ಕನ್ನಡದ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ಮೊದಲ ತೆಲುಗು ಚಿತ್ರ ʼಸಲಾರ್ ಪಾರ್ಟ್ 1 ಸೀಸ್‌ಫೈರ್ʼ ಕಳೆದ ಡಿಸೆಂಬರ್ 22ರಂದು ಬಿಡುಗಡೆಯಾಗಿ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದು 700 ಕೋಟಿಗೂ ಹೆಚ್ಚು ಗಳಿಕೆ ಮಾಡಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ.
ಕೆಜಿಎಫ್ ಚಲನಚಿತ್ರ ಸರಣಿ ಮೂಲಕ ದೇಶವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದ ಪ್ರಶಾಂತ್ ನೀಲ್ ತಮ್ಮ ಪ್ರಥಮ ಚಿತ್ರ ಉಗ್ರಂ ಕಥೆಯನ್ನೇ ವಿಭಿನ್ನವಾಗಿ ಸಲಾರ್‌ನಲ್ಲಿ ಹೇಳಿ ಭೇಷ್ ಎನಿಸಿಕೊಂಡಿದ್ದು, ಚಿತ್ರ ಇದೀಗ ಒಟಿಟಿಗೆ ಲಗ್ಗೆ ಇಡಲು ಸಜ್ಜಾಗಿದೆ.
ಚಿತ್ರಮಂದಿರಗಳಲ್ಲಿ ಕೋಟಿ ಕೋಟಿ ಕೊಳ್ಳೆ ಹೊಡೆದ ಸಲಾರ್ ನಾಳೆಯಿಂದ ( ಜನವರಿ 20 ) ನೆಟ್‌ಫ್ಲಿಕ್ಸ್‌ನಲ್ಲಿ ವೀಕ್ಷಿಸಲು ಲಭ್ಯವಿರಲಿದೆ. ತೆಲುಗು, ಕನ್ನಡ, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಚಿತ್ರ ಲಭ್ಯವಿರಲಿದೆ. ಈ ಕುರಿತು ಹೊಂಬಾಳೆ ಫಿಲ್ಮ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಚಿತ್ರ ಇನ್ನೂ ಸಹ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿರುವಾಗಲೇ ಒಟಿಟಿಯಲ್ಲಿ ಬಿಡುಗಡೆ ಮಾಡುವ ಅಗತ್ಯವಾದರೂ ಏನಿತ್ತು ಎಂದು ಪ್ರಭಾಸ್ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…