Mysore
20
overcast clouds

Social Media

ಭಾನುವಾರ, 19 ಜನವರಿ 2025
Light
Dark

ಪ್ರಭಾಸ್ ನಟನೆ ‘ಸಲಾರ್’ ರಿಲೀಸ್ ಡೇಟ್ ಫಿಕ್ಸ್.!

ಪ್ರಭಾಸ್‌ ನಟನೆಯ ‘ಸಲಾರ್‌’ ಚಿತ್ರ ಬಿಡುಗಡೆಗೆ ಹೊಂಬಾಳೆ ಫಿಲ್ಮ್ಸ್‌ ಹೊಸ ಮುಹೂರ್ತ ನಿಗದಿ ಮಾಡಿದೆ.

ಚಿತ್ರವನ್ನಿ ಡಿಸೆಂಬರ್ 22 ರಂದು ವಿಶ್ವದಾದ್ಯಂತ ಬಿಡುಗಡೆ ಮಾಡುವುದಾಗಿ ಚಿತ್ರ ತಂಡ ಘೋಷಣೆ ಮಾಡಿದೆ. ಅಲ್ಲದೆ, ಸಲಾರ್‌ನ ಅಧಿಕೃತ ಟ್ರೇಲರ್ ಪ್ರಭಾಸ್ ಅವರ ಹುಟ್ಟುಹಬ್ಬದಂದು ಅಂದರೆ ಅಕ್ಟೋಬರ್ 23 ರಂದು ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.

ಈ ಹಿಂದೆ ಸೆ.28ರಂದು ಸಿನಿಮಾ ಬಿಡುಗಡೆಗೆ ದಿನಾಂಕ ನಿಗದಿಯಾಗಿತ್ತು. ಕಾರಣಾಂತರಗಳಿಂದ ಬಿಡುಗಡೆ ಮುಂದಕ್ಕೆ ಹೋಗಿತ್ತು. ಜುಲೈ 6 ರಂದು ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿತ್ತು.

ಕೆಜಿಫ್ ನಿರ್ದೇಶಕ ಪ್ರಶಾಂತ್‌ ನೀಲ್‌ ಆ್ಯಕ್ಷನ್‌, ಕಟ್‌ ಹೇಳಿರುವ ‘ಸಲಾರ್‌’, ‘ಕೆ.ಜಿ.ಎಫ್‌.’ನಂತೆ ಎರಡು ಭಾಗಗಳಲ್ಲಿ ತೆರೆಕಾಣುತ್ತಿದೆ. ಸಿನಿಮಾದ ಮೊದಲ ಭಾಗಕ್ಕೆ ‘ಸೀಸ್‌ ಫೈರ್‌’ ಎಂಬ ಅಡಿಬರಹವಿದೆ. ಹೊಂಬಾಳೆ ಫಿಲ್ಮ್ಸ್‌ನಡಿ ನಿರ್ಮಾಪಕ ವಿಜಯ್ ಕಿರಗಂದೂರು ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ಭುವನ್ ಗೌಡ ಅವರ ಛಾಯಾಗ್ರಹಣ, ಉಜ್ವಲ್ ಕುಲಕರ್ಣಿ ಸಂಕಲನ ಮತ್ತು ಶಿವಕುಮಾರ್ ಮತ್ತು ವೆಂಕಟಾಚಲಪತಿ ಅವರ ನಿರ್ಮಾಣ ವಿನ್ಯಾಸವಿರುವ ಈ ಚಿತ್ರಕ್ಕೆ ರವಿ ಬಸ್ರೂರ್ ಸಂಗೀತ ಸಂಯೋಜಕರಾಗಿದ್ದಾರೆ.

ಚಿತ್ರದಲ್ಲಿ ಪ್ರಭಾಸ್ ಜೊತೆಗೆ ಸಲಾರ್, ಶ್ರುತಿ ಹಾಸನ್, ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಟಿನ್ನು ಆನಂದ್, ಶ್ರೀಯಾ ರೆಡ್ಡಿ, ಮತ್ತು ಪ್ರಮೋದ್ ಕೂಡ ನಟಿಸಿದ್ದಾರೆ.

ಸಲಾರ್ ಕನ್ನಡ ಮತ್ತು ತೆಲುಗು ಜೊತೆಗೆ ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲೂ ಬಿಡುಗಡೆಯಾಗಲಿದೆ. ಶಾರುಖ್ ಖಾನ್-ರಾಜ್‌ಕುಮಾರ್ ಹಿರಾನಿ ಚಿತ್ರ ಡುಂಕಿ ಚಿತ್ರವನ್ನೂ ಇದೇ ದಿನದಂದೇ ಬಿಡುಗಡೆ ಮಾಡಲಾಗುತ್ತಿದ್ದು, ಎರಡು ಚಿತ್ರಗಳ ನಡುವೆ ಪೈಪೋಟಿ ಎದುರಾಗಲಿದೆ ಎನ್ನಲಾಗುತ್ತಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ