ಪ್ರಭಾಸ್ ನಟನೆಯ ಮಾಸ್ ಎಲಿಮೆಂಟ್ ಸಿನಿಮಾ ಸಲಾರ್ ಕದನ ವಿರಾಮ-1 ಚಿತ್ರ ದೇಶಾದ್ಯಂತ ಯಶಸ್ಸು ಕಂಡ ಬಳಿಕ ಇದೀಗ ದ್ವೀಪ ರಾಷ್ಟ್ರ ಜಪಾನ್ ನಲ್ಲಿ ಬೇಸಿಗೆಗೆ ಸಲಾರ್ ಚಿತ್ರ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ.
ಹೊಂಬಾಳೆ ಪಿಲ್ಮ್ಸ್ ನಿರ್ಮಿಸಿ, ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಚಿತ್ರದ ವಿತರಣೆಯನ್ನು ಜಪಾನ್ ವಿತರಣ ಕಂಪನಿ ʼಟ್ವಿನ್ʼ ಹಕ್ಕನ್ನು ಪಡೆದುಕೊಂಡಿದ್ದು, ಬೇಸಿಗೆಗೆ ಚಿತ್ರವನ್ನು ಬಿಡುಗಡೆ ಮಾಡಲಿದೆ.
ಟ್ವಿನ್-೨ ಹೆಸರನ ಮೂಲಕ ಜಪಾನಿನಾದ್ಯಂತ ಎಲ್ಲಾ ಚಿತ್ರಮಂದಿರಗಳಲ್ಲಿ ಬೇಸಿಗೆಯಲ್ಲಿ ಸಲಾರ್ ಚಿತ್ರ ಬಿಡುಗಡೆಯಾಗಲಿದೆ. ಎಂದು ಚತ್ರ ತಂಡ ಶನಿವಾರ ಎಕ್ಸ್ ನ ಸಲಾರ್ ಅಧಿಕೃತ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
ಜೊತೆಗೆ ಮಾರ್ಚ್ ಏಳರಂದು ಲ್ಯಾಟಿನ್ ಅಮೇರಿಕಾದಲ್ಲಿ ಸ್ಪ್ಯಾನಿಷ್ ಭಾಷೆಯಲ್ಲಿ ಸಲಾರ್ ತೆರೆಕಾಣಲಿದೆ.
ಪ್ರಭಾಸ್, ಪೃಥ್ವಿರಾಜ್ ನಾಯಕರಾಗಿ ನಟಿಸಿರುವ ಸಲಾರ್ ಚಿತ್ರ ೨೦೨೩ರ ಡಿಸೆಂಬರ್ ೨೨ ರಂದು ದೇಶಾದ್ಯಂತ ತೆಲುಗು, ಕನ್ನಡ, ಮಲಯಾಳಂ, ತಮಿಳು ಮತ್ತು ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಿತ್ತು. ಮತ್ತು ಈ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ೬೫೦ ಕೋಟಿ ರೂ ಗಳಿಕೆ ಕಂಡು ಮುನ್ನುಗ್ಗುತ್ತಿದೆ.
ನಾಯಕಿಯಾಗಿ ಶ್ರುತಿ ಹಾಸನ್, ಜಗಪತಿ ಬಾಬು, ಈಶ್ವರಿ ರಾವ್, ಶ್ರೀಯಾ ರೆಡ್ಡಿ ಸೇರಿದಂತೆ ಹಲವು ನಟ-ನಟಿಯರ ದಂಡೇ ಚಿತ್ರ ತಂಡದಲ್ಲಿದೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…