ದುಬಾರಿ ಬಜೆಟ್ ನಲ್ಲಿ ರೆಡಿ ಆಗುತ್ತಿರುವ ಪ್ರಾಜೆಕ್ಟ್ ಕೆ ಸಿನಿಮಾದ ಪ್ರಭಾಸ್ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಸಿನಿಮಾ ತಂಡ ಬಿಲ್ಡ್ ಅಪ್ ಕೊಟ್ಟಂತೆ, ಅಚ್ಚರಿಯೊಂದು ಅಭಿಮಾನಿಗಳಿಗೆ ಕಾದಿದೆ ಎಂದೇ ಹೇಳಲಾಗಿತ್ತು. ಆದರೆ, ಯಾವುದೇ ಅಚ್ಚರಿ ಮೂಡಿಸದೇ ನಿರಾಸೆ ಮಾಡಿದೆ ಚಿತ್ರತಂಡ. ಪ್ರಭಾಸ್ ಅವರ ಮಾಮೂಲು ಲುಕ್ ಇರುವಂತಹ ಫಸ್ಟ್ ಲುಕ್ ಅದಾಗಿದೆ.
ಈ ಸಿನಿಮಾದ ಶೂಟಿಂಗ್ ಈಗಾಗಲೇ ಶುರುವಾಗಿದ್ದು, ಪ್ರಭಾಸ್ ಜೊತೆ ಕಮಲ್ ಹಾಸನ್, ರಾಣಾ ದಗ್ಗುಬಾಟಿ ಈಗಾಗಲೇ ಅಮೆರಿಕಾಗೆ ಪ್ರವಾಸ ಬೆಳೆಸಿದ್ದಾರೆ. ಸುಮಾರು 600 ಕೋಟಿಗೂ ಅಧಿಕ ಬಜೆಟ್ ನಲ್ಲಿ ಈ ಸಿನಿಮಾ ತಯಾರಾಗಲಿದ್ದು, ಅನೇಕ ದಿಗ್ಗಜ ಕಲಾವಿದರು ಈ ಚಿತ್ರಕ್ಕಾಗಿ ಒಂದಾಗಿದ್ದಾರೆ. ಇಷ್ಟೊಂದು ನಿರೀಕ್ಷೆ ಇಟ್ಟುಕೊಂಡಿರುವ ಸಿನಿಮಾದ ಫಸ್ಟ್ ಲುಕ್ ಬೇರೆ ಹಂತದಲ್ಲಿ ಇರಬೇಕಿತ್ತು ಎಂದು ಅಭಿಮಾನಿಗಳು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
ಪಠಾಣ್ ಚಿತ್ರದ ಸೂಪರ್ ಸಕ್ಸಸ್‌ನಲ್ಲಿರುವ ದೀಪಿಕಾ ಪಡುಕೋಣೆ ಈಗ ಪ್ರಭಾಸ್ ನಟನೆಯ ಪ್ರಾಜೆಕ್ಟ್ ಕೆ ಸಿನಿಮಾಗೆ ಭರ್ಜರಿ ಸಂಭಾವನೆ ಪಡೆದಿದ್ದಾರೆ. ಪಠಾಣ್ ಸಿನಿಮಾ 1000 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಹೊಸ ದಾಖಲೆ ಬರೆದಿದೆ. ಹಾಗಾಗಿ ಪ್ರಾಜೆಕ್ಟ್ ಕೆ ಚಿತ್ರಕ್ಕೆ ದುಬಾರಿ ಸಂಭಾವನೆಯನ್ನೇ ನಟಿ ಪಡೆದಿದ್ದಾರೆ.
ಈ ಸಿನಿಮಾಗಾಗಿ ಅವರು ದೊಡ್ಡ ಕಾಲ್‌ಶೀಟ್ ನೀಡಿದ್ದಾರೆ. ಹಲವು ದಿನಗಳನ್ನ ಈ ಚಿತ್ರಕ್ಕಾಗಿ ಮುಡಿಪಿಟ್ಟಿದ್ದಾರೆ. ನಾಗ್ ಅಶ್ವೀನ್ ನಿರ್ದೇಶನದ ಈ ಚಿತ್ರಕ್ಕೆ 10 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಕೆಲ ಸ್ಟಾರ್ ಹೀರೋಗಳು ಕೂಡ ಇಷ್ಟು ಸಂಭಾವನೆ ಪಡೆಯಲ್ಲ ಅನ್ನೋದು ಗಮಿನಿಸಬೇಕಾದ ವಿಷಯ. ಪ್ರಭಾಸ್ ಜೊತೆಗಿನ ಈ ಚಿತ್ರ ಮುಂದಿನ ವರ್ಷ ತೆರೆಗೆ ಅಪ್ಪಳಿಸಲಿದೆ.
ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…
ಬೆಂಗಳೂರು: ಶಾಸಕರು ಐಪಿಎಲ್ ಟಿಕೆಟ್ ಕೇಳೋದು ತಪ್ಪು. ಐಪಿಎಲ್ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್ ತಗೋಳಿ ಎಂದು ಮಾಜಿ…
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ…
ಕುಶಾಲನಗರ: ಹಿಟ್ ಅಂಡ್ ರನ್‌ಗೆ ಯುವಕ ಬಲಿಯಾಗಿರುವ ಘಟನೆ ಬೈಲಕುಪ್ಪೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಾರು, ಆಟೋ ಹಾಗೂ ಬೈಕ್…
ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ತಕ್ಷಣಕ್ಕೆ ಡೀಸೆಲ್ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್-ಇಸ್ರೇಲ್ ಸಂಘರ್ಷ…