ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹೆಸರನ್ನು ಬೆಂಗಳೂರಿನ ರಿಂಗ್ ರಸ್ತೆಗೆ ಇಡಲಾಗುತ್ತಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪುನೀತ್ ಅವರಿಗೆ ಈಗಾಗಲೇ ಸರಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಾಗಿದೆ. ಅವರ ಸಾಮಾಜಿಕ ಕೆಲಸಗಳನ್ನು ಗುರುತಿಸಿ ಹೆಚ್ಚೆಚ್ಚು ಗೌರವವನ್ನು ನೀಡಲಾಗುತ್ತಿದೆ. ಈ ಸಲ ಬೆಂಗಳೂರಿನ ರಿಂಗ್ ರಸ್ತೆಗೆ ಅವರ ಹೆಸರನ್ನು ಇಡಲು ತೀರ್ಮಾನಿಸಲಾಗಿದೆ’ ಎಂದರು.
ಬೆಂಗಳೂರಿನ ಮೈಸೂರು ರಸ್ತೆಯಿಂದ ನಾಯಂಡಳ್ಳಿ ಜಂಕ್ಷನ್ ಬನ್ನೇರುಘಟ್ಟ ರಸ್ತೆವರೆಗೂ ಪುನೀತ್ ರಾಜ್ ಕುಮಾರ್ ರಸ್ತೆ ಅಂತ ನಾಮಕರಣ ಮಾಡುತ್ತಿದ್ದು, 12 ಕಿಲೋ ಮೀಟರ್ ರಸ್ತೆಯ ಡಬಲ್ ರೋಡ್ ಅದಾಗಿದೆ. ಅಷ್ಟು ಉದ್ದದ ರಸ್ತೆಗೆ ಈವರೆಗೂ ಯಾರ ಹೆಸರನ್ನೂ ಇಟ್ಟಿಲ್ಲ ಎನ್ನುವುದು ವಿಶೇಷ. ನಾಳೆ ಬೆಂಗಳೂರಿನ ಪದ್ಮನಾಭನಗರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಜೆ 6 ಗಂಟೆಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಸರಿನ ನಾಮಫಲಕ ಉದ್ಘಾಟನೆ ಮಾಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಡಾ.ರಾಜ್ ಕುಟುಂಬ ಭಾಗಿಯಾಗಲಿದೆ. ಅಲ್ಲದೇ, ಸಿನಿಮಾ ರಂಗದ ಅನೇಕ ಗಣ್ಯರು ಉಪಸ್ಥಿತಿ ಇರಲಿದ್ದಾರೆ ಎಂದು ತಿಳಿಸಲಾಗಿದೆ.
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…