Mysore
28
overcast clouds

Social Media

ಬುಧವಾರ, 09 ಜುಲೈ 2025
Light
Dark

ಬೆಂಗಳೂರಿನ ರಿಂಗ್ ರಸ್ತೆಗೆ ಪುನೀತ್ ಹೆಸರು : ಸಚಿವ ಆರ್.ಅಶೋಕ್

ಬೆಂಗಳೂರು : ಪವರ್‌ ಸ್ಟಾರ್‌ ಪುನೀತ್ ರಾಜಕುಮಾರ್  ಹೆಸರನ್ನು ಬೆಂಗಳೂರಿನ ರಿಂಗ್ ರಸ್ತೆಗೆ   ಇಡಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪುನೀತ್ ಅವರಿಗೆ ಈಗಾಗಲೇ ಸರಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಾಗಿದೆ. ಅವರ ಸಾಮಾಜಿಕ ಕೆಲಸಗಳನ್ನು ಗುರುತಿಸಿ ಹೆಚ್ಚೆಚ್ಚು ಗೌರವವನ್ನು ನೀಡಲಾಗುತ್ತಿದೆ. ಈ ಸಲ ಬೆಂಗಳೂರಿನ ರಿಂಗ್ ರಸ್ತೆಗೆ ಅವರ ಹೆಸರನ್ನು ಇಡಲು ತೀರ್ಮಾನಿಸಲಾಗಿದೆ’ ಎಂದರು.

ಬೆಂಗಳೂರಿನ ಮೈಸೂರು ರಸ್ತೆಯಿಂದ ನಾಯಂಡಳ್ಳಿ ಜಂಕ್ಷನ್ ಬನ್ನೇರುಘಟ್ಟ ರಸ್ತೆವರೆಗೂ ಪುನೀತ್ ರಾಜ್ ಕುಮಾರ್ ರಸ್ತೆ ಅಂತ ನಾಮಕರಣ ಮಾಡುತ್ತಿದ್ದು, 12 ಕಿಲೋ ಮೀಟರ್ ರಸ್ತೆಯ ಡಬಲ್ ರೋಡ್ ಅದಾಗಿದೆ. ಅಷ್ಟು ಉದ್ದದ ರಸ್ತೆಗೆ ಈವರೆಗೂ ಯಾರ ಹೆಸರನ್ನೂ ಇಟ್ಟಿಲ್ಲ ಎನ್ನುವುದು ವಿಶೇಷ. ನಾಳೆ ಬೆಂಗಳೂರಿನ ಪದ್ಮನಾಭನಗರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಜೆ 6 ಗಂಟೆಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಸರಿನ ನಾಮಫಲಕ ಉದ್ಘಾಟನೆ ಮಾಡಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್,  ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಡಾ.ರಾಜ್ ಕುಟುಂಬ ಭಾಗಿಯಾಗಲಿದೆ. ಅಲ್ಲದೇ, ಸಿನಿಮಾ ರಂಗದ ಅನೇಕ ಗಣ್ಯರು ಉಪಸ್ಥಿತಿ ಇರಲಿದ್ದಾರೆ ಎಂದು ತಿಳಿಸಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!