರದಲ್ಲಿ ವಿಜಯ್ ಸೇತುಪತಿ ನಟಿಸಲಿದ್ದಾರೆ ಎನ್ನುವುದು ಸದ್ಯಕ್ಕಿರುವ ಮಾಹಿತಿ.

ಸಿದ್ದರಾಮಯ್ಯ ಅವರ ಕುರಿತಾದ ಚಿತ್ರಕ್ಕೆ ಸದ್ಯದಲ್ಲೇ ಚಾಲನೆ ಸಿಗಲಿದ್ದು, ಈಗಾಗಲೇ ಸಿನಿಮಾದ ಸ್ಕ್ರಿಪ್ಟ್ ಸೇರಿದಂತೆ ಹಲವು ಕೆಲಸಗಳಲ್ಲಿ ಬ್ಯುಸಿಯಾಗಿದೆ ಚಿತ್ರತಂಡ. ಕಲಾವಿದರ ಆಯ್ಕೆ ಕೂಡ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಇದೆ. ಬಾಲ್ಯ ಮತ್ತು ಯೌವನ ಹೀಗೆ ಎರಡು ಸ್ತರದ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತಿದೆ ಎನ್ನುವ ಮಾಹಿತಿ ಇದೆ.

ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಶೈಲಿಯಲ್ಲಿ ಗುರುತಿಸಿಕೊಂಡಿರುವ ಸಿದ್ದರಾಮಯ್ಯ ಅವರ ಜೀವನ ಚರಿತ್ರೆಯನ್ನ ಬೆಳ್ಳಿಪರದೆಯಲ್ಲಿ ಬಿಚ್ಚಿಡಲು ಸತ್ಯರತ್ನಂ ರೆಡಿಯಾಗಿದ್ದಾರೆ. ಈಗಾಗಲೇ ಈ ಕುರಿತು ಒಂದು ಸುತ್ತಿನ ಮಾತುಕತೆ ಕೂಡ ನಡೆಸಿದ್ದಾರೆ. ಮಾಜಿ ಸಚಿವ ಶಿವರಾಜ್ ತಂಗಡಗಿ ಮತ್ತು ಜಮೀರ್ ಅಹ್ಮಮದ್ ನೇತೃತ್ವದಲ್ಲಿ ಮಾಕತೆ ನಡೆದಿದೆ. ಸಿಎಂ ಸಿದ್ದರಾಮಯ್ಯ ಕೂಡ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಗಂಗಾವತಿ ಹಯಾತ್ ಪೀರ್ ಸಾಬ್ ಅವರ ನೇತೃತ್ವದ ಎಮ್‌ಎಸ್ ಕ್ರಿಯೇಷನ್ಸ್ ಬ್ಯಾನರ್ ಅಡಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ಹೈ ಬಜೆಟ್‌ನಲ್ಲಿ 50 ಕೋಟಿ ರೂ.ಗೂ ಅಧಿಕ ವೆಚ್ಚದಲ್ಲಿ ಚಿತ್ರಕ್ಕೆ ಬಂಡವಾಳ ಹೂಡಲಿದ್ದಾರೆ. ಸದ್ಯದಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಬಯೋಪಿಕ್‌ ಬಗ್ಗೆ ಚಿತ್ರತಂಡದಿಂದ ಅಭಿಮಾನಿಗಳಿಗೆ ಅಧಿಕೃತ ಮಾಹಿತಿ ಸಿಗಲಿದೆ.

lokesh

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

8 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

9 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

9 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

10 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

10 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

10 hours ago