ಚಿತ್ರ ಮಂಜರಿ

ಕವಿಶೈಲಕ್ಕೆ ಭೇಟಿ ನೀಡಿದ ಪೂಜಾ ಗಾಂಧಿ ದಂಪತಿ

ರಾಷ್ಟ್ರಕವಿ ಕುವೆಂಪು ಅವರ ಆಶಯದ ಮಂತ್ರ ಮಾಂಗಲ್ಯ ಪದ್ದತಿಯ ಮೂಲಕ ಹೊಸ ಬಾಳಿಗೆ ಕಾಲಿಟ್ಟ ನಟಿ ಪೂಜಾ ಗಾಂಧಿ ಅವರು ಇದೀಗ ಕುವೆಂಪು ಅವರ ಹುಟ್ಟೂರಿನಲ್ಲಿರುವ ಕವಿ ಶೈಲಕ್ಕೆ ಪತಿ ವಿಜಯ್‌ ಘೋರ್ಪಡೆಯವರ ಜೊತೆ ಭೇಟಿ ನೀಡಿದ್ದಾರೆ.

ಈ ಫೊಟೋವನ್ನು ನಟಿ ಪೂಜಾ ಗಾಂಧಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದು, ಕವಿಶೈಲ ಎಂದು ಬರೆದುಕೊಂಡಿದ್ದಾರೆ. ಮಳೆ ಹುಡುಗಿಯ ಕನ್ನಡ ಪ್ರೇಮಕ್ಕೆ ಅಭಿಮಾನಿಗಳಿಂದ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದ್ದು, ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಉತ್ತರ ಪ್ರದೇಶ ಮೂಲದವರಾದ ಪೂಜಾ ಗಾಂಧಿ ಕನ್ನಡ ಚಿತ್ರರಂಗದಲ್ಲಿ ಬದುಕು ಕಟ್ಟಿಕೊಂಡಿದ್ದಾರೆ. ತಮ್ಮ ಮಾತೃ ಭಾಷೆ ಹಿಂದಿ ಆದರೂ ಕೂಡ ಅವರು ಕನ್ನಡ ಭಾಷೆಯ ಮೇಲೆ ಪೂಜಾ ಗಾಂಧಿ ಅವರು ಅಪಾರವಾದ ಒಲವನ್ನು ಹೊಂದಿದ್ದಾರೆ. ಕರ್ನಾಟಕದಲ್ಲಿ ಇರುವ ಪರ ಭಾಷಿಕರೂ ಕೂಡ ಕನ್ನಡವನ್ನು ಕಲಿಯಬೇಕು ಎಂದು ಹೇಳುವ ಪೂಜಾ ಗಾಂಧಿ ಸ್ಪಷ್ಟವಾಗಿ ಕನ್ನಡ ಮಾತನಾಡಲು ಕಲಿತಿದ್ದಾರೆ.

ಗೋಲ್ಡನ್‌ ಸ್ಟಾರ್‌ ಗಣೇಶ್‌ ಅವರಿಗೆ ದೊಡ್ಡ ಮಟ್ಟದ ಸಕ್ಸಸ್‌ ತಂದುಕೊಟ್ಟ ಮುಂಗಾರುಮಳೆ ಸಿನಿಮಾ ಮೂಲಕ ಕನ್ನಡ ಚಿತ್ರಂಗಕ್ಕೆ ಪಾದಾರ್ಪಣೆ ಮಾಡಿದ್ದ ಪೂಜಾ ಗಾಂಧಿ ಅವರು ನವೆಂಬರ್‌ 23 ರಂದು ಬೆಂಗಳೂರಿನ ಯಲಹಂಕದಲ್ಲಿ ಕುವೆಂಪು ಆಶಯದ ಮಂತ್ರ ಮಾಂಗಲ್ಯ ಪದ್ದತಿಯ ಮೂಲಕ ಉದ್ಯಮಿ ವಿಜಯ್‌ ಘೋರ್ಪಡೆ ಅವರ ಕೈ ಹಿಡಿದು ಹೊಸ ಜೀವನಕ್ಕೆ ಕಾಲಿರಿಸಿದ್ದರು. ಸ್ಯಾಂಡಲ್ವುಡ್‌ ನ ಹಲವಾರು ನಟ ನಟಿಯರು ಮದುವೆಯಲ್ಲಿ ಭಾಗಿಯಾಗಿ ನವ ವಧು ವರರಿಗೆ ಶುಭ ಕೋರಿದ್ದರು.

ವಿಶೇಷವೆಂದರೆ ನಟಿ ಪೂಜಾ ಗಾಂಧಿ ಅವರು ತಮ್ಮ ಕೈಯ್ಯಾರೆ ಅಚ್ಚ ಕನ್ನಡದಲ್ಲಿ ಮದುವೆಯ ಆಮಂತ್ರಣ ಪತ್ರಿಕೆ ಬರೆದು ಆತ್ಮೀಯವಾಗಿ ಮದುವೆಗೆ ಆಹ್ವಾನಿಸಿದ್ದರು.

lokesh

Recent Posts

ಪೊಲೀಸರ ಮೇಲೆ ಹಲ್ಲೆ: 20 ಜನರ ವಿರುದ್ಧ ಕೇಸ್‌ ದಾಖಲು

ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್‌ ಪ್ರತಿಭಟನೆಗೆ ಕರೆ ನೀಡಿತ್ತು. ಈ…

9 hours ago

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

11 hours ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

11 hours ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

12 hours ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

13 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

14 hours ago