ಚಿತ್ರ ಮಂಜರಿ

ದರ್ಶನ್ ​ಮೇಲೆ ಕೋಪ ಇಲ್ಲ : ಕಿಚ್ಚ ಸುದೀಪ್

ನಟ ದರ್ಶನ್ ಹಾಗೂ ಸುದೀಪ್ ಮಧ್ಯೆ ವೈಮನಸ್ಸು ಮೂಡಿ ಹಲವು ವರ್ಷಗಳು ಕಳೆದಿವೆ. ಇಬ್ಬರೂ ಒಂದಾಗಬೇಕು ಎಂಬುದು ಅಭಿಮಾನಿಗಳ ಆಸೆ. ಇತ್ತೀಚಿನ ವರ್ಷಗಳಲ್ಲಿ ಸುದೀಪ್ ಈ ವಿಚಾರದಲ್ಲಿ ಪಾಸಿಟಿವ್ ಆಗಿ ಪ್ರತಿಕ್ರಿಯಿಸುತ್ತಲೇ ಬಂದಿದ್ದಾರೆ. ಇಂದು ಸುದೀಪ್ ಹುಟ್ಟುಹಬ್ಬ. ಈ ವೇಳೆ ಅವರು ದರ್ಶನ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನನಗೆ ದರ್ಶನ್ ಮೇಲೆ ಕೋಪವಿಲ್ಲ ಎಂದು ಅವರು ನೇರವಾಗಿ ಹೇಳಿದ್ದಾರೆ. ಜೊತೆಗೆ ರಾಜಿ ಸಂಧಾನದ ಸೂಚನೆ ನೀಡಿದ್ದಾರೆ.

ಇತ್ತೀಚೆಗೆ ಸುಮಲತಾ ಅಂಬರೀಷ್ ಹುಟ್ಟುಹಬ್ಬ ಆಚರಿಸಿಕೊಂಡರು. ಈ ವೇದಿಕೆ ಮೇಲೆ ದರ್ಶನ್ ಹಾಗೂ ಸುದೀಪ್ ಒಟ್ಟಾಗಿ ಕಾಣಿಸಿಕೊಂಡರು. ಆರು ವರ್ಷಗಳ ಬಳಿಕ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡರು. ಆದರೆ, ಇವರ ಮಧ್ಯೆ ಮಾತುಕತೆ ನಡೆದಿಲ್ಲ. ಈಗ ಒಂದೇ ವೇದಿಕೆ ಮೇಲೆ ಕಾಣಿಸಿಕೊಂಡ ಬಗ್ಗೆ ಸುದೀಪ್ ಮಾತನಾಡಿದ್ದಾರೆ. ದರ್ಶನ್ ಹಾಗೂ ನಾನು ಒಂದೇ ಪಾರ್ಟಿಯಲ್ಲಿ ಭೇಟಿ ಆಗಿದ್ದು ನನಗೆ ಖುಷಿ ತಂದಿದೆ. ನಾವು ಕಿತ್ತಾಡಿಕೊಂಡಿಲ್ಲ. ನನಗೆ ದರ್ಶನ್ ಮೇಲೆ ಕೋಪವಿಲ್ಲ. ನಂಗೂ ಕೆಲವು ಪ್ರಶ್ನೆಗಳು ಇವೆ, ಅದೇ ರೀತಿ ದರ್ಶನ್​ಗೂ ಪ್ರಶ್ನೆ ಇದೆ. ಇಬ್ಬರೂ ಮುಖಾಮುಖಿ ಆದಾಗ ಮಾತ್ರ ಸಮಸ್ಯೆಗೆ ಪರಿಹಾರ ಸಿಗೋದು. ಸುಮಲತಾ ಮೇಲಿನ ಗೌರವದಿಂದ ಆ ಪಾರ್ಟಿಗೆ ಹೋಗಿದ್ದೆ ಎಂದಿದ್ದಾರೆ.

ನಾನು ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಪೋಸ್ಟ್​​ಗಳನ್ನು ನೋಡಲು ಹೋಗುವುದಿಲ್ಲ. ದರ್ಶನ್ ಏನು ಪೋಸ್ಟ್ ಮಾಡಿದ್ದಾರೆ ಎಂಬುದನ್ನು ನಾನು ನೋಡಿಲ್ಲ. ನೇರವಾಗಿ ಏನಾದರೂ ಹೇಳಿದರೆ ಅದನ್ನು ಪರಿಗಣನೆ ಮಾಡುತ್ತೇನೆ. ಶೇಕ್ ಹ್ಯಾಂಡ್ ಮಾಡೋದು ದೊಡ್ಡದಲ್ಲ. ಕೆಲವೊಂದಕ್ಕೆ ಸಮಯ ಕೂಡಿ ಆ ಬಳಿಕ ಸರಿ ಹೋಗುತ್ತದೆ. ನಾವಿಬ್ಬರು ಮತ್ತೆ ಒಂದಾದರೆ ನನಗೆ ಖುಷಿ ಇದೆ ಎಂದಿದ್ದಾರೆ.

ಅಭಿಮಾನಿಗಳು ಹುಟ್ಟುಹಬ್ಬ ಆಚರಿಸುತ್ತಿರುವ ಬಗ್ಗೆ ಸುದೀಪ್ ಪ್ರತಿಕ್ರಿಯಿಸಿದ್ದು,ಎಲ್ಲವೂ ಸರ್ಪ್ರೈಸ್ ಆಗಿ ಬರುತ್ತಿದೆ. ರಾತ್ರಿಯಿಂದ ನಿದ್ದೆಯನ್ನೇ ಮಾಡಿಲ್ಲ. ನಿಮ್ಮಿಂದಲೇ ತಾಳ್ಮೆ ಕಲಿತಿದ್ದೀನಿ. ನಾನು ಹೇಗೆ ಬೇಕಾದರು ಇರುತ್ತೇನೆ ಎನ್ನುವುದಕ್ಕೆ ಆಗುವುದಿಲ್ಲ. ಕಲಾವಿದರಾಗಿ ನಾವು ಸರ್ವೆಂಟ್ ಆಗಬೇಕು. ಸಾವಿರ ನೋವಿರಲಿ ಎಲ್ಲರನ್ನೂ ಭೇಟಿಯಾಗಬೇಕು ಎಂದಿದ್ದಾರೆ.

lokesh

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

11 hours ago