Mysore
29
broken clouds

Social Media

ಸೋಮವಾರ, 08 ಡಿಸೆಂಬರ್ 2025
Light
Dark

Salaar OTT: ಸಲಾರ್‌ ಒಟಿಟಿ ಬಿಡುಗಡೆ ದಿನಾಂಕ ಪ್ರಕಟ; ಬೇಸರಗೊಂಡ ಫ್ಯಾನ್ಸ್‌

ಕನ್ನಡದ ಹೊಂಬಾಳೆ ಫಿಲ್ಮ್ಸ್‌ ನಿರ್ಮಾಣದ ಮೊದಲ ತೆಲುಗು ಚಿತ್ರ ʼಸಲಾರ್‌ ಪಾರ್ಟ್‌ 1 ಸೀಸ್‌ಫೈರ್‌ʼ ಕಳೆದ ಡಿಸೆಂಬರ್‌ 22ರಂದು ಬಿಡುಗಡೆಯಾಗಿ ಬಾಕ್ಸ್‌ ಆಫೀಸ್‌ ಕೊಳ್ಳೆ ಹೊಡೆದು 700 ಕೋಟಿಗೂ ಹೆಚ್ಚು ಗಳಿಕೆ ಮಾಡಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.

ಕೆಜಿಎಫ್‌ ಚಲನಚಿತ್ರ ಸರಣಿ ಮೂಲಕ ದೇಶವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದ ಪ್ರಶಾಂತ್‌ ನೀಲ್‌ ತಮ್ಮ ಪ್ರಥಮ ಚಿತ್ರ ಉಗ್ರಂ ಕಥೆಯನ್ನೇ ವಿಭಿನ್ನವಾಗಿ ಸಲಾರ್‌ನಲ್ಲಿ ಹೇಳಿ ಭೇಷ್‌ ಎನಿಸಿಕೊಂಡಿದ್ದು, ಚಿತ್ರ ಇದೀಗ ಒಟಿಟಿಗೆ ಲಗ್ಗೆ ಇಡಲು ಸಜ್ಜಾಗಿದೆ.

ಚಿತ್ರಮಂದಿರಗಳಲ್ಲಿ ಕೋಟಿ ಕೋಟಿ ಕೊಳ್ಳೆ ಹೊಡೆದ ಸಲಾರ್‌ ನಾಳೆಯಿಂದ ( ಜನವರಿ 20 ) ನೆಟ್‌ಫ್ಲಿಕ್ಸ್‌ನಲ್ಲಿ ವೀಕ್ಷಿಸಲು ಲಭ್ಯವಿರಲಿದೆ. ತೆಲುಗು, ಕನ್ನಡ, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಚಿತ್ರ ಲಭ್ಯವಿರಲಿದೆ. ಈ ಕುರಿತು ಹೊಂಬಾಳೆ ಫಿಲ್ಮ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದು, ಚಿತ್ರ ಇನ್ನೂ ಸಹ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿರುವಾಗಲೇ ಒಟಿಟಿಯಲ್ಲಿ ಬಿಡುಗಡೆ ಮಾಡುವ ಅಗತ್ಯವಾದರೂ ಏನಿತ್ತು ಎಂದು ಪ್ರಭಾಸ್‌ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!