ಚಿತ್ರ ಮಂಜರಿ

ಪಠಾಣ್ ಕುರಿತು ವಿವಾದ ಏನೇ ಇರಲಿ, ನಾನು ಆ ಸಿನಿಮಾವನ್ನು ನೋಡುತ್ತೇನೆ : ನಟ ಪ್ರಕಾಶ್ ಬೆಳವಾಡಿ

ಪಠಾಣ್ ಸಿನಿಮಾ ಕುರಿತು ನಟ ಪ್ರಕಾಶ್ ಬೆಳವಾಡಿ ಮಾಧ್ಯಮವೊಂದರ ಜೊತೆ ಮಾತನಾಡಿ, ‘ಸಿನಿಮಾ ರಂಗದಲ್ಲಿ ಬಿಗುವಿನ ವಾತಾವರಣವಿದೆ. ಸಿನಿಮಾವನ್ನು ಬಾಯ್ಕಾಟ್ ಮಾಡಬೇಕಾ ಅಥವಾ ಬೇಡವಾ ಎನ್ನುವುದರ ಕುರಿತು ಚರ್ಚೆಯಾಗುತ್ತಿದೆ. ಚರ್ಚೆ ಆಗುತ್ತಿರುವ ವಿಷಯ ಎಷ್ಟು ಸಭ್ಯ ಎಂದು ಯೋಚಿಸಬೇಕಿದೆ. ಮಾತಾಡೋಕೆ ತುಂಬಾ ವಿಷಯ ಇದೆ. ಆದರೆ, ಪರಿಸ್ಥಿತಿ ಕೆಟ್ಟದಾಗಿದೆ. ಚರ್ಚೆ, ವಿವಾದ ಏನೇ ಇರಲಿ, ನಾನು ಆ ಸಿನಿಮಾವನ್ನು ನೋಡುತ್ತೇನೆ’ ಎಂದು ಹೇಳಿದ್ದಾರೆ. ಅಂದಹಾಗೆ ಪ್ರಕಾಶ್ ಬೆಳವಾಡಿ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.

ವಿವಾದದ ಕುರಿತು ಮಾತನಾಡಿರುವ ಶಾರುಖ್ ಖಾನ್. ನಾವು ಸಿನಿಮಾವನ್ನು ಸಿನಿಮಾದಂತೆ ನೋಡಬೇಕು. ನಾನಂತೂ ಸಿನಿಮಾವಾಗಿಯೇ ಅಲ್ಲಿ ಕೆಲಸ ಮಾಡಿದ್ದೇನೆ. ಈ ವಿವಾದವನ್ನು ಯಾಕೆ ಎಬ್ಬಿಸುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತು. ನನ್ನ ಮನಸ್ಸಲ್ಲಂತೂ ಯಾವುದೇ ಕೆಟ್ಟ ಆಲೋಚನೆಗಳು ಇಲ್ಲ. ಈ ವಿವಾದದಿಂದ ಸಿನಿಮಾ ಸಾಕಷ್ಟು ಪ್ರಚಾರ ಪಡೆದುಕೊಂಡಿದೆ. ಹಾಗಾಗಿ ಜನರು ಚಿತ್ರವನ್ನು ಗೆಲ್ಲಿಸುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಅವರು ಹೇಳಿದ್ದಾರೆ.

andolanait

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

6 hours ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

10 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

10 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

11 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

11 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

11 hours ago