Mysore
20
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಜವಾನ್ ಗೆ ಪೈರಸಿ ಕಾಟ : ಪೊಲೀಸರಿಗೆ ದೂರು ನೀಡಿದ ಶಾರುಖ್‌

ಬಾಕ್ಸ್ ಆಫೀಸಿನಲ್ಲಿ ಭಾರೀ ಕಮಾಲ್ ಮಾಡುತ್ತಿರುವ ಜವಾನ್ ಚಿತ್ರಕ್ಕೆ ಪೈರಸಿ ಕಾಟ ಶುರುವಾಗಿದೆ. ಬಿಡುಗಡೆಯಾದ ಕೆಲವೇ ದಿನಗಳಲ್ಲೇ ಥಿಯೇಟರ್ ನಲ್ಲಿ ಶೂಟ್ ಮಾಡಲಾದ ಜವಾನ್ ಸಿನಿಮಾವನ್ನು ರಿಲೀಸ್ ಮಾಡಿದ್ದು, ಅದು ಸೋಷಿಯಲ್ ಮೀಡಿಯಾದಲ್ಲೂ ಶೇರ್ ಆಗಿದೆ. ಈ ಲಿಂಕ್ ಅನ್ನು ಹಂಚಿಕೊಳ್ಳುವವರ ವಿರುದ್ಧ ಶಾರುಖ್ ಖಾನ್ ಸಮರಕ್ಕೆ ಮುಂದಾಗಿದ್ದಾರೆ.

ಸ್ವತಃ ಶಾರುಖ್ ಖಾನ್ ಅವರೇ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಇವರ ಪತ್ನಿ ಗೌರಿ ಖಾನ್ ಇದರ ನಿರ್ಮಾಪಕರು. ಹಾಗಾಗಿ ಪೈರಸಿ ಮಾಡುವವರ ವಿರುದ‍್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಈ ಕುರಿತಾಗಿ ಈಗಾಗಲೇ ಅವರು ಮುಂಬೈನ ಸಾಂತಾಕ್ರೂಜ್ ವೆಸ್ಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಜೊತೆಗೆ ಪೈರಸಿ ಪತ್ತೆ ಹಚ್ಚುವಂತಹ ಏಜೆನ್ಸಿಗಳನ್ನೂ ಅವರು ನೇಮಿಸಿಕೊಂಡಿದ್ದಾರೆ.

ಜವಾನ್ ಸಿನಿಮಾ ಚಿತ್ರಮಂದಿರಲ್ಲಿ ಸಕ್ಸಸ್‌ಫುಲ್ ಪ್ರದರ್ಶನ ಕಾಣುತ್ತಿದೆ. ಈ ನಡುವೆಯೇ ಜವಾನ್ 2 ಬರುವ ಬಗ್ಗೆ ಗುಡ್ ನ್ಯೂಸ್ ಸಿಕ್ಕಿದೆ. ಶಾರುಖ್- ವಿಜಯ್ ಸೇತುಪತಿ ಜುಗಲ್‌ಬಂದಿ ಜವಾನ್ ಸಿನಿಮಾದಲ್ಲಿ ವರ್ಕೌಟ್ ಆಗಿದೆ. ಸದಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಇರುವ ಶಾರುಖ್‌ಗೆ ಜವಾನ್ ಚಿತ್ರದ ಬಗ್ಗೆ ಪ್ರಶ್ನೆ ಕೇಳಲಾಗಿದೆ. ಅವರ ಉತ್ತರ ಜವಾನ್ 2 ಬರುವ ಬಗ್ಗೆ ಸೂಚನೆ ಕೊಟ್ಟಿದೆ

ಅಭಿಮಾನಿಯೊಬ್ಬರು, ಸರ್, ನೀವೇಕೆ ಕಾಳಿ ವಿಜಯ್ ಸೇತುಪತಿ ಜೊತೆಗೆ ಡೀಲ್ ಮಾಡಿಕೊಳ್ಳಲಿಲ್ಲ? ನಾನು ವಿಜಯ್ ಸೇತುಪತಿ ಸರ್‌ಗೆ ದೊಡ್ಡ ಅಭಿಮಾನಿ ಎಂದು ಟ್ವೀಟ್ ಮಾಡಿದ್ದಾರೆ. ಅದಕ್ಕೆ ಪ್ರತಿಕ್ರಿಯೆ ನೀಡಿರುವ ಶಾರುಖ್ ಖಾನ್, ನಾನು ಕೂಡ ವಿಜಯ್ ಸರ್‌ಗೆ ದೊಡ್ಡ ಅಭಿಮಾನಿ. ನಾನು ಈಗಾಗಲೇ ಕಾಳಿಯ ಕಪ್ಪು ಹಣವನ್ನು ತೆಗೆದುಕೊಂಡು ಬಂದಿದ್ದೇನೆ. ಈಗ ಬೇರೆಯವರ ಕಪ್ಪು ಹಣವನ್ನು ಹೊರ ತೆಗೆಯುವುದಕ್ಕೆ ಕಾಯುತ್ತಿದ್ದೇನೆ. ವೀಸಾಗಾಗಿ ಕಾಯುತ್ತಿದ್ದೇನೆ ಎಂದು ಟ್ಟೀಟ್ ಮಾಡಿದ್ದಾರೆ. ಈ ಟ್ವೀಟ್ ಜವಾನ್ 2 ಬರುವ ಬಗ್ಗೆ ಸೂಚನೆ ನೀಡುತ್ತಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಶುರುವಾಗಿದೆ.

ವಾನ್‌ನಲ್ಲಿ ಕ್ಲೈಮ್ಯಾಕ್ಸ್‌ನಲ್ಲಿ ಮುಗಿದ ಮೇಲೆ ಪಾರ್ಟ್ 2 ಬರುವ ರೀತಿಯಲ್ಲಿ ಒಂದು ಸೀನ್ ಇಡಲಾಗಿದೆ. ಅದಕ್ಕೆ ತಕ್ಕಂತೆ ಶಾರುಖ್ ಟ್ವೀಟ್ ಕೂಡ ಹೋಲಿಕೆಯಾಗುತ್ತಿದೆ. ಜವಾನ್ ಸೀಕ್ವೆಲ್ ಬಂದೇ ಬರುತ್ತೆ ಅಂತಾ ಫ್ಯಾನ್ಸ್ ಸಂಭ್ರಮದಲ್ಲಿದ್ದಾರೆ.ಜವಾನ್ 2 ಬರುವ ಬಗ್ಗೆ ಈ ಮೂಲಕ ನಟ ಸುಳಿವು ನೀಡಿದ್ರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ